ನವದೆಹಲಿ: ಪೊಲೀಸ್ ವೇಷದಲ್ಲಿದ್ದ ಇಬ್ಬರು ಕಾಮುಕರು ಬಂದು ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ.
ಈ ಘಟನೆ ಭಾನುವಾರ ರಾತ್ರಿ ದೆಹಲಿಯ ಕನ್ಜಾವಾಲ ಭಾಗದಲ್ಲಿ ಘಟನೆ ನಡೆದಿದೆ. ಪೊಲೀಸರಂತೆ ಬಂದಂತಹ ಕಾಮುಕರು ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ಆಕೆಯ ಸಂಬಂಧಿ ಅಪ್ರಾಪ್ತೆಗೂ ಕಿರುಕುಳ ನೀಡಿದ್ದಾರೆ.
ಸದ್ಯಕ್ಕೆ ಯುವತಿ ಹಾಗೂ ಸಂಬಂಧಿ ಕನ್ಜಾವಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರಂತೆ ಪೋಸ್ ಕೊಟ್ಟು ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾನುವಾರ ರಾತ್ರಿ ಸಂಬಂಧಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ಯುವಕರು ಪೊಲೀಸ್ ವೇಷದಲ್ಲಿ ಬಂದು ನನ್ನೊಂದಿಗೆ ಮಾತನಾಡುತ್ತಿದ್ದರು. ಬಳಿಕ ಇಬ್ಬರಲ್ಲಿ ಒಬ್ಬನು ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇನ್ನೊಬ್ಬ ನನ್ನ ಜೊತೆ ಇದ್ದ ಅಪ್ರಾಪ್ತ ಹುಡುಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದನು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ.
ಈ ಪ್ರಕರಣ ಸಂಬಂಧ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆಂದು ಒಳಡಿಸಲಾಗಿದೆ. ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಲಾಗಿದೆ. ಸದ್ಯಕ್ಕೆ ಪೊಲೀಸರ ಸೋಗಿನಲ್ಲಿದ್ದ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಡಿಸಿಪಿ ಸೆಜು ಕುರುವಿಲ್ಲಾ ಅವರು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv