ಇಂದು ರಾಜ್ಯದ 5 ಕ್ಷೇತ್ರಗಳಲ್ಲಿ ‘ಮಿನಿ’ ಫೈಟ್

Public TV
1 Min Read
Gundlupet nanjangud by election 10

ಬೆಂಗಳೂರು: 2019ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಕರ್ನಾಟಕದ ಎರಡು ವಿಧಾನಸಭಾ ಮತ್ತು ಮೂರು ಲೋಕಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಲೋಕಸಭಾ ಕ್ಷೇತ್ರಗಳಾದ ಬಳ್ಳಾರಿ, ಶಿವಮೊಗ್ಗ, ಮಂಡ್ಯ ವಿಧಾನಸಭಾ ಕ್ಷೇತ್ರಗಳಾದ ಜಮಖಂಡಿ ಮತ್ತು ರಾಮನಗರಗಳಿಗೆ ಚುನಾವಣೆ ನಡೆಯುತ್ತಿದೆ.

ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದೆ. ಚುನಾವಣೆ ನಡೆಯಲಿರುವ ಐದು ಕ್ಷೇತ್ರಗಳಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. 5 ಕ್ಷೇತ್ರಗಳಲ್ಲಿ ಒಟ್ಟು 6,453 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದ್ದು, 1502 ಸೂಕ್ಷ್ಮ ಮತಗಟ್ಟೆ, ಭದ್ರತೆಗಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಇದೇ ಮೊದಲ ಬಾರಿಗೆ ವಿಕಲಾಂಗ ಚೇತನರಿಗೆ ಮತಗಟ್ಟೆಗೆ ಕರೆದೊಯ್ಯುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. 9,822 ಮತಯಂತ್ರಗಳ ಜೊತೆಗೆ 8,922 ವಿವಿ ಪ್ಯಾಟ್‍ಗಳ ಬಳಕೆ ಆಗಲಿದೆ. 5 ಕ್ಷೇತ್ರಗಳಲ್ಲಿ ಮಹಿಳೆಯರಿಗೆ 57 ಪಿಂಕ್ ಮತಕೇಂದ್ರ ತೆರೆಯಲಾಗಿದೆ. ಬಳ್ಳಾರಿ, ಶಿವಮೊಗ್ಗ, ಮಂಡ್ಯ, ರಾಮನಗರ, ಜಮಖಂಡಿ ಮತಗಟ್ಟೆಗಳಲ್ಲಿ ಬಿಗಿಬಂದೋಬಸ್ತ್ ಕೈಗೊಳ್ಳಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *