ಮಂಗಳೂರು: ಮಾಜಿ ಸಚಿವ, ಗಣಿ ಧಣಿ ಜನಾರ್ದನ ರೆಡ್ಡಿಗೂ ನಮಗೂ ಏನೂ ಸಂಬಂಧವಿಲ್ಲ. ಅವರು ನಮ್ಮ ಪಕ್ಷದವರೂ ಅಲ್ಲ. ಹಾಗಾಗಿ ಆ ವಿಷಯದ ಕುರಿತು ಯಾವುದೇ ಹೇಳಿಕೆಯನ್ನು ನೀಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಶಬರಿಮಲೆ ಉಳಿಸಿ ರಥಯಾತ್ರೆಯಲ್ಲಿ ಪಾಲ್ಗೊಳ್ಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಯಡಿಯೂರಪ್ಪನವರು, ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಅಷ್ಟೇ ನನಗೆ ಗೊತ್ತು. ಜನಾರ್ದನ ರೆಡ್ಡಿ ಎಲ್ಲಿದ್ದಾರೆ ಎಂಬುದರ ಬಗ್ಗೆಯೂ ನನಗೆ ಗೊತ್ತಿಲ್ಲ. ಅಧಿಕಾರಿಗಳು ಕಾನೂನಿನ ಪ್ರಕಾರ ಕ್ರಮಕೈಗೊಳ್ಳುತ್ತಾರೆ ಎಂದು ಹೇಳುವ ಮೂಲಕ ಜನಾರ್ದನ ರೆಡ್ಡಿ ಅವರಿಂದ ಅಂತರವನ್ನು ಕಾಯ್ದುಕೊಂಡರು.
ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಖಡಕ್ ಸಂದೇಶ ರವಾನಿಸಿದ್ದು, ಯಾರು ಜನಾರ್ದನ ರೆಡ್ಡಿಯ ಪರ-ವಿರೋಧವಾಗಿ ಹೇಳಿಕೆಯನ್ನು ನೀಡಕೂಡದು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜನಾರ್ದನ ರೆಡ್ಡಿಗೂ ಮತ್ತು ಬಿಜೆಪಿಗೆ ಯಾವುದೇ ಸಂಬಂಧವಿಲ್ಲ ಅಂತಾ ಹೇಳಿದ್ದೇವೆ. ಸದ್ಯ ಎಲ್ಲ ನಾಯಕರು ಇದೇ ನಿಲುವನ್ನು ಸಮರ್ಥಿಸಿಕೊಂಡು ಹೋಗಬೇಕು ಎಂದು ಸೂಚಿಸಿದೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv