ರಾಕಿಂಗ್ ಸ್ಟಾರ್ ಗೆ ಶುಭಾಶಯ ಕೋರಿದ ಪವರ್ ಸ್ಟಾರ್

Public TV
2 Min Read
yash and puneeth rajkumar collage

ಬೆಂಗಳೂರು: ರಾಕಿಂಗ್ ಸ್ಟಾರ್ ಅಭಿನಯದ ಕೆಜಿಎಫ್ ಸಿನಿಮಾ ಭಾರತದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಳ್ಳುವ ಮೂಲಕ ದೇಶಾದ್ಯಂತ ಸಂಚಲನ ಮೂಡಲಾರಂಭಿಸಿದೆ. ಸದ್ಯ ಈ ಚಿತ್ರಕ್ಕೆ ಈಗ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಶುಭ ಕೋರಿದ್ದಾರೆ.

“ಕೆ.ಜಿ.ಎಫ್ ಚಿತ್ರದ ಟ್ರೇಲರ್ ಎಲ್ಲ ಭಾಷೆಯಲ್ಲೂ 20 ಲಕ್ಷಕ್ಕೂ ಹೆಚ್ಚು ವ್ಯೂ ಪಡೆದಿದ್ದಕ್ಕೆ ಯಶ್, ವಿಜಯ್ ಸರ್, ಪ್ರಶಾಂತ್ ನೀಲ್ ಹಾಗೂ ಇಡೀ ಚಿತ್ರತಂಡಕ್ಕೆ ನನ್ನ ಶುಭಾಶಯಗಳು. ಕೆಜಿಎಫ್ ಚಿತ್ರದ ಬಿಡುಗಡೆಗೂ ನನ್ನ ಶುಭಾಶಯಗಳು” ಎಂದು ಪುನೀತ್ ರಾಜ್‍ಕುಮಾರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಕೆಜಿಎಫ್ ಚಿತ್ರಕ್ಕೆ ಶುಭ ಕೋರಿದ ಜೊತೆಗೆ ಪುನೀತ್ ‘ನಟಸಾರ್ವಭೌಮ’ ಚಿತ್ರದ ಡಬ್ಬಿಂಗ್ ಮುಗಿಸಲಾಗಿದೆ ಎಂದು ಹೇಳಿ ಒಂದು ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ. ಪುನೀತ್ ಇದೂವರೆಗೆ ಒಟ್ಟು ನಾಲ್ಕು ಟ್ವೀಟ್ ಗಳನ್ನು ಮಾತ್ರ ಮಾಡಿದ್ದು, 20 ಸಾವಿರ ಮಂದಿ ಅವರನ್ನು ಫಾಲೋ ಮಾಡುತ್ತಿದ್ದಾರೆ. ಇದನ್ನೂ ಓದಿ: ಶಾರೂಖ್ ಖಾನ್ ನಟನೆಯ ಝೀರೋ ಸಿನಿಮಾ ಹಿಂದಿಕ್ಕಿದ ಕೆಜಿಎಫ್

ಕೆಜಿಎಫ್ ಚಿತ್ರದ ಜಬರ್ದಸ್ತ್ ಟ್ರೈಲರ್ ಕಂಡು ಕಿಚ್ಚ ಸುದೀಪ್ ಕೂಡ ಥ್ರಿಲ್ ಆಗಿದ್ದಾರೆ. ಈ ಬಗ್ಗೆ ಮನಸಾರೆ ಹೊಗಳಿಕೆಯ ಮಾತಾಡಿ ಚಿತ್ರಕ್ಕೆ ಶುಭ ಕೋರಿದ್ದಾರೆ. ಈ ಟ್ರೈಲರ್ ಲಾವಾರಸ ಉಕ್ಕಿ ಬಂದಂತಿಂದೆ ಎಂದಿರೋ ಕಿಚ್ಚ ಸುದೀಪ್, ನಿರ್ದೇಶಕ ಪ್ರಶಾಂತ್ ರಾಜ್ ಈ ಚಿತ್ರವನ್ನು ಬೇರೆಯದ್ದೇ ಹಂತಕ್ಕೆ ಕೊಂಡೊಯ್ದಿದ್ದಾರೆ ಅಂದಿದ್ದಾರೆ. ಒಟ್ಟಾರೆಯಾಗಿ ಯಶ್ ಲುಕ್ಕಿಗೆ ಫಿದಾ ಆಗಿರೋದಾಗಿಯೂ ಟ್ವಿಟ್ಟರ್ ಮೂಲಕ ಬರೆದುಕೊಂಡಿದ್ದಾರೆ.

ಭೂಗತ ಲೋಕದ ಕರಾಳ ಸತ್ಯವನ್ನು ಕೆಜಿಎಫ್ ತೋರಿಸಲಿದೆ ಎಂಬುವುದನ್ನು ಟ್ರೇಲರ್ ಸಾರಿ ಸಾರಿ ಹೇಳುತ್ತಿದೆ. ಓರ್ವ ಕಥಾನಾಯಕನ ಜೀವನದ ಏರುಪೇರುಗಳನ್ನು ತುಂಬಾ ಸ್ಪಷ್ಟವಾಗಿ ಪ್ರಶಾಂತ್ ನೀಲ್ ತೋರಿಸುವ ಪ್ರಯತ್ನ ಟ್ರೇಲರ್ ನಲ್ಲಿ ಕಾಣುತ್ತಿದೆ. ಇನ್ನು ಟೀಸರ್ ಆರಂಭದಲ್ಲಿ ಕೇಳಿಬರುವ ಹಿನ್ನೆಲೆ ಧ್ವನಿ ಟ್ರೇಲರ್ ನಲ್ಲಿ ನೋಡುಗರಲ್ಲಿ ರೋಮ ರೋಮಗಳಲ್ಲಿ ರೋಮಾಂಚನ ಮಾಡುವಲ್ಲಿ ಯಶ್ವಸಿಯಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article
Leave a Comment

Leave a Reply

Your email address will not be published. Required fields are marked *