ಕರಾವಳಿ ಬಿಜೆಪಿಯ ಕೋಮುವಾದದ ಪ್ರಯೋಗ ಶಾಲೆನಾ?

Public TV
2 Min Read
DVS SIDDU

-ಟ್ವಿಟ್ಟರ್  ನಲ್ಲಿ ಸಿದ್ದು-ಡಿವಿಎಸ್ ಜಟಾಪಟಿ

ಬೆಂಗಳೂರು: ಕರಾವಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇತ್ತೀಚೆಗೆ ಭೇಟಿ ನೀಡಿದ್ದು, ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಮುಖ್ಯಮಂತ್ರಿಯವರು ಮಾಡಿದ ಟ್ವೀಟ್ ಗೆ ಕೇಂದ್ರ ಸಚಿವ ಸದಾನಂದ ಗೌಡ ಅವರು ರೀಟ್ವೀಟ್ ಮಾಡುವ ಮೂಲಕ ಟಾಂಗ್ ನೀಡಿದ್ದಾರೆ. ಡಿವಿಎಸ್ ಅವರು ಟ್ವೀಟ್ ಮಾಡುತ್ತಿದ್ದಂತೆಯೇ ಸಿದ್ದರಾಮಯ್ಯ ಅವರು ಸದಾನಂದ ಗೌಡರನ್ನು ಪ್ರಶ್ನೆ ಮಾಡಿದ್ದಾರೆ.

ಸಿದ್ದರಾಮಯ್ಯ ಹೇಳಿದ್ದೇನು?
ಕರ್ನಾಟಕದ ಕರಾವಳಿಯನ್ನು ಬಿಜೆಪಿ ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದೆ, ಹಾಗಾಗಿ ಬಿಜೆಪಿ ರಾಷ್ಟ್ರೀಯ ನಾಯಕರು ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ. ಅಮಿತ್ ಶಾ ಮತ್ತು ನರೇಂದ್ರ ಮೋದಿ ಕರ್ನಾಟಕದಲ್ಲಿಯೇ ಬಂದು ಮನೆ ಮಾಡಿದ್ರೂ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ರಾಜ್ಯದ ಜನ ಬೆಂಬಲ ನೀಡುವುದಿಲ್ಲ ಅಂತ ಹೇಳಿ ಐಎನ್ ಸಿ ಕರ್ನಾಟಕಕ್ಕೆ ಟ್ಯಾಗ್ ಮಾಡಿದ್ದಾರೆ.

ಡಿವಿಎಸ್ ರೀಟ್ವೀಟ್ ನಲ್ಲೇನಿದೆ?:
ಶ್ರೀಯುತ ಸಿದ್ದರಾಯ್ಯ ಅವರೇ, ಅದೇ ರಿಕಾರ್ಡ್ ಕಂಠಪಾಠ ಮಾಡಿಕೊಂಡು ಎಷ್ಟು ದಿನ ಸುತ್ತಬೇಕು ಅಂತ ಇದ್ದೀರಾ. ಚಾಮುಂಡೇಶ್ವರಿಯ ಮತದಾರರೇ ನಿಮ್ಮನ್ನು ನಂಬಲಿಲ್ಲ. ಇನ್ನು ಕರಾವಳಿಯ ಜನ ನಿಮ್ಮ ಕಂಠಪಾಠ ಒಪ್ತಾರಾ? ಕರಾವಳಿಯ ಯಾಕೆ ಇಡೀ ಕರ್ನಾಟಕದ ಜನರಿಗೆ ತಮ್ಮ ಆಯ್ಕೆ ಗೊತ್ತಿದೆ. ಇನ್ನು ಅಧಿಕಾರ ಹೊಂದಾಣಿಕೆ ನಿಮ್ಮ ಬಹುಮತಕ್ಕೆ ಬಂದದ್ದಲ್ಲ ನೆನಪಿರಲಿ ಅಂತ ಎಚ್ಚರಿಕೆ ನಿಡಿದ್ದಾರೆ.

ಇನ್ನು ಅದೇನೂ ಮನೆ ಮಾಡಿದ್ದ್ರೂ ಅಂದ್ರಲ್ಲ. ನೀವು ಚಾಮುಂಡೇಶ್ವರಿ ಬಿಟ್ಟು ಬಾದಾಮಿಯಲ್ಲಿ ಮನೆ ಮಾಡಿಲ್ವಾ? ಯಾರಾದ್ರೂ ಪ್ರಶ್ನೆ ಮಾಡಿದ್ರಾ? ಕರ್ನಾಟಕದ ಗುತ್ತಿಗೆ ಇನ್ನು ಮತದಾರರಲ್ಲೇ ಇದೆ. ಅದು ನಿಮ್ಮ ಮೈತ್ರಿ ಸರ್ಕಾರಕ್ಕೆ ಯಾರೂ ಬರೆದು ಕೊಟ್ಟಿಲ್ಲ. ಚುನಾವಣೆಯನ್ನು ಎದಿರಿಸೋಣ. ಜನತಾ ನ್ಯಾಯಾಲಯವೇ ದೊಡ್ಡ ಪ್ರಯೋಗ ಶಾಲೆ ಅಂತ ಹೇಳಿದ್ದಾರೆ.

ಡಿವಿಎಸ್ ಎಚ್ಚರಿಕೆ ನಿಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಕೇಂದ್ರ ಸಚಿವರನ್ನು ಪ್ರಶ್ನೆ ಮಾಡುವ ಮೂಲಕ ಕೌಂಟರ್ ಕೊಟ್ಟಿದ್ದಾರೆ. ಶ್ರೀ ಸದಾನಂದಗೌಡರೇ.. ಕರಾವಳಿಯ ಯಾಕೆ ಇಡೀ ಕರ್ನಾಟಕದ ಜನರಿಗೆ ತಮ್ಮ ಆಯ್ಕೆ ಗೊತ್ತಿದೆ..” ಎಂದು ಕರೆಕ್ಟಾಗಿ ಹೇಳಿದ್ದೀರಿ. ನೀವು ಉಡುಪಿ -ಪುತ್ತೂರು ಬಿಟ್ಟು ಬೆಂಗಳೂರಿಗೆ ಬಂದು ಸೇರಿಕೊಂಡಿದ್ದು ಕರಾವಳಿಯವರಿಗೆ ಖಂಡಿತ ಗೊತ್ತಿದೆ. ಜೆಡಿ(ಎಸ್) ಜತೆ ಸೇರ್ಕೊಂಡು ಸರ್ಕಾರ ರಚನೆ ಮಾಡಿದಾಗ ನಿಮ್ಮ ಪಕ್ಷಕ್ಕೆ ಬಹುಮತ ಇತ್ತಾ ಗೌಡ್ರೆ ಅಂತ ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರು ಸರಣಿ ಟ್ವೀಟ್ ಮಾಡುವ ಮೂಲಕ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article
Leave a Comment

Leave a Reply

Your email address will not be published. Required fields are marked *