ಬೆಂಗಳೂರು: ಇತ್ತೀಚೆಗೆ ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರದ ಪೋಸ್ಟರ್ ರಿಲೀಸ್ ಆಗಿತ್ತು. ಈ ಪೋಸ್ಟರ್ ನಲ್ಲಿ ಸುದೀಪ್ ತಮ್ಮ ದೇಹವನ್ನು ಪ್ರರ್ದಶಿಸಿದ್ದಾರೆ. ಸದ್ಯ ಈ ಪೋಸ್ಟರ್ ನೋಡಿ ಕೆಲವರು ಇದು ಸುದೀಪ್ ಅವರ ಫೇಕ್ ಫೋಟೋ ಎಂದು ಹೇಳಲು ಶುರು ಮಾಡಿದ್ದಾರೆ.
ಸದ್ಯ ಈ ಬಗ್ಗೆ ಟ್ವಿಟ್ಟರಿನಲ್ಲಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್ ಅವರು, “ಪೋಸ್ಟರ್ ನಲ್ಲಿರುವುದು ನನ್ನ ನಕಲಿ ದೇಹ ಎನ್ನುವವರಿಗೆ ನಾನು ಏನು ಹೇಳುವುದಿಲ್ಲ. ಬಹುಶಃ ನಾನೇ ಅವರಿಗೆ ಈ ಅಭಿಪ್ರಾಯವನ್ನು ನೀಡಿದ್ದೇನೆ. ಪೈಲ್ವಾನ್ ಚಿತ್ರ ನನಗೆ ಸಾಕಷ್ಟು ಉತ್ಸಾಹ ನೀಡಿದೆ. ಅಲ್ಲದೇ ನಾನು ಈ ಚಿತ್ರದ ಎಲ್ಲ ಪ್ರಕ್ರಿಯೆಯನ್ನು ಎಂಜಾಯ್ ಮಾಡುತ್ತಿದ್ದೇನೆ. ಚಿತ್ರದ ಸ್ಕ್ರಿಪ್ಟ್ ಗಾಗಿ ನಾನು ಜಿಮ್‍ಗೆ ಹೋಗಿದ್ದೇನೆ ಹೊರತು ಬೇರೆ ವಿಷಯವನ್ನು ಸಾಬೀತು ಮಾಡಲು ಅಲ್ಲ” ಎಂದು ತಿಳಿಸಿದ್ದಾರೆ.
ಕಟ್ಟುಮಸ್ತಾದ ಕುಸ್ತಿಪಟುವಿನ ಪಾತ್ರದಲ್ಲಿರುವ ಸುದೀಪ್ ಮೊದಲ ಬಾರಿಗೆ ಸಿಕ್ಸ್ ಪ್ಯಾಕ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇದುವರೆಗೂ ಯಾವ ಸಿನಿಮಾದಲ್ಲಿ ಸುದೀಪ್ ತಮ್ಮ ಶರ್ಟ್ ತೆಗೆದಿರಲಿಲ್ಲ. ಮೊದಲ ಬಾರಿಗೆ ಪೈಲ್ವಾನ್ ಚಿತ್ರಕ್ಕಾಗಿ ದೇಹವನ್ನು ಪ್ರರ್ದಶಿಸಿದ್ದಾರೆ. ಆದರೆ ಕೆಲವರು ಸುದೀಪ್ ಮುಖಕ್ಕೆ ಬೇರೆಯವರ ದೇಹವನ್ನು ಫೋಟೋಶಾಪ್ ಮಾಡಲಾಗಿದೆ ಎನ್ನುತ್ತಿದ್ದಾರೆ.
ಪೈಲ್ವಾನ್ ಚಿತ್ರಕ್ಕಾಗಿ ಸುದೀಪ್ ಮಾಂಸಾಹಾರವನ್ನ ತ್ಯಜಿಸಿ ಮೈಕಟ್ಟನ್ನು ಹುರಿಗೊಳಿಸಿದ್ದಾರೆ. ಮೊದಲ ಬಾರಿಗೆ ಪೈಲ್ವಾನ್ ನಾಗಿ ಕಾಣಿಸಿಕೊಳ್ಳುತ್ತಿರುವ ಮಾಣಿಕ್ಯ ಚಿತ್ರದಲ್ಲಿ ಕುಸ್ತಿ ದೃಶ್ಯಗಳು ಇರಲಿವೆ. ಈ ಹಿಂದೆ ಪೈಲ್ವಾನ್ ಸೆಟ್ ಚಿತ್ರದ ಒಂದು ಫೋಟೋ ಹಲವು ಪ್ರಶ್ನೆಗಳನ್ನು ಹುಟ್ಟುಹಾಕುವುದರ ಜೊತೆ ಕುತೂಹಲವನ್ನು ಹೆಚ್ಚು ಮಾಡಿತ್ತು. ಈಗ ಕುಸ್ತಿ ಅಖಾಡದ ಫೋಟೋಗಳು ರಿವೀಲ್ ಆಗಿವೆ. ಚಿತ್ರೀಕರಣಕ್ಕಾಗಿ ಚಿತ್ರತಂಡ ಕುಸ್ತಿ ಅಖಾಡದ ಸೆಟ್ ನಿರ್ಮಾಣ ಮಾಡಿದೆ.
ಗಜಕೇಸರಿ ಕೃಷ್ಣ ನಿರ್ದೇಶನದಲ್ಲಿ ಪೈಲ್ವಾನ್ ಮೂಡಿ ಬರುತ್ತಿದ್ದು, ಚಿತ್ರದ ಮೇಕಿಂಗ್ ನೋಡಿ ತೆಲುಗು, ತಮಿಳು, ಮಲೆಯಾಳಂ, ಪಂಜಾಬಿ, ಬೆಂಗಾಲಿ, ಮರಾಠಿ, ಭೋಜ್‍ಪುರಿ ವಿತರಕರು ಡಬ್ಬಿಂಗ್ ಮಾಡಲು ಮುಂದಾಗಿದ್ದಾರಂತೆ. ಈಗಾಗಲೇ ಸುದೀಪ್ ಅಪ್ತ ರಿತೇಶ್ ದೇಶಮುಖ್ ಹಿಂದಿಯಲ್ಲಿ ಪೈಲ್ವಾನ್ ರಿಲೀಸ್ ಮಾಡಲು ಒಪ್ಪಿಕೊಂಡಿದ್ದಾರಂತೆ. ಒಟ್ಟು 30ರಿಂದ 40 ಕೋಟಿ ರೂ. ಬಜೆಟ್ ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.
To all my friends who has stood by me and to allllll Kichcha lovers,,,here is jus a peep into what my team n I Wil be offering…
Much much more to come and u won't be disappointed. With loads of love to all and @kicchasudeep lovers,, #pailwaanPosterRageBegins @iswapnakrishna pic.twitter.com/c39J5Mt4AN
— ಕೃಷ್ಣ / Krishna (@krisshdop) November 17, 2018
Thanks @krisshdop n team for this love. https://t.co/oTzjJvJTJ6
— Kichcha Sudeepa (@KicchaSudeep) November 17, 2018
https://www.youtube.com/watch?v=SjnO6D0JtJc
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews