ಮಂಡ್ಯ: ಪ್ರೀತಿಸಿ ಮದುವೆಯಾಗಿದ್ದ ಯುವತಿ ನೇಣು ಬಿಗಿದುಕೊಳ್ಳುವ ಮೂಲಕ ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದೆ.
19 ವರ್ಷದ ಸುಕನ್ಯಾ ಮೃತ ಯುವತಿ. ಸುಕನ್ಯಾ ಪದವಿ ವ್ಯಾಸಂಗ ಮಾಡುತ್ತಿದ್ದಾಗ ಸುಜೇಂದ್ರ ಪರಿಚಯವಾಗಿದ್ದು, ಇಬ್ಬರು ಪರಸ್ಪರ ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಇವರ ಪ್ರೀತಿಯ ಬಗ್ಗೆ ಮನೆಯವರಿಗೆ ತಿಳಿದಿದೆ. ಆದರೆ ಇಬ್ಬರ ಮನೆಯಲ್ಲೂ ಮದುವೆಗೆ ಒಪ್ಪಲಿಲ್ಲ.
ಪೋಷಕರ ವಿರೋಧದ ನಡುವೆಯೂ ಮೂರು ತಿಂಗಳ ಹಿಂದೆ ಸುಕನ್ಯಾ ಮತ್ತು ಸಜೇಂದ್ರ ಓಡಿಹೋಗಿ ಕುಣಿಗಲ್‍ನ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. ಮದುವೆಯ ನಂತರ ಸುಕನ್ಯಾ ಹುಡುಗನ ಮನೆ ಹೆಬ್ಬಕವಾಡಿಯಲ್ಲಿ ವಾಸವಾಗಿದ್ದಳು.
ಭಾನುವಾರ ಹುಡುಗನ ಮನೆಯಲ್ಲಿ ಸುಕನ್ಯಾ ನೇಣು ಬಿಗಿದ ಸ್ಥಿತಿಯಲ್ಲಿ ಒದ್ದಾಡುತ್ತಿದ್ದನ್ನು ಪತಿಯ ಮನೆಯವರು ನೋಡಿದ್ದಾರೆ. ಕೂಡಲೇ ಸುಕನ್ಯಾಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುಕನ್ಯಾ ಮೃತಪಟ್ಟಿದ್ದಾಳೆ.
ಪತಿಯ ಮನೆಯವರೇ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಇದೀಗ ಸುಕನ್ಯಾ ಪೋಷಕರು ಆರೋಪಿಸಿದ್ದಾರೆ. ಇತ್ತ ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv