Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮ್ಮನ ಬಿಟ್ಟು ಹೊರಡೋಕೆ ಕಂದಮ್ಮನ ಸಿಟ್ಟು- ಜನರನ್ನ ಅಟ್ಟಾಡಿಸಿದ ಮರಿಯಾನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಮ್ಮನ ಬಿಟ್ಟು ಹೊರಡೋಕೆ ಕಂದಮ್ಮನ ಸಿಟ್ಟು- ಜನರನ್ನ ಅಟ್ಟಾಡಿಸಿದ ಮರಿಯಾನೆ

Districts

ಅಮ್ಮನ ಬಿಟ್ಟು ಹೊರಡೋಕೆ ಕಂದಮ್ಮನ ಸಿಟ್ಟು- ಜನರನ್ನ ಅಟ್ಟಾಡಿಸಿದ ಮರಿಯಾನೆ

Public TV
Last updated: November 30, 2018 9:17 am
Public TV
Share
2 Min Read
hsn elephant cremation collage copy
SHARE

ಹಾಸನ: ನಾಲ್ಕೈದು ದಿನಗಳ ಕಾಲ ಕೆಸರಿನ ಸಿಲುಕಿ ಮೂಕ ವೇದನೆ ಅನುಭವಿಸಿದ್ದ ಹೆಣ್ಣಾನೆಯೊಂದು ಅರಣ್ಯ ಇಲಾಖೆಯ ಕಾರ್ಯಾಚರಣೆಯಿಂದಾಗಿ ಸಾವಿನ ದವಡೆಯಿಂದ ಪಾರಾಗಿ ಬಂದ್ರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಗೂ ಸಾವಿನ ಮನೆ ಸೇರಿದೆ. ಅಮ್ಮನಿಗಾಗಿ ಅದರ ಸುತ್ತಲೂ ಪರಿಪರಿಯಾಗಿ ಹಲುಬಿದ, ಬಿಟ್ಟೋಗ್ಬೇಡಮ್ಮ ಎಂದು ಘೀಳಿಟ್ಟು ನರಳಾಡಿದ ಮರಿಯಾನೆ ಈಗ ತಬ್ಬಲಿಯಾಗಿದೆ. ಮರಿಯಾನೆ ತನ್ನದೇ ಭಾಷೆಯಲ್ಲಿ ಅಮ್ಮಾ, ಅಮ್ಮಾ ಅಂತ ಒಂದೇ ಸಮನೆ ಗೋಳಾಡುತ್ತಿರುವ ದೃಶ್ಯ ಮನ ಕಲಕುವಂತಿದೆ.

ಸಕಲೇಶಪುರ ತಾಲೂಕು ಕಡದರಹಳ್ಳಿ ಬಳಿಯ ಕಾಫಿ ತೋಟದ ಗುಂಡಿಯಲ್ಲಿ ಹೂತು, ಪ್ರಯಾಸದಿಂದ ಹೊರ ಬಂದಿದ್ದ 25 ವರ್ಷದ ಹೆಣ್ಣಾನೆಯ ಬದುಕುವ ಆಸೆ ಶಾಶ್ವತವಾಗಿ ಅದೇ ಮಣ್ಣು ಸೇರಿದೆ. ವಾರದ ಹಿಂದೆ ನೀರಿನ ದಾಹ ನೀಗಿಸಿಕೊಳ್ಳಲು ಕಾಲು ಮುರಿತದ ನೋವಿನ ನಡುವೆಯೂ ಕರುಳ ಕುಡಿಯೊಂದಿಗೆ ಒಂದು ಕಡೆಯಿಂದ ಮತ್ತೊಂದು ಕಡೆಗೆ ಅಲೆಯುತ್ತಿದ್ದ ಹೆಣ್ಣಾನೆ, ಗುಂಡಿಯಲ್ಲಿ ಕಂಡ ನೀರು ಕುಡಿಯಲು ಹೋಗಿ ಅಲ್ಲೇ ಹೂತುಕೊಂಡಿತ್ತು. ಬರೋಬ್ಬರಿ ನಾಲ್ಕೈದು ದಿನಗಳ ಸತತ ಕಾರ್ಯಾಚರಣೆ ನಂತರ ತುಂಬಾ ಪ್ರಯಾಸ ಪಟ್ಟು ಅರಣ್ಯ ಇಲಾಖೆಯವರು 2 ಪಳಗಿದ ಆನೆ ಮತ್ತು ಜೆಸಿಬಿ ಸಹಾಯದಿಂದ ಬಹುತೇಕ ಮುಳುಗಿದ್ದ ಆನೆಯನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದರು.

ELEPHANT copy

ಪೆಟ್ಟಿನ ಮೇಲೆ ಮತ್ತೊಂದು ಪೆಟ್ಟು ಎಂಬಂತೆ ಆನೆ ಕಾಲು ಮುರಿದ ಭಾಗ ಬಹುತೇಕ ಊದುಕೊಂಡಿದ್ದರಿಂದ ಕೆಸರು ಗುಂಡಿಯಿಂದ ಮೇಲೆತ್ತಿದರೂ ನಿಲ್ಲಲಾಗದ ಸಂಕಷ್ಟ ಸ್ಥಿತಿ ಆನೆಯದಾಗಿತ್ತು. ರಕ್ಷಣೆ ಮಾಡಿದ ಆನೆಗೆ ಕಳೆದ 2 ದಿನಗಳಿಂದ ಚಿಕಿತ್ಸೆ ನೀಡಲಾಯಿತಾದ್ರೂ, ಗ್ಯಾಂಗ್ರಿನ್ ನಿಂದಾಗಿ ಗುರುವಾರ ಬೆಳಗ್ಗೆ ಹೆಣ್ಣಾನೆ ಮೃತಪಟ್ಟಿದೆ. ನೋವಿನಿಂದ ನರಳುತ್ತಿದ್ದ ಆನೆ ನೋವಿನಲ್ಲೇ ಕೊನೆಯುಸಿರೆಳೆದಿದೆ. ಸ್ಥಳದಲ್ಲೇ ಮೃತಪಟ್ಟ ಆನೆಯ ಮರಣೋತ್ತರ ಪರೀಕ್ಷೆ ನಡೆಸಿ, ಕಳೇಬರವನ್ನು ಅಲ್ಲೇ ದಹನ ಮಾಡಲಾಯಿತು. ಮರಿಯಾನೆಯನ್ನು ಶಿವಮೊಗ್ಗದ ಸಕ್ರೇಬೈಲು ಆನೆ ಶಿಬಿರಕ್ಕೆ ಬಿಡಲು ನಿರ್ಧರಿಸಲಾಗಿದೆ.

HSN ELEPHANT DEATH AV 3 copy

ಕೆಸರಿಂದ ಮೇಲೆ ಬಂದ ನಂತರ ಅಬ್ಬಾ! ಹೆತ್ತಮ್ಮ ನನ್ನ ಬಿಟ್ಟು ಹೋಗಲಿಲ್ಲ ಎಂಬ ಮರಿಯಾನೆಯ ಕನಸು ನುಚ್ಚು ನೂರಾಗಿದೆ. ತಾಯಿ ಇನ್ನಿಲ್ಲ ಅನ್ನೋ ನೋವಿನ ಸಂಕಟದಿಂದ ಮರಿಯಾನೆ ಮೌನಕ್ಕೆ ಶರಣಾಗಿದೆ. ಆದರೂ ಹೇಗಾದರೂ ನನ್ನಮ್ಮ ಬದುಕಿ ಬಂದಾಳು ಎನ್ನುವ ಕೊನೆ ಆಸೆಯಿಂದ ಅಮ್ಮನ ಹೊರತಾಗಿ ಬೇರೇನೂ ಗೊತ್ತಿಲ್ಲದ ಮರಿಯಾನೆ ಘೀಳಿಡುತ್ತಿದ್ದ ದೃಶ್ಯ ನೆರೆದಿದ್ದ ಮನುಷ್ಯರ ಮನಸ್ಸು ಭಾರವಾಗುವಂತೆ ಮಾಡಿತು.

hsn elephant tweet

ತಬ್ಬಲಿ ಮರಿ ಎಷ್ಟೇ ಆಲಾಪಿಸಿದರೂ, ಇನ್ನೆಂದೂ ಮಗನ ಆಕ್ರಂದನವನ್ನು ತಾಯಿ ಕೇಳಿಸಿಕೊಳ್ಳದು. ಆದರೆ ಹೆಣ್ಣಾನೆ ಸಾವಿಗೆ ಅರಣ್ಯ ಇಲಾಖೆ ಹಾಗೂ ಸರ್ಕಾದ ದಿವ್ಯ ನಿರ್ಲಕ್ಷ್ಯವೇ ಕಾರಣ ಎನ್ನುವುದು ಸ್ಥಳೀಯರ ಆರೋಪವಾಗಿದೆ. ಆನೆ ಅಪಾಯದಲ್ಲಿರುವ ಸುದ್ದಿ ತಿಳಿದ ಕೂಡಲೇ ಅರಣ್ಯಾಧಿಕಾರಿಗಳು ಕಾರ್ಯ ಪ್ರವೃತ್ತರಾಗಿದ್ದರೆ ನರಳುತ್ತಿದ್ದ ಆನೆಯನ್ನು ಬದುಕಿಸಬಹುದಿತ್ತು. ಆದರೆ ಈ ವಿಷಯದಲ್ಲಿ ಸಂಬಂಧಪಟ್ಟವರ ವಿಳಂಬದಿಂದಾಗಿ ಆನೆ ಅಸು ನೀಗಿದೆ. ಬದುಕುಳಿದಿರುವ ಮರಿಯಾನೆಯನ್ನು ನಮಗೆ ದತ್ತುಕೊಟ್ಟು ಬಿಡಿ. ಇಲ್ಲವೇ ಆಲೂರು ತಾಲೂಕು ನಾಗಾವರ ಬಳಿಯ ನೂತನ ಆನೆ ಶಿಬಿರದಲ್ಲಿ ಆರೈಕೆ ಮಾಡಿ ಎಂದು ಮನವಿ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:baby elephantdeathelephantforesthassanMother ElephantPublic TVಅರಣ್ಯಆನೆತಾಯಿ ಆನೆಪಬ್ಲಿಕ್ ಟಿವಿಮರಿಯಾನೆಸಾವುಹಾಸನ
Share This Article
Facebook Whatsapp Whatsapp Telegram

Cinema news

Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories

You Might Also Like

Bidar Inscription Sculptures Found
Bidar

ಬೀದರ್‌ನಲ್ಲೂ ಪ್ರಾಚೀನ ಶಿಲಾಶಾಸನ, ಸರ್ಪರೂಪದ ಶಿಲ್ಪಗಳು ಪತ್ತೆ – ಸಂಶೋಧನೆ ಮಾಡುವಂತೆ ಸರ್ಕಾರಕ್ಕೆ ಆಗ್ರಹ

Public TV
By Public TV
24 minutes ago
Vasanth Naik Murder Case Kamalakar Bhat gets a honeytrap from Suchitra
Districts

ನನ್ನನ್ನು ನೋಡಿಕೊಳ್ಳದಿದ್ದರೆ ವಿಡಿಯೋ ಔಟ್‌ – ಕಮಲಾಕರ್ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್

Public TV
By Public TV
46 minutes ago
Kashmiri youth murders UP man Abdul Rahman accused of Ram Temple attack plot inside Faridabad jail
Latest

ರಾಮ ಮಂದಿರ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಆರೋಪಿ ಜೈಲಿನಲ್ಲೇ ಹತ್ಯೆ

Public TV
By Public TV
1 hour ago
Tumakuru 2nd Marriage Groom
Crime

2ನೇ ಮದುವೆಗೆ ರೆಡಿ ಆಗಿದ್ದ ವರನಿಗೆ ಶಾಕ್ – ಮದುಮಗಳಿಂದಲೇ ದಾಖಲಾಯ್ತು ದೂರು

Public TV
By Public TV
2 hours ago
Four Stars of Destiny Book MM Naravane
Latest

ನರವಾಣೆ ಅಪ್ರಕಟಿತ ಪುಸ್ತಕ ವಿವಾದ| ಎಫ್‌ಐಆರ್‌ ದಾಖಲು, ನಾವು ಪ್ರಕಟಿಸಿಯೇ ಇಲ್ಲವೆಂದ ಪೆಂಗ್ವಿನ್‌ ಇಂಡಿಯಾ

Public TV
By Public TV
2 hours ago
Doddakammanahalli Plastic Godown Fire
Bengaluru City

ಪ್ಲಾಸ್ಟಿಕ್ ಗೋಡೌನ್‌ಗೆ ಬೆಂಕಿ – ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?