ಹುಲಿ ಜೊತೆ ಕುಳಿತು ಹ್ಯಾಪಿ ನ್ಯೂ ಇಯರ್ ಅಂದ್ರು ದರ್ಶನ್ ಪತ್ನಿ

Public TV
1 Min Read
VIJAYALAKSHMI

ಬೆಂಗಳೂರು: 2019ನೇ ವರ್ಷವನ್ನು ಸೋಮವಾರ ರಾತ್ರಿ ಎಲ್ಲರೂ ಅದ್ಧೂರಿಯಾಗಿ ಬರ ಮಾಡಿಕೊಂಡಿದ್ದು, ಇಂದು ನಟ-ನಟಿಯರು, ಗಣ್ಯರು ಸೇರಿದಂತೆ ಜನಸಾಮಾನ್ಯರು ಹೊಸ ವರ್ಷದ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಆದ್ರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಸ್ವಲ್ಪ ಡಿಫರೆಂಟ್ ಆಗಿಯೇ ವಿಶ್ ಮಾಡಿದ್ದಾರೆ.

ಹೌದು ನಟರ ಪತ್ನಿ ಕಟ್ಟಿ ಹಾಕಿದ ಹುಲಿ ಜೊತೆಗಿನ ಎಡಿಟೆಡ್ ಫೋಟೋದ ಮೇಲೆ ಹ್ಯಾಪಿ ನ್ಯೂ ಇಯರ್ ಅಂತ ಬರೆದುಕೊಂಡಿದ್ದಾರೆ. ಈ ಫೋಟೋವನ್ನು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ.

ಪತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೂಡ ನ್ಯೂ ಇಯರ್ ಗೆ ವಿಶ್ ಮಾಡಿದ್ದಾರೆ. ತಮ್ಮ ಯಜಮಾನ ಚಿತ್ರದ ಪೋಸ್ಟರ್ ಹಾಕಿ ಎಲ್ಲರಿಗೂ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಹೊಸ ವರ್ಷವೂ ನಿಮ್ಮ ಬಾಳಲ್ಲಿ ಹೊಸ ಬೆಳಕು ಮೂಡಿಸಿ ಸುಂದರ ಭವಿಷ್ಯದೆಡೆಗೆ ನಿಮ್ಮನ್ನು ಕರೆದೊಯ್ಯಲಿ. ನಾಡಿನ ಸಮಸ್ತ ಜನತೆಗೆ ನಿಮ್ಮ ದಾಸ ದರ್ಶನ್ ಕಡೆಯಿಂದ ಹೊಸ ಹುರುಪಿನಿಂದ ಕೂಡಿರುವ ಹೊಸ ವರ್ಷದ ಹಾರ್ದಿಕ ಶುಭಾಶಯಗಳು” ಅಂತ ಹೇಳಿದ್ದಾರೆ.

ಒಟ್ಟಿನಲ್ಲಿ 2018ಗೆ ಟಾಟಾ ಹೇಳಿ ಹೊಸ ವರ್ಷ 2019 ಅನ್ನು ರಾಜ್ಯದ ಜನ ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ಸಾವಿರಾರು ಯುವಕ-ಯುವತಿಯರು ರಸ್ತೆಗೆ ಇಳಿದು ನೃತ್ಯ ಮಾಡಿ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ. ಆಚರಣೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಕೆಲ ದಿನಗಳ ಹಿಂದೆಯಿಂದಲೇ ಬೆಂಗಳೂರು ನಗರದಲ್ಲಿ ಪೊಲೀಸ್ ಇಲಾಖೆ ಭಾರೀ ಸಿದ್ಧತೆ ನಡೆಸಿತ್ತು. ಹೀಗಾಗಿ ಈ ಬಾರಿ ಯಾವುದೇ ಅಹಿತಕರ ಘಟನೆಗಳು ನಡೆಯದೇ ಹೊಸ ವರ್ಷದ ಆಚರಣೆ ಯಶಸ್ವಿಯಾಗಿ ನಡೆದಿದೆ.

Drm36u0U4AAY pX

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *