ಶನಿವಾರವೂ ಮುಂದುವರಿದ ಐಟಿ ಪರಿಶೀಲನೆ – ಅಧಿಕಾರಿಗಳಿಗೆ ಸ್ಟಾರ್ ನಟರು ಹೇಳಿದ್ದೇನು?

Public TV
1 Min Read
income tax raids

ಬೆಂಗಳೂರು: ಸ್ಯಾಂಡಲ್‍ವುಡ್ ಕೋಟಿಗಳಿಕೆಯ ನಟರ ಮೇಲೆ 3ನೇ ದಿನವೂ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ. ಅದರಲ್ಲೂ ಶಿವರಾಜ್ ಕುಮಾರ್ ಮನೆಯಲ್ಲಿ ಇಂದು ಬೆಳಗ್ಗೆಯವರೆಗೂ ಪರಿಶೀಲನಾ ಕಾರ್ಯ ಮುಂದುವರಿಯಿತು.

ಪುನೀತ್ ರಾಜ್‍ಕುಮಾರ್ ಮನೆಯಲ್ಲಿನ ಶೋಧ ಕಾರ್ಯ ಶುಕ್ರವಾರ ರಾತ್ರಿ 11.30ಕ್ಕೆ ಅಂತ್ಯಗೊಂಡಿದೆ. ಆದರೆ ಯಶ್ ಮತ್ತು ಸುದೀಪ್ ಮನೆಯಲ್ಲಿ ಪರಿಶೀಲನೆ ಮುಂದುವರಿಯಲಿದೆ. ಜೊತೆಗೆ ನಿರ್ಮಾಪಕರಾದ ವಿಜಯ ಕಿರಗಂದೂರು, ಸಿ.ಆರ್.ಮನೋಹರ್, ರಾಕ್‍ಲೈನ್ ವೆಂಕಟೇಶ್, ಜಯಣ್ಣ ಮನೆಯಲ್ಲಿ ಪರಿಶೀಲನೆ ಮುಂದುವರಿಯಲಿದೆ.  ಇದನ್ನೂ ಓದಿ: ಐಟಿ ರೇಡ್ ಹಿಂದಿನ ನಿಜವಾದ ಕಾರಣ ಬಿಚ್ಚಿಟ್ಟ ವಿತರಕ ಪ್ರಶಾಂತ್ ಸಂಬರ್ಗಿ

sandalwood raid

 

ಸ್ಟಾರ್ ನಟರ ಮನೆ ಮೇಲಿನ ರೇಡ್ ಒಂದು ಹಂತಕ್ಕೆ ಕ್ಲೋಸ್ ಆಗಿದ್ದರೂ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಸ್ಟಾರ್ ನಟರ ಮನೆಯಲ್ಲಿ ಕೆಜಿಗಟ್ಟಲೆ ಬೆಳ್ಳಿ, ಚಿನ್ನ ಮತ್ತು ಹಣ ಪತ್ತೆಯಾಗಿದೆ. ಈ ಬಂಗಾರ ಮತ್ತು ಹಣಕ್ಕೆ ಸೂಕ್ತ ದಾಖಲೆ ತೋರಿಸಿದ ನಂತರವಷ್ಟೇ ಈ ಆಸ್ತಿಗಳು ಮನೆ ಸೇರಲಿದೆ. ಇದನ್ನೂ ಓದಿ: ನಾಲ್ವರು ಸ್ಟಾರ್‌ಗಳ ಮೇಲಿನ ಐಟಿ ದಾಳಿಗೆ ಜಿಎಸ್‍ಟಿ ಕಾರಣ?

ಇದರ ಜೊತೆ ಸಾಕಷ್ಟು ಬಿಸಿನೆಸ್‍ನಲ್ಲಿ ಹೂಡಿಕೆ ಮಾಡಿರುವ ಕಾರಣ ಎಲ್ಲದಕ್ಕೂ ದಾಖಲೆ ನೀಡಬೇಕಾಗುತ್ತದೆ. ಈ ಕಾರಣಕ್ಕೆ ಐಟಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಲು ಒಂದು ವಾರದ ಗಡುವನ್ನು ಸ್ಟಾರ್ ನಟರು ಕೇಳಿದ್ದಾರೆ ಎನ್ನುವ ಮಾಹಿತಿ ಐಟಿ ಮೂಲಗಳಿಂದ ಸಿಕ್ಕಿದೆ. ಇದನ್ನೂ ಓದಿ: ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಖಡಕ್ ಆಗಿ ಉತ್ತರಿಸಿದ ಸ್ಟಾರ್ ನಟರು

ನಟರ ಬಳಿ ಸಿಕ್ಕಿದ ಆಸ್ತಿಗಿಂತಲೂ ನಿರ್ಮಾಪಕರ ಸಂಪಾದನೆ ಹೆಚ್ಚಿರುವ ಹಿನ್ನೆಲೆಯಲ್ಲಿ ಶನಿವಾರವೂ ದಾಖಲೆಗಳ ಪರಿಶೀಲನೆ ಮುಂದುವರಿಯಲಿದೆ.  ಇದನ್ನೂ ಓದಿ: ಆ ಒಂದು ಡೈರಿಯಿಂದ ಸ್ಟಾರ್ ನಟರ ಮನೆ ಮೇಲೆ ದಾಳಿ!

sandalwood raid 3

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *