ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ

Public TV
1 Min Read
CTD MLA

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ವಿಧಾನಸೌಧದ ಮುಂದೆ ಬಟ್ಟೆ ಹರಿದುಕೊಂಡು ಹೈಡ್ರಾಮಾ ಮಾಡಿದ್ದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್  ಮತ್ತೆ ಜಿಲ್ಲೆಯ ಹೊಸದುರ್ಗದಲ್ಲಿ ಭಾರೀ ಹೈಡ್ರಾಮ ಮಾಡಿದ್ದಾರೆ.

ಮರಳು ದಂಧೆ ನೆಪದಲ್ಲಿ ತಮ್ಮ ಬೆಂಬಲಿಗರ ಮೇಲೆ ಪೋಲಿಸರು ಸುಳ್ಳು ಕೇಸ್ ದಾಖಲಿಸುತ್ತಿದ್ದಾರೆಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಹೊಸದುರ್ಗ ಶಾಸಕರಾಗಿರುವ ಗೂಳಿಹಟ್ಟಿ ಶೇಖರ್ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

CTD GULIHATTI SHEKAR AV 1

ತಕ್ಷಣ ಅವರನ್ನು ಪೊಲೀಸರು ಹೊಸದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಪೆಟ್ರೋಲ್ ಕಿವಿ, ಕಣ್ಣು ಮತ್ತು ಮೂಗಿನ ಒಳಗೆ ಹೋಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಕಣ್ಣಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಕಣ್ಣಿನಲ್ಲಿ ಪೆಟ್ರೋಲ್ ಹೋಗಿದ್ದರಿಂದ ಸಣ್ಣ ಸಮಸ್ಯೆಗಳು ಕಾಣಿಸಿಕೊಂಡಿವೆ ಎಂದು ಹೇಳಲಾಗುತ್ತಿದೆ.

ಶಾಸಕ ಗೂಳಿಹಟ್ಟಿ ಶೇಖರ್ ಮೊದಲಿನಿಂದಲೂ ಕ್ಷೇತ್ರದಲ್ಲಿ ಒಳ್ಳೆಯ ಹೆಸರು ಮಾಡಿಕೊಂಡು ಬಂದಿದ್ದಾರೆ. ಆದರೆ ಇವರು ಅಕ್ರಮವಾಗಿ ಮರಳು ದಂಧೆಯಲ್ಲಿ ತಮ್ಮ ಬೆಂಬಲಿಗರ ಮೇಲೆ ಪೋಲಿಸರು ಸುಳ್ಳು ಕೇಸ್ ದಾಖಲಿಸುತ್ತಿದ್ದಾರೆಂದು ಆರೋಪಿಸಿದ್ದಾರೆ. ಬಳಿಕ ಈ ಸಂಬಂಧ ಮಾತನಾಡಲೂ ತಮ್ಮ ಬೆಂಬಲಿಗರೊಂದಿಗೆ ಪೊಲೀಸ್ ಠಾಣೆಗೆ ಹೋಗಿದ್ದಾರೆ. ಆಗ ಪೊಲೀಸ್ ಜೊತೆ ಮಾತನಾಡುವ ಸಂದರ್ಭದಲ್ಲಿ ನೀವು ಯಾರು ಕೂಡ ಶಾಸಕನ ಮಾತಿಗೆ ಸ್ಪಂದಿಸುತ್ತಿಲ್ಲ. ಇದನ್ನು ನಾನು ಖಂಡಿಸುತ್ತೇನೆ ಎಂದು ಠಾಣೆಯ ಮುಂದೆಯೇ ಬಂದು ಪೆಟ್ರೋಲ್ ಸುರಿದುಕೊಂಡಿದ್ದಾರೆ. ಬಳಿಕ ಬೆಂಕಿ ಹಚ್ಚಿಕೊಳ್ಳಲು ಮುಂದಾಗಿದ್ದರು. ಅಷ್ಟರಲ್ಲಿ ಅವರ ಬೆಂಬಲಿಗರು ತಡೆದಿದ್ದಾರೆ.

ctd

ಗೂಳಿಹಟ್ಟಿ ಶೇಖರ್ ನ ವರ್ತನೆಯಿಂದ, ಜನಪ್ರತಿನಿಧಿಗಳೇ ಈ ರೀತಿ ಮಾಡಿದರೆ ಸಾಮಾನ್ಯ ಜನರು ಪರಿಸ್ಥಿತಿ ಏನು ಎಂದು ಪ್ರಶ್ನೆ ಎದ್ದಿದ್ದೆ. ಅಷ್ಟೇ ಅಲ್ಲದೇ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮತದಾರರನ್ನು ತನ್ನತ್ತ ಸೆಳೆಯಲು ಈ ರೀತಿ ಮಾಡಿದ್ರಾ ಅಂತ ಸಾರ್ವಜನಿಕರು ಮಾತನಾಡಿಕೊಳ್ಳಲು ಪ್ರಾರಂಭಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *