ಧಾರವಾಡ: ಚಲಿಸುತ್ತಿದ್ದ ಪೆಟ್ರೋಲ್ ಟ್ಯಾಂಕರ್‌ನಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಧಾರವಾಡ ನಗರದ ಜಿಲ್ಲಾ ನ್ಯಾಯಾಲಯದ ಮುಂದೆ ನಡೆದಿದೆ.
ಬೆಳಗಾವಿಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಟ್ಯಾಂಕರಿನ ಕ್ಯಾಬಿನ್‍ನಲ್ಲಿ ಏಕಾಏಕಿ ಬೆಂಕಿ ಹೊತ್ತಿ ಉರಿದಿದೆ. ಕೂಡಲೇ ಎಚ್ಚೆತ್ತ ಚಾಲಕ ಸ್ಥಳದಲ್ಲೇ ಟ್ಯಾಂಕರ್ ನಿಲ್ಲಿಸಿದ್ದಾನೆ. ಪೆಟ್ರೋಲ್ ಖಾಲಿ ಮಾಡಿ ಈ ಟ್ಯಾಂಕರ್ ವಾಪಸ್ಸಾಗುತ್ತಿತ್ತು.
ಟ್ಯಾಂಕರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಲಾರಿ ಚಾಲಕ ಸ್ಥಳದಲ್ಲೇ ಟ್ಯಾಂಕರ್ ನಿಲ್ಲಿಸಿ ಸ್ಥಳೀಯರ ಜೊತೆ ಬೆಂಕಿ ನಂದಿಸಲು ಪ್ರಯತ್ನ ಮಾಡಿದ್ದಾನೆ. ಆದರೆ ಈ ಪ್ರಯತ್ನ ವಿಫಲವಾದ ಕಾರಣ ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ಟ್ಯಾಂಕರ್‌ಗೆ ಬೆಂಕಿ ಹತ್ತಿದ ಸ್ಥಳದಲ್ಲಿ ಪೆಟ್ರೋಲ್ ಬಂಕ್ ಹಾಗೂ ಮನೆಗಳು ಇವೆ. ಆದರೆ ಹೆಚ್ಚಿನ ಅನಾಹುತ ತಪ್ಪಿದ್ದರಿಂದ ಜನರು ಕೂಡ ನಿಟ್ಟುಸಿರು ಬಿಟ್ಟಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv