ಹಾರ್ದಿಕ್ ಪಾಂಡ್ಯ ಹೇಳಿಕೆಗೆ ಟಾಂಗ್ ಕೊಟ್ಟ ರಾಖಿ ಸಾವಂತ್

Public TV
2 Min Read
rakhi sawant hardik pandya collaghe

ಮುಂಬೈ: ಭಾರತ ಕ್ರಿಕೆಟ್ ತಂಡದ ಅಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಕಾರ್ಯಕ್ರಮವೊಂದರಲ್ಲಿ ನೀಡಿದ್ದ ಹೇಳಿಕೆಗೆ ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಟಾಂಗ್ ನೀಡಿದ್ದಾರೆ.

ಬಾಲಿವುಡ್ ನಿರ್ದೇಶಕ ಕರಣ್ ಜೋಹರ್ ನಡೆಸಿಕೊಡುವ ‘ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಭಾರತ ತಂಡದ ಕ್ರಿಕೆಟ್ ಆಟಗಾರರಾದ ಕೆ.ಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಭಾಗವಹಿಸಿದ್ದರು. ಈ ವೇಳೆ ಹಾರ್ದಿಕ್ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಈಗ ರಾಖಿ ಸಾವಂತ್ ಟಾಂಗ್ ಕೊಟ್ಟಿದ್ದಾರೆ.

Hardik KL Rahul Koffee W Karan

ಇತ್ತೀಚೆಗೆ ರಾಖಿ ಸಾವಂತ್ ‘ಬಿ ವಿತ್ ಭೇಟಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, “ಇತ್ತೀಚೆಗೆ ನಮ್ಮ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಅವರು ನಾನು ಹುಡುಗಿರನ್ನು ಹಿಂದೆ ಕಡೆಯಿಂದ ನೋಡುತ್ತೇನೆ. ನನಗೆ ಇಷ್ಟ ಆದರೆ ಆಗ ನಾನು ನನ್ನ ತಾಯಿ ಬಳಿ ಹೋಗಿ ನಾನು ಇಂದು ಮಾಡಿ ಬಂದಿದ್ದೇನೆ ಎಂದು ಹೇಳುತ್ತೇನೆ” ಎಂದು ಅವರು ಕಾರ್ಯಕ್ರಮದಲ್ಲಿ ಹೇಳಿದ್ದರು.

rakhi sawant 2

ಹಾರ್ದಿಕ್ ಅವರ ಈ ಹೇಳಿಕೆ ನನಗೆ ತುಂಬಾ ಬೇಸರವಾಯಿತು. ಈಗ ನಾನು ಹಾರ್ದಿಕ್ ಅವರಿಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ. “ಹಾರ್ದಿಕ್ ಅವರೇ ಕೆಲವು ಬಾರಿ ಹುಡುಗರು ಹಿಂದಿನಿಂದ ಚೆನ್ನಾಗಿ ಕಾಣಿಸುತ್ತಾರೆ. ನೀವು ನೋಡುವಾಗ ಹುಡುಗಿ ಬದಲು ಅದು ಹುಡುಗ ಆಗುತ್ತಿದ್ದರೆ, ಆಗ ನೀವು ಏನು ಮಾಡುತ್ತೀದ್ದೀರಿ?” ಎಂದು ಪ್ರಶ್ನಿಸುವ ಮೂಲಕ ರಾಖಿ ಸಾವಂತ್ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

Rakhi Sawanth 1

ಕರಣ್ ಜೋಹರ್ ನಡೆಸಿಕೊಡುವ ಕಾರ್ಯಕ್ರಮದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಅವರಿಗೆ ಕೇಳಿದ ಪ್ರಶ್ನೆಗಳಿಗೆ ಮನಸ್ಸಿಗೆ ಬಂದಂತೆ ಹಿಂದೆ ಮುಂದೆ ನೋಡದೆ ಇಬ್ಬರು ಆಟಗಾರರು ಉತ್ತರಿಸಿದ್ದರು. ಅಲ್ಲದೇ ಸಚಿನ್ ಹಾಗೂ ಕೊಹ್ಲಿ ಇಬ್ಬರಲ್ಲಿ ಯಾರು ಬೆಟರ್ ಎಂಬ ಪ್ರಶ್ನೆಗೆ ಉತ್ತರಿಸಿದ್ದ ಹಾರ್ದಿಕ್ ಹಾಗೂ ಕೆಎಲ್ ರಾಹುಲ್ ಹಿಂದು ಮುಂದು ನೋಡದೇ ಕೊಹ್ಲಿ ಎಂದು ಉತ್ತರಿಸಿದ್ದರು. ಅಲ್ಲದೇ ಮಹಿಳೆಯರು ಹಾಗೂ ಸೆಕ್ಸ್ ಜೀವನದ ಬಗ್ಗೆ ಕೇಳಿದ ಪ್ರಶ್ನೆಯ ಬಗ್ಗೆ ಕ್ಷಣ ಕಾಲ ಕೂಡ ಯೋಚಿಸದೇ ಹಾರ್ದಿಕ್ ಉತ್ತರಿಸಿದ್ದರು. ಇದರಿಂದ ಹಲವು ಕ್ರಿಕೆಟ್ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹಾರ್ದಿಕ್ ವಿರುದ್ಧ ಟೀಕೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *