ಬೆಂಗಳೂರು: ಆನಂದ್ ಸಿಂಗ್ ಮೇಲೆ ಮದ್ಯದ ಬಾಟಲಿಯಿಂದ ಹಲ್ಲೆ ನಡೆಸಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಮರ್ಯಾದೆ ಹರಾಜು ಹಾಕಿದ ಕಂಪ್ಲಿ ಶಾಸಕ ಗಣೇಶ್ ಪಕ್ಷದಿಂದಲೇ ಉಚ್ಚಾಟನೆಯಾಗುವ ಸಾಧ್ಯತೆಯಿದೆ.
ರೆಸಾರ್ಟಿನಲ್ಲಿ ಇಬ್ಬರು ಕಿತ್ತಾಡಿದ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫುಲ್ ಗರಂ ಆಗಿದ್ದು, ಶಿಸ್ತು ಕ್ರಮ ಕೈಗೊಳ್ಳಿ ಎಂದು ಹಿರಿಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಕಾಂಗ್ರೆಸ್ ಪಕ್ಷದದಿಂದ ಹಲ್ಲೆಕೋರ ಶಾಸಕ ಗಣೇಶ್ ಉಚ್ಛಾಟನೆಯಾಗುವ ಸಾಧ್ಯತೆಯಿದ್ದು, ಇಂದು ಅಥವಾ ನಾಳೆ ಕಾಂಗ್ರೆಸ್ ಪಕ್ಷದಿಂದ ಅಧಿಕೃತ ನಿರ್ಧಾರ ಪ್ರಕಟವಾಗಲಿದೆ. ಆಪರೇಷನ್ ಕಮಲದ ಮಧ್ಯೆ ಶಾಸಕರ ಕೊರತೆ ಇರುವಾಗ ಉಚ್ಚಾಟನೆಯ ನಿರ್ಧಾರ ಕೈಗೊಳ್ಳುತ್ತಾ ಎನ್ನುವ ಪ್ರಶ್ನೆ ಎದುರಾಗಿದ್ದು ಯಾವ ಶಿಸ್ತು ಕ್ರಮ ಕೈಗೊಳ್ಳುತ್ತದೆ ಎನ್ನುವ ಕುತೂಹಲ ಹೆಚ್ಚಾಗಿದೆ.
ಇತ್ತ ಗಣೇಶ್ ವಿರುದ್ಧ ಕ್ರಮ ಕೈಗೊಳ್ಳಿ ಅಥವಾ ದೂರಿಗೆ ಅವಕಾಶ ಕೊಡಿ ಎಂದು ಆನಂದ್ ಸಿಂಗ್ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಕುಟುಂಬಸ್ಥರು ಪಟ್ಟು ಹಿಡಿಯುತ್ತಿದ್ದಂತೆ ಅವರ ಮನವೊಲಿಕೆಗೆ ಕೈ ನಾಯಕರು ಭಾನುವಾರ ರಾತ್ರಿಯಿಂದ ಸರ್ಕಸ್ ಆರಂಭಿಸಿದ್ದಾರೆ.
ದೂರು, ತನಿಖೆ ಎಂದು ಹೋದರೆ ಎಲ್ಲರಿಗೂ ಮುಜುಗರ ಆಗುತ್ತದೆ ಎಂದು ಹೇಳಿ ಅನಂದ್ ಸಿಂಗ್ ಜೊತೆ ಕಾಂಗ್ರೆಸ್ ನಾಯಕರು ಚರ್ಚಿಸಿದ್ದಾರೆ. ಆದರೆ ಅದರೆ ಕುಟುಂಬದವರು ದೂರು ದಾಖಲಿಸಲೇಬೇಕು. ಗಣೇಶ್ ಮೇಲೆ ಕಾನೂನು ರೀತಿಯ ಕ್ರಮಕ್ಕೆ ಆಗ್ರಹಿಸಿದ್ದಾರೆ. ಹೀಗಾಗಿ ಕುಟುಂಬದವರ ಮನವೊಲಿಸಲು ಕೈ ನಾಯಕರು ಮುಂದಾಗಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ತಿಳಿದುಬಂದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv