ಪ್ರಿಯಾಂಕ ಗಾಂಧಿ ಮಾನಸಿಕ ಅಸ್ವಸ್ಥೆ, ಆಕೆ ಜನರನ್ನು ಹೊಡೆಯಬಹುದು – ಸುಬ್ರಮಣಿಯನ್ ಸ್ವಾಮಿ

Public TV
1 Min Read
Subramanian Swamy Priyanka Gandhi

ನವದೆಹಲಿ: ಪ್ರಿಯಾಂಕ ಗಾಂಧಿ ಅವರು ಸಕ್ರಿಯ ರಾಜಕೀಯಕ್ಕೆ ಪ್ರವೇಶ ಮಾಡುತ್ತಿದ್ದಂತೆ ಅನೇಕರು ವಾಗ್ದಾಳಿ ಆರಂಭಿಸಿದ್ದಾರೆ. ಈ ಬೆನ್ನಲ್ಲೇ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಕೂಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪ್ರಿಯಾಂಕ ಗಾಂಧಿ ಬೈ ಪೊಲಾರಿಟಿ ಹೆಸರಿನ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇಂತಹ ಕಾಯಿಲೆ ಹೊಂದಿದವರಲ್ಲಿ ಹಿಂಸಾ ಪ್ರವೃತ್ತಿ ಇರುತ್ತದೆ. ಈ ಕಾಯಿಲೆ ಇರುವ ವ್ಯಕ್ತಿಗಳು ಜನರಿಗೆ ಹೊಡೆಯಬಹುದು. ಹೀಗಾಗಿ ಪ್ರಿಯಾಂಕಾ ಸಾರ್ವಜನಿಕ ಜೀವನಕ್ಕೆ ಯೋಗ್ಯರಲ್ಲ ಎಂದು ಹೇಳಿದ್ದಾರೆ.

ಪ್ರಿಯಾಂಕ ಗಾಂಧಿ ಮಾನಸಿಕ ಸಮತೋಲನ ಕಳೆದುಕೊಳ್ಳುತ್ತಾರೆ ಎನ್ನುವ ಮಾಹಿತಿ ಸಾರ್ವಜನಿಕರಿಗೆ ತಿಳಿಯಬೇಕು. ಮರೆ ಮಾಚಿರುವ ಈ ಸತ್ಯ ಎಲ್ಲರಿಗೂ ಗೊತ್ತಾಗಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಸಕ್ರಿಯ ರಾಜಕೀಯಕ್ಕೆ ಕಾಲಿಟ್ಟ ಪ್ರಿಯಾಂಕ ಗಾಂಧಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಇದೇ ಮೊದಲೇನಲ್ಲ. ಈಗಾಗಲೇ ಅನೇಕ ಬಿಜೆಪಿ ನಾಯಕರು ಪ್ರಿಯಾಂಕ ಗಾಂಧಿ ಪತಿ ರಾಬರ್ಟ್ ವಾದ್ರಾ ಮೇಲಿರುವ ಭೂ ವಿವಾದ ಆರೋಪವನ್ನು ಮುಖ್ಯವಾಗಿಟ್ಟುಕೊಂಡು ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಪ್ರಧಾನಿ, ಅಜ್ಜಿ ಇಂದಿರಾ ಗಾಂಧಿ ಚರಿಷ್ಮವನ್ನು ಹೊಂದಿರುವ ಪ್ರಿಯಾಂಕ ಗಾಂಧಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಸ್ತ್ರವಾಗಿದ್ದಾರೆ. ಹೀಗಾಗಿ ಅವರ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸುತ್ತಿವೆ ಎಂದು ಪಕ್ಷದ ನಾಯಕರು ಸಮರ್ಥಿಸಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *