ಕೋಲಾರ: ವೇದಿಕೆಯ ಮುಂದೆ ಖಾಲಿ ಖಾಲಿ ಕುರ್ಚಿ ಕಂಡು ಕೇವಲ 15 ನಿಮಿಷಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಾಷಣ ಮುಗಿಸಿದ್ದಾರೆ.
ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಕ್ಷೀರ ಕ್ರಾಂತಿಯ ಹರಿಕಾರ ಎಂ.ವಿ.ಕೃಷ್ಣಪ್ಪ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಮತ್ತು ಸಿದ್ದರಾಮಯ್ಯ ಜೊತೆಯಾಗಿ ಚಾಲನೆ ನೀಡಿದ್ದರು.
ಸಿದ್ದರಾಮಯ್ಯ ಅವರು ಭಾಷಣ ಆರಂಭಿಸುವ ವೇಳೆಗೆ ಮಧ್ಯಾಹ್ನವಾಗಿತ್ತು. ಇತ್ತ ಬೆಳಗ್ಗೆಯಿಂದ ಕಾದು ಕುಳಿತಿದ್ದ ರೈತರು ಹಸಿವು ತಾಳಲಾರದೆ ಮನೆಯತ್ತ ಹೆಜ್ಜೆ ಹಾಕಿದ್ದರು. ಇದರಿಂದಾಗಿ ಗಣ್ಯರ ಗ್ಯಾಲರಿ ಹೊರತುಪಡಿಸಿ, ರೈತರು, ಸಾರ್ವಜನಿಕರಿದ್ದ ಕುರ್ಚಿಗಳು ಖಾಲಿ ಖಾಲಿಯಾಗಿದ್ದವು. ಇದನ್ನು ಅರಿತ ಸಿದ್ದರಾಮಯ್ಯ ಅವರು ಮುಜುಗರ ತಪ್ಪಿಸಲು ಕೇವಲ 15 ನಿಮಿಷದಲ್ಲಿಯೇ ಭಾಷಣ ಮುಗಿಸಿದರು.
ಹೈನೋದ್ಯಮಕ್ಕೆ ತಮ್ಮದೆಯಾದ ಕೊಡುಗೆ ನೀಡಿದ ಎಂ.ವಿ.ಕೃಷ್ಣಪ್ಪ ಅವರ ಜ್ಞಾನಪಕಾರ್ಥವಾಗಿ ಅವರ ಪತ್ನಿ ಪ್ರಮೀಳಾ ಕೃಷ್ಣಪ್ಪ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಂದ ಸಾವಿರಾರರು ಜನರು ಆಗಮಿಸಿದ್ದರು. ಕೃಷಿ ಸಚಿವ ಶಿವಶಂಕರರೆಡ್ಡಿ, ಸ್ಪೀಕರ್ ರಮೇಶ್ ಕುಮಾರ್, ಸಂಸದ ಕೆ.ಎಚ್.ಮುನಿಯಪ್ಪ, ಸೇರಿದಂತೆ ಪಕ್ಷಾತೀತವಾಗಿ ಎರಡು ಜಿಲ್ಲೆಯ ಶಾಸಕರುಗಳು ಭಾಗವಹಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv