Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿತ್ರದುರ್ಗ ಪೊಲೀಸರಿಂದ ನಾಟಕ ಪ್ರದರ್ಶನ – ಸಿಬ್ಬಂದಿ ಅಭಿನಯಕ್ಕೆ ಮನಸೋತ ಅಧಿಕಾರಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಚಿತ್ರದುರ್ಗ ಪೊಲೀಸರಿಂದ ನಾಟಕ ಪ್ರದರ್ಶನ – ಸಿಬ್ಬಂದಿ ಅಭಿನಯಕ್ಕೆ ಮನಸೋತ ಅಧಿಕಾರಿಗಳು

Chitradurga

ಚಿತ್ರದುರ್ಗ ಪೊಲೀಸರಿಂದ ನಾಟಕ ಪ್ರದರ್ಶನ – ಸಿಬ್ಬಂದಿ ಅಭಿನಯಕ್ಕೆ ಮನಸೋತ ಅಧಿಕಾರಿಗಳು

Public TV
Last updated: February 4, 2019 1:34 pm
Public TV
Share
1 Min Read
CTD POLICE
SHARE

ಚಿತ್ರದುರ್ಗ: ಪೊಲೀಸರು ಅಂದರೆ ಕೇವಲ ಕಾನೂನು ಪಾಲಕರು ಅಷ್ಟೇ ಅಂತ ಭಾವಿಸಿದ್ದೇವೆ. ಆದರೆ ಪೊಲೀಸರಲ್ಲೂ ಅದ್ಭುತ ಕಲಾವಿದರಿದ್ದಾರೆ ಎಂಬುದನ್ನ ಚಿತ್ರದುರ್ಗ ಪೊಲೀಸರು ಸಾಬೀತುಪಡಿಸಿದ್ದಾರೆ.

ದಿನ ನಿತ್ಯ ಒತ್ತಡದಿಂದ ಕಾರ್ಯನಿರ್ವಹಿಸುತ್ತಿದ್ದ ಪೊಲೀಸರು ಅವರ ದೈನಂದಿನ ಒತ್ತಡದ ಬದುಕನ್ನು ಬದಿಗಿಟ್ಟು, ಮುಖಕ್ಕೆ ಬಣ್ಣ ಹಚ್ಚಿ ವೇದಿಕೆ ಮೇಲೆ ತಮ್ಮೊಳಗಿದ್ದ ಕಲೆಯನ್ನ ಹೊರಹಾಕುವ ಪ್ರಯತ್ನ ಮಾಡಿದ್ದಾರೆ. ಚಿತ್ರದುರ್ಗದ ಪೊಲೀಸ್ ಪೇದೆಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಕೂಡ ಮುಖಕ್ಕೆ ಬಣ್ಣ ಹಚ್ಚಿ  ಪೊಲೀಸ್ ಕವಾಯತು ಮೈದಾನದಲ್ಲಿ ನಾಟಕ ಪ್ರದರ್ಶಿಸಿದ್ದಾರೆ.

CTD

ಪೊಲೀಸ್ ಸಿಬ್ಬಂದಿ ಸಾಮಾಜಿಕ ಕಳಕಳಿಯ ನಾಟಕವಾಡುವ ಮೂಲಕ ನೆರದಿದ್ದ ಜನರಿಗೆ ಜಾಗೃತಿ ಮೂಡಿಸುವ ನೆಪದಲ್ಲಿ ತಮ್ಮಲ್ಲಿರುವ ಪ್ರತಿಭೆಯನ್ನ ಹೊರಹಾಕಿದ್ದಾರೆ. ಈ ಸದಾವಕಾಶವನ್ನ ಚಿತ್ರದುರ್ಗ ಜಿಲ್ಲೆಗೆ ಹೊಸದಾಗಿ ಬಂದಿರುವ ಖಡಕ್ ಎಸ್‍ಪಿ ಡಾ.ಅರುಣ್ ಕಲ್ಪಿಸಿದ್ದರು.

ಪೊಲೀಸ್ ಪೇದೆಗಳಿಗೆ ಮನರಂಜನೆ ನೀಡುವ ಮೂಲಕ ಅವರ ಒತ್ತಡವನ್ನ ನಿವಾರಣೆ ಮಾಡುವುದಕ್ಕೆ ಮುಂದಾದ ಎಸ್‍ಪಿ ಸಾಹೇಬ್ರು, ಆಡಿಶನ್ ಮಾಡಿ ಅವರಲ್ಲಿ ಸೂಕ್ತ ಪ್ರತಿಭೆ ಇರುವವರನ್ನು ಆಯ್ಕೆ ಮಾಡಿದ್ದರು. ಬಳಿಕ ಅವರಿಂದ `ಅಣ್ಣನ ಒಡಲು ಬಂಗಾರದ ಕಡಲು’ ಎಂಬ ಸಾಮಾಜಿಕ, ಕೌಟುಂಬಿಕ ಹಾಸ್ಯಭರಿತ ನಾಟಕವನ್ನ ಪ್ರದರ್ಶಿಸಿದ್ದರು.

CTD 2

ಈ ಕೌಟುಂಬಿಕ ಸಮಸ್ಯೆ ಕುರಿತ ನಾಟಕ ವೀಕ್ಷಿಸಲು ಪೂರ್ವ ವಲಯದ ಡಿಐಜಿ ಬಿ.ದಯಾನಂದ್, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್.ಬಿ.ವಸ್ತ್ರಮಠ್, ಜಿಲ್ಲಾಧಿಕಾರಿ ವಿನೋದ ಪ್ರಿಯಾ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಆಗಮಿಸಿದ್ದರು. ಈ ವೇಳೆ ಚಿತ್ರದುರ್ಗ ಡಿವೈಎಸ್‍ಪಿ ಸಂತೋಷ್ ಅವರ ನೃತ್ಯದ ಝಲಕ್ ವೀಕ್ಷಿಸಿ ಫುಲ್ ಎಂಜಾಯ್ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:ChitradurgadramapolicePublic TVTalentಚಿತ್ರದುರ್ಗನಾಟಕಪಬ್ಲಿಕ್ ಟಿವಿಪೊಲೀಸ್ಪ್ರತಿಭೆ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

IPL 2026 1
Bengaluru City

IPL 2026 | ಇಂದಿನಿಂದ ಚುಟುಕು ಕ್ರಿಕೆಟ್ ಹಬ್ಬ – 18 ವರ್ಷಗಳ ಬಳಿಕ ಬೆಂಗಳೂರಲ್ಲಿ ಐಪಿಎಲ್ ಉದ್ಘಾಟನೆ

Public TV
By Public TV
9 minutes ago
KP Sharma Oli
Latest

ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ, ಮಾಜಿ ಗೃಹಸಚಿವ ಅರೆಸ್ಟ್‌

Public TV
By Public TV
10 minutes ago
container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
9 hours ago
01 17
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-1

Public TV
By Public TV
9 hours ago
02 16
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-2

Public TV
By Public TV
9 hours ago
03 14
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-3

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?