ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಫೆ.16 ರಂದು ಹುಟ್ಟುಹಬ್ಬವನ್ನು ಆಚರಿಸಲಿದ್ದು, ದಾಸನ ಹುಟ್ಟುಹಬ್ಬಕ್ಕೆಂದೇ ವಿಶೇಷ ಫೋಟೋವೊಂದು ಹರಿದಾಡುತ್ತಿದೆ.
ದರ್ಶನ್ ಹುಟ್ಟುಹಬ್ಬವಿರುವ ಕಾರಣ ಅಭಿಮಾನಿಗಳೆಲ್ಲ ಸೇರಿ ತಮ್ಮ ನೆಚ್ಚಿನ ನಟನ ಕಾಮನ್ ಡಿಪಿ ಮಾಡಿದ್ದಾರೆ. ಈ ಕಾಮನ್ ಡಿಪಿಯನ್ನು ದರ್ಶನ್ ಹುಟ್ಟುಹಬ್ಬದ ದಿನ ಎಲ್ಲ ಅಭಿಮಾನಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಳ್ಳಲಿದ್ದಾರೆ. ಇದನ್ನೂ ಓದಿ: ಹುಟ್ಟುಹಬ್ಬ ಅದ್ಧೂರಿಯಾಗಿ ಆಚರಿಸಿಕೊಳ್ಳಲ್ಲ ಡಿ ಬಾಸ್!
ದರ್ಶನ್ ಅವರ ಕಾಮನ್ ಡಿಪಿಯನ್ನು ‘ಯಜಮಾನ’ ಚಿತ್ರದ ಫೋಟೋ ಬಳಸಿ ಮಾಡಿದ್ದಾರೆ. ಯಜಮಾನದ ಫೋಟೋ ಜೊತೆಗೆ ದರ್ಶನ್ ಅವರ ಬಹುನಿರೀಕ್ಷಿತ ‘ಕುರುಕ್ಷೇತ್ರ’ ಚಿತ್ರದ ದುರ್ಯೋಧನ ಪಾತ್ರದ ಫೋಟೋ ಕೂಡ ಬ್ಯಾಕ್ಗ್ರೌಂಡ್ನಲ್ಲಿ ಬಳಸಿದ್ದಾರೆ. ದರ್ಶನ್ ಹುಟ್ಟುಹಬ್ಬ ಎಂದರೆ ಅವರ ಅಭಿಮಾನಿಗಳಿಗೆ ಹಬ್ಬದ ವಾತವರಣ ಸೃಷ್ಟಿ ಆಗಲಿದೆ. ಹಾಗಾಗಿ ಅವರು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ‘ಬಾಸ್ ಪರ್ವ… ಸುಲ್ತಾನ್ ಸಂಭ್ರಮ’ ಎಂದು ಹೆಸರಿಟ್ಟು ಆಚರಿಸುತ್ತಿದ್ದಾರೆ. ಇದನ್ನೂ ಓದಿ: ಸರಳವಾಗಿ ಬರ್ತ್ ಡೇ ಆಚರಿಸಿ- ದರ್ಶನ್ ಹೇಳಿಕೆಯ ಹಿಂದಿದೆ ಮತ್ತೊಂದು ಕಾರಣ
???????? pic.twitter.com/HicckaPmHw
— Darshan Thoogudeepa (@dasadarshan) January 16, 2019
ದರ್ಶನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಂಬಿ ಅಪ್ಪಾಜಿ ತಮ್ಮಿಂದ ದೂರವಾದ ಹಿನ್ನೆಲೆಯಲ್ಲಿ ಅಭಿಮಾನಿಗಳಿಗೆ ಸರಳವಾಗಿ ಹುಟ್ಟುಹಬ್ಬ ಆಚರಿಸಿ ಎಂದು ಮನವಿ ಮಾಡಿಕೊಂಡಿದ್ದರು. ಅಲ್ಲದೇ ಈ ಸಂಭ್ರಮಾಚಾರಣೆಯ ಸಂದರ್ಭದಲ್ಲಿ ನಮ್ಮ ಮನೆಯ ಅಕ್ಕ-ಪಕ್ಕದ ನಿವಾಸಿಗಳಿಗೆ ತೊಂದರೆ ಕೊಡುವುದು, ಪಟಾಕಿ ಹೊಡೆಯುವುದು, ಕಾಂಪೌಂಡ್ ಹತ್ತುವುದು, ಹೂ ಕುಂಡಗಳನ್ನು ಬೀಳಿಸುವುದು, ಅವರ ಸ್ವತ್ತುಗಳಿಗೆ ಹಾನಿ ಮಾಡುವುದು ಇಂತಹ ಅನುಚಿತ ವರ್ತನೆ ತೋರಬಾರದು, ನನ್ನ ಬಗ್ಗೆ ಇಷ್ಟೆಲ್ಲ ಪ್ರೀತಿ ಅಭಿಮಾನ ಇಟ್ಟಿರುವ ನೀವು ನನ್ನ ಕೋರಿಕೆಯನ್ನು ಈಡೇರಿಸುತ್ತೀರಾ ಎನ್ನವ ನಂಬಿಕೆ ಇದೆ ಎಂದು ಪೋಸ್ಟ್ ಮಾಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv