ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಸಿಮೀತ ಓವರ್ ಗಳ ಸರಣಿ ಆರಂಭ ಆಗುವ ಮೊದಲೇ ಟೀಂ ಇಂಡಿಯಾ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ಸರಣಿಯಿಂದ ಹೊರ ಬಿದ್ದಿದ್ದಾರೆ.
ಹಾರ್ದಿಕ್ ಪಾಂಡ್ಯ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಪರಿಣಾಮ ಬಿಸಿಸಿಐ ತಜ್ಞ ವೈದ್ಯಕೀಯ ತಂಡ ವಿಶ್ರಾಂತಿ ಪಡೆಯಲು ಸೂಚನೆ ನೀಡಿದೆ. ಪಾಂಡ್ಯ ಸ್ಥಾನದಲ್ಲಿ ರವೀಂದ್ರ ಜಡೇಜಾರನ್ನು ಆಯ್ಕೆ ಮಾಡಿದೆ. ಈ ಹಿಂದೆ ಏಷ್ಯಾ ಕಪ್ ವೇಳೆಯೂ ಪಾಂಡ್ಯ ಬೆನ್ನು ನೋವಿನ ಸಮಸ್ಯೆಯಿಂದ ಟೂರ್ನಿಯಿಂದ ಹೊರಗುಳಿದಿದ್ದರು.
NEWS: Hardik Pandya ruled out of Paytm Australia’s tour of India due to lower back stiffness. @imjadeja has been named replacement for Hardik Pandya for the 5 ODIs #AUSvIND pic.twitter.com/l8DUOuDlU3
— BCCI (@BCCI) February 21, 2019
ಬೆಂಗಳೂರಿನ ಕ್ರಿಕೆಟ್ ಆಕಾಡೆಮಿಯಲ್ಲಿ ಟೀಂ ಇಂಡಿಯಾ ಆಟಗಾರರು ತರಬೇತಿ ಪಡೆಯುತ್ತಿದ್ದು, ವಿಶ್ವಕಪ್ ದೃಷ್ಟಿಯಿಂದ ಟೀಂ ಇಂಡಿಯಾಗೆ ಆಸೀಸ್ ಸರಣಿ ಮಹತ್ವದಾಗಿದೆ. ವಿಶ್ವಕಪ್ ಸರಣಿಗೆ ಟೀಂ ಇಂಡಿಯಾ 15 ಆಟಗಾರರನ್ನು ಆಯ್ಕೆ ಮಾಡಲು ಆಸೀಸ್ ಸರಣಿಯ ಪ್ರದರ್ಶನ ನೆರವಾಗಲಿದೆ.
ಫೆ.24 ರಿಂದ ಆಸೀಸ್ ವಿರುದ್ಧದ ಸರಣಿ ಆರಂಭವಾಗಲಿದ್ದು, 2 ಟಿ20 ಪಂದ್ಯ ಸೇರಿದಂತೆ 5 ಏಕದಿನ ಕ್ರಿಕೆಟ್ ಪಂದ್ಯಗಳು ನಡೆಯಲಿದೆ. ಕಾಫಿ ವಿತ್ ಕರಣ್ ಶೋನಲ್ಲಿ ಅಸಭ್ಯ ಹೇಳಿಕೆ ನೀಡಿ ನಿಷೇಧಕ್ಕೆ ಒಳಗಾಗಿದ್ದ ಪಾಂಡ್ಯ ನ್ಯೂಜಿಲೆಂಡ್ ಸರಣಿಗೆ ಕಮ್ ಬ್ಯಾಕ್ ಮಾಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv