Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದು ವಾರದ ಯುದ್ಧವಲ್ಲ, ವಿವಿಧ ರೂಪಗಳಲ್ಲಿ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಬೇಕಿದೆ: ಅರುಣ್ ಜೇಟ್ಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಒಂದು ವಾರದ ಯುದ್ಧವಲ್ಲ, ವಿವಿಧ ರೂಪಗಳಲ್ಲಿ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಬೇಕಿದೆ: ಅರುಣ್ ಜೇಟ್ಲಿ

Latest

ಒಂದು ವಾರದ ಯುದ್ಧವಲ್ಲ, ವಿವಿಧ ರೂಪಗಳಲ್ಲಿ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಬೇಕಿದೆ: ಅರುಣ್ ಜೇಟ್ಲಿ

Public TV
Last updated: February 23, 2019 1:05 pm
Public TV
Share
2 Min Read
Arun Jaitley
SHARE

ನವದೆಹಲಿ: ಪುಲ್ವಾಮಾ ಭಯೋತ್ಪಾದನಾ ದಾಳಿಗೆ ಕಾರಣವಾದ ಪಾಕಿಸ್ತಾನ ವಿರುದ್ಧ ನಿರ್ಣಾಯಕ ಯುದ್ಧವನ್ನು ಗೆಲ್ಲಲು ರಾಜತಾಂತ್ರಿಕ ಅಥವಾ ಇತರ ಕ್ರಮಗಳನ್ನು ಭಾರತವು ಕೈಗೊಳ್ಳಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಶುಕ್ರವಾರ ಹೇಳಿದ್ದಾರೆ.

ದೆಹಲಿಯ ಗ್ಲೋಬಲ್ ಬ್ಯುಸಿನೆಸ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನವು ರಾಕ್ಷಸ ರಾಜ್ಯ. ಪುಲ್ವಾಮಾ ದಾಳಿಗೆ ಕಾರಣವಾದ ಉಗ್ರರ ವಿರುದ್ಧ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಆದರೆ ಉಗ್ರರು ತಾವೇ ದಾಳಿ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದು ಪಾಕಿಸ್ತಾನ ಸರ್ಕಾರದ ಮೊಂಡ ವಾದದ ವಿರುದ್ಧ ಗುಡುಗಿದರು.

Pulwama terror attack kashmir

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾಷಣವನ್ನು ಪ್ರಸ್ತಾಪಿಸಿದ ಜೇಟ್ಲಿ, ದಾಳಿಗೆ ಸಂಬಂಧಿಸಿದ ಸೂಕ್ತ ಗುಪ್ತಚರ ಮಾಹಿತಿಯನ್ನು ನೀಡುವಂತೆ ಅಲ್ಲಿನ ಸರ್ಕಾರದ ಮುಖ್ಯಸ್ಥರು ಹೇಳುತ್ತಿದ್ದಾರೆ. ಈ ರೀತಿ ಕೇಳುತ್ತಿರುವುದು ದೊಡ್ಡ ಅಪರಾಧ. ದಾಳಿಯ ಹೊಣೆ ಹೊತ್ತ ವ್ಯಕ್ತಿ ನಿಮ್ಮ ದೇಶದವನೇ ಆಗಿದ್ದಾನೆ. ನಿಮ್ಮ ನೆಲದಲ್ಲಿ ಇದ್ದುಕೊಂಡು ಇಂತಹ ಕೃತ್ಯಗಳನ್ನು ಎಸಗುತ್ತಿದ್ದಾರೆ. ಇದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ಕಿಡಿಕಾರಿದರು.

ದಾಳಿಯ ವಿಚಾರವಾಗಿ ಪಾಕಿಸ್ತಾನವು ಹುಲಿಯ ಮೇಲೆ ಸವಾರಿ ಮಾಡುತ್ತಿದೆ. ಆದರೆ ಸವಾರಿ ಮಾಡುವವರನ್ನು ಎಂದಿಗೂ ಹುಲಿ ಉಳಿಸಿಕೊಳ್ಳುವುದಿಲ್ಲ. ಕಾಶ್ಮೀರದ ಪುಲ್ವಾಮಾದಲ್ಲಿ ಫೆಬ್ರವರಿ 14ರಂದು ನಡೆದ ದಾಳಿಯಲ್ಲಿ 40 ಯೋಧರು ಹುತಾತ್ಮರಾಗಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

modi imran khan

ನಮ್ಮ ಜೀವಿತಾವಧಿಯಲ್ಲಿ ನಾವು ಯುದ್ಧ, ಮಾನವ ದುರಂತಗಳನ್ನು ನೋಡಿದ್ದೇವೆ. ಭಯೋತ್ಪಾದಕರು ಹತ್ಯೆಗೈದಿದ್ದ ಪ್ರಧಾನ ಮಂತ್ರಿಗಳನ್ನು ನಾವು ನೋಡಿದ್ದೇವೆ. ಆದರೆ ಹಿಂದಿನ ಸಂದರ್ಭಗಳಿಗಿಂತ ಈ ಬಾರಿಯ ಕೋಪವು ತೀವ್ರವಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದಾಳಿಗೆ ಪ್ರತ್ಯುತ್ತರ ನೀಡಲು ಎಲ್ಲ ಕ್ರಮಗಳನ್ನು ಅನುಸರಿಸುತ್ತಿದ್ದಾರೆ. ಹೀಗಾಗಿ ಈ ಯುದ್ಧವು ನಮಗೆ ನಿರ್ಣಾಯಕವಾಗಿದ್ದು, ಜಯ ಸಾಧಿಸಲು ಸಿದ್ಧರಾಗಬೇಕು. ನಮ್ಮ ನೆರೆಯ ರಾಕ್ಷಸ ಪಾಕಿಸ್ತಾನವು ತನ್ನ ಸಾಂಪ್ರದಾಯಿಕ ಪ್ರವೃತ್ತಿಯನ್ನು ಮುಂದುವರಿಸುತ್ತಿದೆ. ಇದು ಕೇವಲ ಒಂದು ವಾರದ ಯುದ್ಧವಲ್ಲ. ವಿವಿಧ ರೂಪಗಳಲ್ಲಿ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಬೇಕಿದೆ ಎಂದರು.

ARUN JAITLEY 2

ಪಾಕಿಸ್ತಾನದೊಂದಿಗೆ ಭಾರತ ಕ್ರಿಕೆಟ್ ಪಂದ್ಯಗಳನ್ನು ಆಡುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ದೇಶವು ಅವರೊಂದಿಗೆ ಸೌಹಾರ್ದ ಅಥವಾ ಸ್ಪರ್ಧಾತ್ಮಕ ಪಂದ್ಯಗಳನ್ನು ಆಡುವಂತಿಲ್ಲ. ಇದು ದೇಶದ ಜನರ ಭಾವನೆಗೆ ಸಂಬಂಧಿಸಿದ ವಿಷಯವಾಗಿದೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Arun JaitleyFinance MinisterpakistanPublic TVPulwama terror attackಕೇಂದ್ರ ಸಚಿವ ಅರುಣ್ ಜೇಟ್ಲಿಪಬ್ಲಿಕ್ ಟಿವಿಪಾಕಿಸ್ತಾನಪುಲ್ವಾಮಾ ದಾಳಿ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

IndiGo Flight
Latest

ವಿಮಾನಯಾನಕ್ಕೂ ತಟ್ಟಿದ ಸಂಘರ್ಷದ ಎಫೆಕ್ಟ್‌ – ಇಂಡಿಗೋ ವಿಮಾನದಲ್ಲಿ ಇಂಧನ ಬೆಲೆ ನಿಗದಿ

Public TV
By Public TV
22 minutes ago
WhatsApp Image 2026 03 13 at 9.50.51 PM
Districts

ಡಿಸಿಎಂ ಡಿಕೆಶಿ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ

Public TV
By Public TV
33 minutes ago
Auto LPG
Chamarajanagar

ಚಾ.ನಗರ: ಮಧ್ಯಪ್ರಾಚ್ಯ ಯುದ್ಧದ ಎಪೆಕ್ಟ್ – ಗ್ಯಾಸ್ ಇಲ್ಲದೇ ಬಂಕ್ ಕ್ಲೋಸ್

Public TV
By Public TV
48 minutes ago
01 7
Big Bulletin

ಬಿಗ್‌ ಬುಲೆಟಿನ್‌ 13 March 2026 ಭಾಗ-1

Public TV
By Public TV
49 minutes ago
02 7
Big Bulletin

ಬಿಗ್‌ ಬುಲೆಟಿನ್‌ 13 March 2026 ಭಾಗ-2

Public TV
By Public TV
51 minutes ago
03 7
Big Bulletin

ಬಿಗ್‌ ಬುಲೆಟಿನ್‌ 13 March 2026 ಭಾಗ-3

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?