ಬೆಂಗಳೂರು: ಏರೋ ಇಂಡಿಯಾ 2019ರ ಏರ್ ಶೋ ವೇಳೆ ಮತ್ತೆ ಅಗ್ನಿ ಅವಘಢ ಸಂಭವಿಸಿದೆ.
ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ನಡೆಯುತ್ತಿದ್ದು, ಏರ್ ಪೋರ್ಸ್ ರಸ್ತೆಯ ಗೇಟ್ ನಂಬರ್ 5ರ ಬಳಿ ಬೆಂಕಿ ಕಾಣಿಸಿಕೊಂಡಿದೆ. ಐದು ಕಾರು ಮತ್ತು ಒಂದು ಬೈಕಿಗೆ ಬೆಂಕಿ ಹತ್ತಿಕೊಂಡಿದೆ ಎಂಬ ಮಾಹಿತಿಗಳು ಲಭ್ಯವಾಗಿದೆ.
ಮೊದಲನೇ ಹಂತದ ವಿಮಾನ ಹಾರಾಟ ಮುಕ್ತಾಯಗೊಂಡಿದ್ದು, ಇಂದು ಮತ್ತು ನಾಳೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಹುಲ್ಲಿಗೆ ಕೆಲ ಕಿಡಿಗೇಡಿಗಳು ಸಿಗರೇಟ್ ಹಾಕಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಯಲಹಂಕದ ಮೈದಾನದಲ್ಲಿ ದಟ್ಟಹೊಗೆ ಕಾಣಿಸಿಕೊಂಡಿದ್ದು, ಈಗಾಗಲೇ ಅಗ್ನಿಶಾಮಕದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ತಲುಪಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.
ಇತ್ತೀಚೆಗಷ್ಟೇ ಏರ್ ಶೋದ ಅಂಗವಾಗಿ ನಡೆದ ತಾಲೀಮು ವೇಳೆ ಸೂರ್ಯ ಕಿರಣ್ ಎಂಬ ಎರಡು ವಿನಾನಗಳು ಹಾರಾಡುತ್ತಿದ್ದಾಗಲೇ ಪರಸ್ಪರ ಡಿಕ್ಕಿಯಾಗಿ ನೆಲಕ್ಕುರುಳಿತ್ತು. ಈ ಘಟನೆಯಲ್ಲಿ ಓರ್ವ ಪೈಲಟ್ ಸಾವನ್ನಪ್ಪಿದ್ದರು.
https://www.youtube.com/watch?v=S8anwX84c_8
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv