ದರ್ಶನ್ ನಂತ್ರ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಲ್ಲಿ ಮನವಿ

Public TV
1 Min Read
Puneeth Rajkumar

ಬೆಂಗಳೂರು: ಬಂಡೀಪುರ ಹುಲಿರಕ್ಷಿತಾರಣ್ಯ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನ್ಯಜೀವಿ ಸಂಕುಲಕ್ಕೆ ತೊಂದರೆಯಾಗಿದ್ದು, ಅರಣ್ಯ ಇಲಾಖೆ ಹಾಗು ಸ್ವಯಂಸೇವಕರ ಜೊತೆ ನಾವು ನಮ್ಮ ಸಹಾಯ ಹಸ್ತವನ್ನು ನೀಡೋಣ ಎಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಮನವಿ ಮಾಡಿಕೊಂಡಿದ್ದಾರೆ.

ಪುನೀತ್ ರಾಜ್‍ಕುಮಾರ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಬಂಡೀಪುರ ಅರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ವನ್ಯಜೀವಿಗಳು ಮತ್ತು ಅರಣ್ಯ ಸಂಪತ್ತು ಸಂಕಷ್ಟಕ್ಕೀಡಾಗಿದೆ. ಅರಣ್ಯ ಇಲಾಖೆ ಹಾಗು ಸ್ವಯಂಸೇವಕರ ಜೊತೆ ನಾವು ನಮ್ಮ ಸಹಾಯಹಸ್ತವನ್ನ ನೀಡೋಣ. “ಕಾಡಿದ್ದರೆ-ನಾಡು,ನಾವು” ವನ್ಯಜೀವಿಗಳ ರಕ್ಷಣೆ ನಮ್ಮ ಹೊಣೆ. ಮನುಷ್ಯನ ಹಾಗೆ ಗಿಡ ಮರ ಮತ್ತು ವನ್ಯಜೀವಿಗಳು ಒಂದು ಜೀವವೇ” ಎಂದು ಟ್ವೀಟ್ ಮಾಡಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೂಡ ಟ್ವಿಟ್ಟರಿನಲ್ಲಿ, “ಬಂಡೀಪುರ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನಜೀವಿ ಸಂಕುಲಕ್ಕೆ ತೊಂದರೆಯುಂಟಾಗಿದೆ. ಸರ್ಕಾರ, ಅರಣ್ಯ ಇಲಾಖೆ ಹಾಗೂ ಹಲವಾರು ಸ್ವಯಂಸೇವಕರು ಜೊತೆಗೂಡಿ ಈ ಅವಘಡವನ್ನು ಶಮನ ಮಾಡಲು ಯತ್ನಿಸುತ್ತಿದ್ದಾರೆ. ಆಸಕ್ತಿಯುಳ್ಳ ಸ್ವಯಂಸೇವಕರು ದಯಮಾಡಿ ಈ ಅಭಿಯಾನದಲ್ಲಿ ನೆರವಾಗಬೇಕಾಗಿ ವಿನಂತಿ” ಎಂದು ಟ್ವೀಟ್ ಮಾಡಿದ್ದರು.

ಕಳೆದ 5 ದಿನಗಳಿಂದ ಬಂಡೀಪುರ ಅಭಯಾರಣ್ಯದಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಅಗ್ನಿಶಾಮಕ ಇಲಾಖೆ ಸೇರಿದಂತೆ ಹಲವು ಸ್ವಯಂ ಸೇವಕರು ಈಗಾಗಲೇ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಸತತ ಪ್ರಯತ್ನ ನಡುವೆಯೂ ಬೆಂಕಿ ನರ್ತನ ಮುಂದುವರಿದಿದ್ದು, ಅನೇಕ ಪ್ರಾಣಿಗಳು ಬೆಂಕಿಯಲ್ಲಿ ಸಿಕ್ಕಿ ಭಸ್ಮವಾಗಿವೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *