ಆಂಧ್ರಪ್ರದೇಶ: ಲೋಕಸಭಾ ಚುನಾವಣೆಗೂ ಮುನ್ನ ಯುದ್ಧ ನಡೆಯುತ್ತದೆ ಎಂದು ಬಿಜೆಪಿ ನನಗೆ ಹೇಳಿತ್ತು ಅಂತಾ ನಟ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಕಡಪ ಜಿಲ್ಲೆಯಲ್ಲಿ ಪಕ್ಷದ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ನಾನು ನಿಮಗೆ 2 ವರ್ಷದ ಹಿಂದೆಯೇ ಯುದ್ಧ ನಡೆಯುವ ಬಗ್ಗೆ ಹೇಳಿದ್ದೆ. ದೇಶದಲ್ಲಿ ಎಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ನೀವೇ ಅರ್ಥ ಮಾಡಿಕೊಳ್ಳಿ ಎಂದು ತಿಳಿಸಿದ್ದಾರೆ.
ಪುಲ್ವಾಮಾ ದಾಳಿಯಿಂದ ಭಾರತ-ಪಾಕ್ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಸಮಸ್ಯೆಗೆ ಯುದ್ಧವೊಂದೇ ಪರಿಹಾರವಲ್ಲ. ಯುದ್ಧವಾದ್ರೆ ಉಭಯ ರಾಷ್ಟ್ರಗಳಿಗೆ ಅಪಾರ ಹಾನಿಯಾಗಲಿದೆ ಅಂದಿದ್ದಾರೆ.
ದೇಶದಲ್ಲಿ ಬಿಜೆಪಿಯವರು ತಾವು ಮಾತ್ರ ದೇಶಪ್ರೇಮಿಗಳು ಅನ್ನೋ ರೀತಿ ವರ್ತಿಸ್ತಿದ್ದಾರೆ. ನಾವು ಬಿಜೆಪಿಗಿಂತ 10 ಪಟ್ಟು ದೇಶಾಭಿಮಾನಿಗಳು ಎಂದು ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv