ಅಭಿನಂದನ್‍ಗೆ ಪರಮವೀರ ಚಕ್ರ ನೀಡಿ: ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ

Public TV
1 Min Read
Abhinandan Varthaman

ಚೆನ್ನೈ: ಪಾಕಿಸ್ತಾನದ ಬಂಧನದಲ್ಲಿದ್ದು ದೇಶಕ್ಕೆ ಮರಳಿದ ಭಾರತೀಯ ವಾಯು ಪಡೆಯ ಪೈಲಟ್ ಅಭಿನಂದನ್ ಅವರಿಗೆ ಪರಮವೀರ ಚಕ್ರ ಪ್ರಶಸ್ತಿ ನೀಡುವಂತೆ ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಪತ್ರ ಬರೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಪಳನಿಸ್ವಾಮಿ ಪತ್ರ ಬರೆದಿದ್ದು, ಪಾಕಿಸ್ತಾನದ ಎಫ್ 16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದ ಅಭಿನಂದನ್ ಅವರಿಗೆ ಪರಮವೀರ ಚಕ್ರ ನೀಡಿ ಗೌರವಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಅಭಿನಂದನ್ ಅವರು ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಉತ್ತಮ ಪ್ರದರ್ಶನ ಹಾಗೂ ಜವಾಬ್ದಾರಿ ಮೆರೆದಿದ್ದಾರೆ. ಅವರು ದೇಶದ ಜನರ ಮನಸ್ಸು ಗೆದ್ದಿದ್ದಾರೆ. ಹೀಗಾಗಿ ಭಾರತದ ಅತ್ಯುನ್ನತ ಸೇನಾ ಗೌರವವಾಗಿರುವ ಪರಮವೀರ ಚಕ್ರವನ್ನು ಅಭಿನಂದನ್ ಅವರಿಗೆ ನೀಡಬೇಕು ಎಂದು ಪಳನಿಸ್ವಾಮಿ ಒತ್ತಾಯಿಸಿದ್ದಾರೆ.

ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ 40ಕ್ಕೂ ಹೆಚ್ಚು ಸಿಆರ್‍ಪಿಎಫ್ ಯೋಧರು ಫೆಬ್ರವರಿ 14ರಂದು ಹುತಾತ್ಮರಾಗಿದ್ದರು. ಉಗ್ರರಿಗೆ ತಕ್ಕ ಪಾಠ ಕಲಿಸಲು ಭಾರತೀಯ ವಾಯು ಪಡೆಯು ಉಗ್ರರ ಮೂರು ನೆಲೆಗಳ ಫೆಬ್ರವರಿ 26ರಂದು ಏರ್ ಸ್ಟ್ರೈಕ್ ನಡೆಸಿತ್ತು. ನಂತರದ ದಿನ (ಫೆ.27ರಂದು) ಪಾಕಿಸ್ತಾನ ವಾಯು ಪಡೆಯ ಯುದ್ಧ ವಿಮಾನಗಳು ಗಡಿಯನ್ನು ದಾಟಿಬಂದು ಹಾರಾಟ ನಡೆಸಿದ್ದವು. ಈ ವೇಳೆ ಪಾಕಿಸ್ತಾನದ ಎಫ್ 16 ಯುದ್ಧ ವಿಮಾನವನ್ನು ಭಾರತೀಯ ಪೈಲಟ್ ಅಭಿನಂದನ್ ಅವರು ಹೊಡೆದುರುಳಿಸಿದ್ದರು. ಪ್ರಾಣಾಪಾಯದಿಂದ ಪಾರಾಗಿದ್ದ ಅವರು, ಪ್ಯಾರಾಚೂಟ್ ಸಹಾಯದಿಂದ ಕೆಳಗೆ ಹಾರಿದ್ದರು. ಆದರೆ ಅಭಿನಂದನ್ ಅವರು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬಿದ್ದಿದ್ದು, ಬಂಧನಕ್ಕೆ ಒಳಗಾಗಿದ್ದರು.

ABHI

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *