ಬೆಂಗಳೂರು: ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ಚುನಾವಣೆಯಲ್ಲಿ ಸ್ಪರ್ಧಿಸದ ವಿಚಾರವನ್ನು ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಸ್ವಾಗತಿಸಿ ದೇವೇಗೌಡ ಕುಟುಂಬಕ್ಕೆ ಟಾಂಗ್ ಕೊಟ್ಟಿದ್ದಾರೆ.
ಸೋಮವಾರದಂದು ನ್ಯಾಷನಲ್ ಕಾಂಗ್ರೆಸ್ ಪಕ್ಷದ (ಎನ್‍ಸಿಪಿ) ಮುಖ್ಯಸ್ಥರಾದ ಶರದ್ ಪವಾರ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ. ನಮ್ಮ ಕುಟುಂಬದ ಇಬ್ಬರು ಸದಸ್ಯರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಆದರಿಂದ ನಾನು ಲೋಕಸಭೆ ಚುನಾವಣೆ ಸ್ಪರ್ಧಿಸಲ್ಲ. ಈ ಹಿಂದೆ ನಾನು 14 ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ಈ ಬಗ್ಗೆ ಟ್ವೀಟ್ ಮಾಡಿ ಸುಧಾಕರ್ ಅವರು ಶರದ್ ಪವಾರ್ ಅವರ ನಿರ್ಧಾರವನ್ನು ಸ್ವಾಗತಿಸುವ ನಿಟ್ಟಿನಲ್ಲಿ ಪರೋಕ್ಷವಾಗಿ ಹೆಚ್.ಡಿ ದೇವೇಗೌಡರ ಕುಟುಂಬಕ್ಕೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:ಮತ್ತೆ ಸುಮಲತಾ ಪರ ಬ್ಯಾಟ್ ಬೀಸಿ ರೇವಣ್ಣಗೆ ಟಾಂಗ್ ಕೊಟ್ಟ ಸುಧಾಕರ್
The moot question is how many members of a single family should contest the Lok Sabbha election? Thanks to Sharad Pawar ji for your wise decision. Hope you will inspire & prevail some wisdom in Karnataka politicians too. pic.twitter.com/cjOE6Tsp33
— Dr Sudhakar K (@mla_sudhakar) March 12, 2019
ಟ್ವೀಟ್‍ನಲ್ಲಿ ಏನಿದೆ?
ಲೋಕಸಭೆ ಚುನಾವಣೆಯಲ್ಲಿ ಒಂದೇ ಕುಟುಂಬದ ಎಷ್ಟು ಮಂದಿ ಸ್ಪರ್ಧೆ ಮಾಡಬೇಕು ಎನ್ನುವುದೇ ವಿವಾದಾಸ್ಪದ ಪ್ರಶ್ನೆ. ಬುದ್ಧಿವಂತಿಕೆಯಿಂದ ನಿರ್ಧಾರ ತೆಗೆದುಕೊಂಡಿರುವುದಕ್ಕೆ ಶರದ್ ಪವಾರ್ ಅವರಿಗೆ ಧನ್ಯವಾದ. ನಿಮ್ಮ ಈ ನಿರ್ಧಾರದಿಂದ ಕರ್ನಾಟಕದ ರಾಜಕಾರಣಿಗಳಿಗೂ ಸ್ಪೂರ್ತಿ ಹಾಗೂ ಬುದ್ಧಿ ಬರಲಿ ಅಂತ ಆಶಿಸುತ್ತೇನೆ ಎಂದು ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:ಪುಟಗೋಸಿ ನಿಗಮ ಮಂಡಳಿಗಾಗಿ ಕಾರ್ಯಕರ್ತರಿಂದ ಹೋರಾಟ ಮಾಡಿಸಿದ್ರಿ: ಸುಧಾಕರ್‌ಗೆ ಜೆಡಿಎಸ್ ಟಾಂಗ್
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv