ಬೆಂಗಳೂರು: ಬಿಗ್‍ಬಾಸ್ ಸೀಸನ್ -6ರ ವಿನ್ನರ್, ಆಧುನಿಕ ರೈತ ಶಶಿಕುಮಾರ್ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರನ್ನು ಭೇಟಿ ಮಾಡಿದ್ದಾರೆ.
ಇತ್ತೀಚೆಗಷ್ಟೇ ಶಶಿ ರೋರಿಂಗ್ ಸ್ಟಾರ್ ಮುರಳಿ ಅವರನ್ನು ಭೇಟಿ ಮಾಡಿದ್ದಾರೆ. ಅಲ್ಲದೇ ಅವರನ್ನು ಭೇಟಿ ಮಾಡಿದ ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶಶಿ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಫೋಟೋ ಹಾಕಿ, “ಶ್ರೀಮುರಳಿ ಅವರನ್ನು ಭೇಟಿ ಮಾಡಿ ಖುಷಿಯಾಯಿತು. ನಾವಿಬ್ಬರು ಕೃಷಿ, ಬಿಗ್ ಬಾಸ್ ದಿನಗಳು ಹಾಗೂ ಚಿತ್ರರಂಗದ ಬಗ್ಗೆ ಮಾತನಾಡಿದ್ದೇವೆ” ಎಂದರು.
ಶಶಿ, ನಟ ಶ್ರೀಮುರಳಿ ಅವರನ್ನು ಭೇಟಿ ಮಾಡಿರುವುದು ಅವರ ಅಭಿಮಾನಿಗಳಿಗೆ ಕುತೂಹಲ ಮೂಡಿದೆ. ಅಲ್ಲದೆ ಶಶಿ ಸಿನಿಮಾದಲ್ಲಿ ನಟಿಸುತ್ತಿದ್ದಾರಾ ಎಂಬ ಪ್ರಶ್ನೆ ಅವರ ಅಭಿಮಾನಿಗಳಿಗೆ ಕಾಡುತ್ತಿದೆ. ಆದರೆ ಸ್ವತಃ ಶಶಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಾನು ಸಿನಿಮಾದ ಬಗ್ಗೆ ಏನೂ ಮಾತನಾಡಿಲ್ಲ. ನಾನು ಕೃಷಿ ಬಗ್ಗೆ ಕೆಲವು ವಿಚಾರಗಳನ್ನು ಅವರ ಜೊತೆ ಚರ್ಚಿಸಿದ್ದೇನೆ ಎಂದು ಹೇಳಿದ್ದಾರೆ.
ಶ್ರೀ ಮುರಳಿ ಈಗ ‘ಭರಾಟೆ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಬಳಿಕ ಅವರು ‘ಮದಗಜ’ ಚಿತ್ರದಲ್ಲಿ ನಟಿಸಲಿದ್ದಾರೆ. ಇನ್ನೂ ಶಶಿ ಕುಮಾರ್ ಟಿವಿ ಕಾರ್ಯಕ್ರಮದಲ್ಲಿ ಬ್ಯುಸಿ ಆಗಿದ್ದಾರೆ. ಅಲ್ಲದೆ ಸಿನಿಮಾದಲ್ಲಿ ಅವಕಾಶ ಸಿಕ್ಕರೆ ನಟಿಸುವುದಾಗಿ ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv