– ಆಪ್ತರ ಜೊತೆ ಪರಮೇಶ್ವರ್ ಬೇಸರ
– ಪಕ್ಷದಲ್ಲಿ ನನ್ನ ಮಾತಿಗೆ ಬೆಲೆಯಿಲ್ಲ
ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರ ಜೆಡಿಎಸ್‍ಗೆ ಬಿಟ್ಟುಕೊಟ್ಟ ವಿಚಾರವಾಗಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಅವರು ಹೇಳಿದ್ದಾರೆ.
ತುಮಕೂರು ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟ ವಿಚಾರವಾಗಿ ಜಿ.ಪರಮೇಶ್ವರ್ ಅವರು ನನ್ನ ಜೊತೆಗೆ ಫೋನ್‍ನಲ್ಲಿ ಮಾತನಾಡಿದ್ದಾರೆ. ಸ್ವಲ್ಪ ಬೇಜಾರಿನಿಂದ ಮಾತನಾಡಿದರು. ಆದರೆ ಮೈತ್ರಿ ನಿಯಮ ಎಲ್ಲರಿಗೂ ಅನ್ವಯವಾಗುತ್ತದೆ. ಹೀಗಾಗಿ ಹೈಕಮಾಂಡ್ ನಿರ್ಧಾರಕ್ಕೆ ಮಣಿದಿದ್ದಾರೆ ಎಂದು ಎಸ್.ಟಿ.ಸೋಮಶೇಖರ್ ಹೇಳಿದರು.
ನನ್ನ ಕ್ಷೇತ್ರವನ್ನೇ ಯಾಕೆ ಟಾರ್ಗೆಟ್ ಮಾಡಿದ್ದಾರೋ ಗೊತ್ತಿಲ್ಲ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಕ್ಷೇತ್ರವನ್ನು ಮಾತ್ರ ಉಳಿಸಿಕೊಂಡರು. ನನ್ನ ಜಿಲ್ಲೆ ಬಿಟ್ಟುಕೊಟ್ಟಿದ್ದು ಸರಿಯಲ್ಲವೆಂದು ಎಂದು ಜಿ.ಪರಮೇಶ್ವರ್ ಅವರು ಆಪ್ತರ ಮುಂದೆ ಅಸಮಾಧಾನ ಹೊರಹಾಕಿದ್ದಾರೆ ಅಂತ ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಪಕ್ಷದಲ್ಲಿ ನನ್ನ ಮಾತಿಗೆ ಬೆಲೆಯೇ ಇಲ್ಲದಂತಾಗಿದೆ. ನನ್ನ ಮೇಲೆ ಈ ಕೋಪವೇಕೆ? ತುಮಕೂರಿನ ಹಾಲಿ ಸಂಸದ ಮುದ್ದುಹನುಮೇಗೌಡ ಅವರು ಚೆನ್ನಾಗಿ ಕೆಲಸ ಮಾಡಿದ್ದರು. ಆದರೆ ಈ ಬಾರಿ ಅವರಿಗೆ ಯಾಕೆ ಅನ್ಯಾಯ ಮಾಡಿದರೋ ಗೊತ್ತಿಲ್ಲ. ಈ ರೀತಿ ಮಾಡಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv