Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರ ದುಡ್ಡು ಕದ್ದು ಬೇರೆಯವರಿಗೆ ಹಂಚುತ್ತಿದ್ದಾನೆ ಚೌಕಿದಾರ: ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜನರ ದುಡ್ಡು ಕದ್ದು ಬೇರೆಯವರಿಗೆ ಹಂಚುತ್ತಿದ್ದಾನೆ ಚೌಕಿದಾರ: ಖರ್ಗೆ

Districts

ಜನರ ದುಡ್ಡು ಕದ್ದು ಬೇರೆಯವರಿಗೆ ಹಂಚುತ್ತಿದ್ದಾನೆ ಚೌಕಿದಾರ: ಖರ್ಗೆ

Public TV
Last updated: March 17, 2019 3:30 pm
Public TV
Share
2 Min Read
MODI KHARGE
SHARE

ಕಲಬುರಗಿ: ಲೋಕಸಭಾ ಸಮರ ಹತ್ತಿರವಾಗುತ್ತಿದಂತೆ ಕಾಂಗ್ರೆಸ್ – ಬಿಜೆಪಿ ನಾಯಕರ ನಡುವಿನ ವಾಕ್ ಸಮರ ತಾರಕಕ್ಕೆ ಏರಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಚೌಕಿದಾರ್ ಹೇಳಿಕೆಗೆ ಸಂಸದ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಟಾಂಗ್ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಚೌಕಿದಾರ್’ ಏನಿದಾನೆ ಎಂದು ಜನರಿಗೆ ಗೊತ್ತಿದೆ. ಮೊದಲು ಪ್ರಧಾನಮಂತ್ರಿ ಅಲ್ಲ ಪ್ರಧಾನ ಸೇವಕ್ ಅಂತಿದ್ದವರು, ಈಗ ಚೌಕಿದಾರ್ ಎನ್ನುತ್ತಿದ್ದಾರೆ. ಬಿಜೆಪಿ ಸರ್ಕಾರ ಚೌಕಿದಾರ ದೇಶದಲ್ಲಿ ಆಗುವ ದೊಡ್ಡ ಹಗರಣಗಳಿಗೆ ರಕ್ಷಣೆ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿದರು.

mallikarjun kharge 1

ಚೌಕಿದಾರ ದೇಶದ ಸಂಪತ್ತು ರಕ್ಷಣೆ ಮಾಡುವುದು ಬಿಟ್ಟು ಬೇರೆಯವರಿಗೆ ದುಡ್ಡು ಮಾಡಿ ಕೊಡೋದು ಸರಿಯಲ್ಲ. ರಫೇಲ್ ಡೀಲ್, ದೊಡ್ಡ ದೊಡ್ಡ ಶ್ರೀಮಂತರು, ಕಂಪನಿಗಳ ಸಾಲ ಮನ್ನಾ ಮಾಡಿದ್ದರು. ಸುಮಾರು ಮೂರು ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದರು. ಈ ದುಡ್ಡು ಜನರದ್ದು, ರೈತರ ಸಾಲಮನ್ನಾ ಮಾಡಿ ಅಂದರೆ ಆಗಲ್ಲ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳುತ್ತಿದ್ದಾರೆ. ಈಗ ಎಲೆಕ್ಷನ್ ಟೈಮ್ ನಲ್ಲಿ ಎರಡೆರಡು ಸಾವಿರ ರೂ. ಮೊದಲ ಕಂತು ಬಿಡುಗಡೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ದೇಶದ ಒಬ್ಬ ರೈತನಿಗೆ ದಿನಕ್ಕೆ 16.40 ರೂ. ಕೊಟ್ಟು ದೇಶದ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿ ಮೋದಿ ದೇಶದ ದಿಕ್ಕು ತಪ್ಪಿಸುತ್ತಿದ್ದಾರೆ. ಈ ಚೌಕಿದಾರ ಸಾವಿರಾರು ಕೋಟಿ ರೂ. ಬೇರೆಯವರಿಗೆ ಲಾಭ ಮಾಡಿ ಕೊಡುತ್ತಿದ್ದಾರೆ. ಜನರ ದುಡ್ಡು ಕದ್ದು ಬೇರೆಯವರಿಗೆ ಹಂಚುತ್ತಿದ್ದಾರೆ. ಹೀಗಾಗಿ ‘ಚೌಕಿದಾರ್ ಚೋರ್ ಹೈ’ ಅಂತಾ ಹೇಳಿದ್ದೇವೆ. ಈಗ ತಾವೇ ಮರುನಾಮಕರಣ ಮಾಡಿಕೊಂಡಿದ್ದಾರೆ ಎಂದರು.

PM Narendra Modi 1

ಜನರು ‘ಚೌಕಿದಾರ್’ ಎಂಬ ಹೆಸರು ಕೊಟ್ಟಿಲ್ಲ. ಚೌಕಿದಾರ್ ಸ್ವಯಂ ಘೋಷಿತವಾದ ಹೆಸರು. ಜನರಿಗೆ ಯಾರು ಏನು ಅಂತ ಗೊತ್ತಿದೆ. ಲೋಕ್‍ಪಾಲ್ ಮಸೂದೆ ಇಷ್ಟು ವರ್ಷ ಯಾಕೆ ಜಾರಿ ಮಾಡಿಲ್ಲ? ಈ ಬಗ್ಗೆ ಪ್ರಧಾನಿಗೆ ಪತ್ರ ಬರೆದಿದ್ದರೂ ಪ್ರತಿಕ್ರಿಯೆ ನೀಡಿಲ್ಲ. ಚೌಕಿದಾರ್ ಎಂಬುವುದು ಚುನಾವಣಾ ಗಿಮಿಕ್ ಅಷ್ಟೇ ಎಂದು ಟೀಕಿಸಿದರು.

ಇದೇ ವೇಳೆ ತುಮಕೂರು ಲೋಕಸಭಾಕ್ಕೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಸ್ಪಷ್ಟನೆ ನೀಡಿದ ಅವರು, ಮುದ್ದಹನುಮೇಗೌಡರಿಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ. ದೆಹಲಿಯಲ್ಲಿ ಈ ಬಗ್ಗೆ ಎಲ್ಲರೂ ಸೇರಿ ಚರ್ಚೆ ಮಾಡಿದ್ದೇವೆ. ಹಾಲಿ ಸಂಸದರಿಗೆ ಟಿಕೆಟ್ ಸಿಗಬೇಕೆನ್ನುವುದು ಆಶಯ ಎಂದು ಹೇಳುವ ಮೂಲಕ ಡಿಸಿಎಂ ಪರಮೇಶ್ವರ್ ಅವರು ಬ್ಯಾಟಿಂಗ್ ನಡೆಸಿದರು.

G. Parameshwar

TAGGED:bjpChoukidarLok Sabha electionmallikarjun khargePublic TVಚೌಕಿದಾರ್ಪಬ್ಲಿಕ್ ಟಿವಿಬಿಜೆಪಿಮಲ್ಲಿಕಾರ್ಜುನ ಖರ್ಗೆಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

01 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-1

Public TV
By Public TV
32 minutes ago
02 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-2

Public TV
By Public TV
34 minutes ago
03 15
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-3

Public TV
By Public TV
36 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
54 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 hour ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?