ಬೆಂಗಳೂರು: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ನೀಡಿದ್ದ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಿ ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ.
ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಗಿಯುವವರೆಗೂ ವಿದ್ಯಾರ್ಥಿಗಳ ಹಳೆಯ ಪಾಸ್ ಚಾಲ್ತಿಯಲ್ಲಿ ಇರಲಿದೆ. ಹಳೆಯ ಪಾಸ್ ತೋರಿಸಿ ಎಲ್ಲಾ ಕೆಎಸ್‌ಆರ್‌ಟಿಸಿ ಬಸ್‍ಗಳಲ್ಲಿ ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
ಬಸ್ ಪಾಸ್ ದಿನಾಂಕ ಮುಗಿದಿದ್ದರೂ ಹಳೆಯ ಪಾಸ್ ತೋರಿಸುವ ವಿದ್ಯಾರ್ಥಿಗಳಿಗೆ ಪ್ರಯಾಣ ಮಾಡಲು ಅವಕಾಶ ನೀಡಬೇಕೆಂದು ನಿರ್ವಾಹಕರಿಗೆ ಸೂಚನೆ ನೀಡಲಾಗಿದೆ. ಹೀಗಾಗಿ ಹಳ್ಳಿಗಳಿಂದ ಬೇರೆ ಬೇರೆ ಕಡೆಯ ಪ್ರೌಢಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಹೆಚ್ಚು ಅವನುಕೂಲವಾಗಲಿದೆ.
ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾರ್ಚ್ 21 ರಿಂದ ಆರಂಭಗೊಂಡು ಏಪ್ರಿಲ್ 4ರಂದು ಮುಕ್ತಾಯವಾಗಲಿದೆ.