Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಾಕತ್ತಿದ್ದರೆ ನನ್ನ ಜೊತೆ ಸಂಸ್ಕೃತ ಶ್ಲೋಕ ಪಠಣೆ ಮಾಡಿ: ಮೋದಿ, ಶಾಗೆ ದೀದಿ ಸವಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತಾಕತ್ತಿದ್ದರೆ ನನ್ನ ಜೊತೆ ಸಂಸ್ಕೃತ ಶ್ಲೋಕ ಪಠಣೆ ಮಾಡಿ: ಮೋದಿ, ಶಾಗೆ ದೀದಿ ಸವಾಲ್

Latest

ತಾಕತ್ತಿದ್ದರೆ ನನ್ನ ಜೊತೆ ಸಂಸ್ಕೃತ ಶ್ಲೋಕ ಪಠಣೆ ಮಾಡಿ: ಮೋದಿ, ಶಾಗೆ ದೀದಿ ಸವಾಲ್

Public TV
Last updated: March 20, 2019 8:20 pm
Public TV
Share
1 Min Read
mamata banerjee
SHARE

ಕೋಲ್ಕತ್ತಾ: ತಾಕತ್ತಿದ್ದರೆ ನನ್ನ ಜತೆಗೆ ಸಂಸ್ಕೃತ ಶ್ಲೋಕಗಳನ್ನು ಪಠಣ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಡಕ್ ಸವಾಲು ಹಾಕಿದ್ದಾರೆ.

ಅಂತಾರಾಷ್ಟ್ರೀಯ ಮಾರ್ವಾಡಿ ಫೆಡರೇಶನ್ ಆಯೋಜಿಸಿದ್ದ ಹೋಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಮತಾ ಬ್ಯಾನರ್ಜಿ, ನಾವು ಹಲವಾರು ವರ್ಷಗಳಿಂದ ದುರ್ಗಾಪೂಜೆ ಮಾಡುತ್ತಿದ್ದೇವೆ. ನವರಾತ್ರಿ, ಛತ್ ಪೂಜಾ ಮತ್ತು ಗಣಪತಿ ವಂದನಾದಂತಹ ಧಾರ್ಮಿಕ ಆಚರಣೆಗಳನ್ನು ನಾವು ಎತ್ತಿ ಹಿಡಿದಿದ್ದೇವೆ. ಆದ್ರೆ ದಿಲ್ಲಿಯಲ್ಲಿ ಕುಳಿತ ಕೆಲವರು ನಮ್ಮತ್ತ ಕೈ ತೋರಿಸುತ್ತಿದ್ದಾರೆ. ರಾಜ್ಯದಲ್ಲಿ ಪೂಜೆ ಮಾಡುವುದು ಅಪರಾಧವೆನ್ನುವ ಪರಿಸ್ಥಿತಿ ಬಂದಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

mamata b

ದುರ್ಗಾ ಮೂರ್ತಿಗಳ ವಿಸರ್ಜನೆ ಹಾಗೂ ಶಾಲೆಗಳಲ್ಲಿ ಸರಸ್ವತಿ ಪೂಜೆಗೆ ತೃಣಮೂಲ ಕಾಂಗ್ರೆಸ್ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ಬಿಜೆಪಿ ಆರೋಪಿಸಿತ್ತು. ಆದರಿಂದ ಈ ವಿಚಾರವಾಗಿ ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ ಬಿಜೆಪಿ ನಾಯಕರಿಗೆ ಈ ಸವಾಲು ಹಾಕಿದ್ದಾರೆ. ಬರೀ ಹಣೆಯ ಮೇಲೆ ತಿಲಕ ಇಡುವುದೇ ಧಾರ್ಮಿಕ ಶೃದ್ಧೆಯ ಸಂಕೇತವಲ್ಲ. ನನ್ನ ಜೊತೆ ಸಂಸ್ಕೃತ ಶ್ಲೋಕಗಳ ಪಠಣದ ಸ್ಪರ್ಧೆಗೆ ಬನ್ನಿ ಎಂದು ನಾನು ಅಮಿತ್‍ಬಾಬು ಮತ್ತು ನರೇಂದ್ರಬಾಬು ಅವರಿಗೆ ಆಹ್ವಾನ ನೀಡುತ್ತಿದ್ದೇನೆ. ಸಂಸ್ಕೃತ ಶ್ಲೋಕಗಳ ಬಗ್ಗೆ ಯಾರಿಗೆ ಆಳವಾದ ಜ್ಞಾನವಿದೆ ಅಂತ ನೋಡೇ ಬಿಡೋಣ ಎಂದು ದೀದಿ ಸವಾಲು ಎಸೆದಿದ್ದಾರೆ.

MP Modi

ನಮ್ಮ ಆಡಳಿತದಲ್ಲಿ ಸರ್ಕಾರಿ ದೇವಾಲಯಗಳು ನವೀಕರಣವಾಗಿದೆ. ದಕ್ಷೀಣೇಶ್ವರದಲ್ಲಿ ಸ್ಕೈವಾಕ್ ನಿರ್ಮಾಣವಾಗಿದೆ. ಬಿಜೆಪಿ ಆಡಳಿತಕ್ಕೆ ಬಂದ ಮೇಲೆ ಎಷ್ಟು ದೇವಾಲಯಗಳು ನಿರ್ಮಾಣವಾಗಿದೆ? ಅವರಿಗೆ ಇಂದು ರಾಮ ಮಂದಿರವನ್ನು ಕಟ್ಟಿಸಲು ಆಗಲಿಲ್ಲ. ಕೇವಲ ಚುನಾವಣಾ ಭರವಸೆಗಳನ್ನು ಮಾತ್ರ ನೀಡುತ್ತಾರೆ ಎಂದರು.

ಇತ್ತಿಚಿಗೆ ಜನರು ಭಯದಲ್ಲಿ ಬದುಕುತ್ತಿದ್ದಾರೆ. ಅವರು ತಮ್ಮ ನಾಯಕರನ್ನು ಪ್ರೀತಿಸುವ ಬದಲು, ಅವರನ್ನು ನೋಡಿ ಹೆದರುತ್ತಿದ್ದಾರೆ. ಕೇಂದ್ರೀಯ ಸಂಸ್ಥೆಗಳಾದ ಸಿಬಿಐ ಹಾಗೂ ಇಡಿ ಅಧಿಕಾರಿಗಳು ರೇಡ್ ಮಾಡುತ್ತಿದ್ದಾರೆ. ಇದರಿಂದ ಉದ್ಯಮಿಗಳು ಹೆದರುತ್ತಿದ್ದಾರೆ. ಕೆಲವು ನಾಯಕರು ತಾವು ಕೊಟ್ಟ ಭರವಸೆಯನ್ನು ಉಳಿಕೊಳ್ಳಲಿಲ್ಲ. ಆದರೇ ನಾವು ನಮ್ಮ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ಹೇಳಿದರು.

TAGGED:Amit ShahbjpchallengekolkattaMamatha BanerjeemodiPublic TVಕೋಲ್ಕತ್ತಪಬ್ಲಿಕ್ ಟಿವಿಬಿಜೆಪಿಮಮತಾ ಬ್ಯಾನರ್ಜಿಮೋದಿಸವಾಲ್
Share This Article
Facebook Whatsapp Whatsapp Telegram

Cinema news

vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post

You Might Also Like

security forces
Latest

ಉರಿ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನಿಸಿದ ಪಾಕ್ ಉಗ್ರನ ಹತ್ಯೆ

Public TV
By Public TV
50 minutes ago
lpg cylinders
Bengaluru City

ಅಕ್ರಮ ಸಿಲಿಂಡರ್‌ ದಾಸ್ತಾನು – ಬೆಂಗಳೂರಲ್ಲಿ 4 ಕೇಸ್‌ ದಾಖಲು

Public TV
By Public TV
1 hour ago
Iran strikes US airbase in Saudi Arabia
Latest

ಸೌದಿ ಅರೇಬಿಯಾದಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ಇರಾನ್ ದಾಳಿ

Public TV
By Public TV
2 hours ago
Yelahanka Suicide
Bengaluru City

ಬೆಂಗಳೂರಲ್ಲಿ ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
3 hours ago
gyanesh kumar election commission
Latest

ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತ.ನಾಡು, ಪುದುಚೇರಿ – ಇಂದು ಚುನಾವಣಾ ದಿನಾಂಕ ಪ್ರಕಟ ಸಾಧ್ಯತೆ

Public TV
By Public TV
4 hours ago
chitradurga accident
Chitradurga

ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಮೂವರು RSIಗಳು ಸ್ಥಳದಲ್ಲೇ ದುರ್ಮರಣ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?