ನವದೆಹಲಿ: ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ರಾಜಸ್ಥಾನದ ರಾಜ್ಯಪಾಲ ಕಲ್ಯಾಣ್ ಸಿಂಗ್ ಕರೆ ನೀಡಿ ಚರ್ಚೆಗೆ ಗ್ರಾಸವಾಗಿದ್ದಾರೆ.
ನಾವೆಲ್ಲಾ ಬಿಜೆಪಿ ಪಕ್ಷದ ಕಾರ್ಯಕರ್ತರಾಗಿದ್ದು, ಬಿಜೆಪಿ ಗೆಲುವು ಪಡೆಯುವುದನ್ನು ನೋಡಲು ಉತ್ಸುಕರಾಗಿದ್ದೇವೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಆಗಬೇಕು. ಇದು ದೇಶದ ಅಭಿವೃದ್ಧಿಗೆ ಬಹುಮುಖ್ಯ ಎಂದು ಕಲ್ಯಾಣ್ ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ.
Rajasthan Governor Kalyan Singh in Aligarh, UP on 23rd March: We all are BJP workers and we want the BJP to emerge victorious. We want that once again Modi ji should become the PM. It is important for the country. pic.twitter.com/sJEzLqGIO2
— ANI (@ANI) March 25, 2019
ಸಾಂವಿಧಾನತ್ಮಾಕ ಹುದ್ದೆಯಲ್ಲಿರುವ ರಾಜ್ಯಪಾಲರು, ಪಕ್ಷಾತೀತವಾಗಿ ಇರುವ ಮೂಲಕ ಆ ಸ್ಥಾನಕ್ಕೆ ಗೌರವ ನೀಡಬೇಕು. ಆದರೆ ಗವರ್ನರ್ ಆಗಿದ್ದುಕೊಂಡು ಕಲ್ಯಾಣ್ ಸಿಂಗ್ ಈ ರೀತಿ ಹೇಳಿಕೆ ನೀಡಿದ್ದು ಎಷ್ಟು ಸರಿ ಎಂದು ಜನ ಈಗ ಪ್ರಶ್ನೆ ಮಾಡುತ್ತಿದ್ದಾರೆ.
ಅಂದಹಾಗೇ ಕಲ್ಯಾಣ್ ಸಿಂಗ್ ಉತ್ತರ ಪ್ರದೇಶದ ಸಿಎಂ ಆಗಿ 1991 ರಿಂದ 1992 ಸೇವೆ ಸಲ್ಲಿಸಿದ್ದರು. ಅಲ್ಲದೇ 2009ರ ಲೋಕಸಭಾ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆ ಆಗಿದ್ದರು. ಅಲ್ಲದೇ 2014 ಚುನಾವಣೆಯಲ್ಲಿ ಬಿಜೆಪಿ ಗೆಲುವು ಪಡೆದ ಹಿನ್ನೆಲೆಯಲ್ಲಿ ಕಲ್ಯಾಣ್ ಸಿಂಗ್‍ರನ್ನು ರಾಜಸ್ಥಾನದ ರಾಜ್ಯಪಾಲರಾಗಿ ನೇಮಕ ಮಾಡಲಾಗಿತ್ತು.