ನಾಯಿಮರಿಗಳ ಮೇಲೆ ಲೈಂಗಿಕ ದೌರ್ಜನ್ಯ – ವ್ಯಕ್ತಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆ

Public TV
1 Min Read
PUPPIES

ಚೆನ್ನೈ: ನಾಯಿಮರಿಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇರೆಗೆ 30 ವರ್ಷದ ವ್ಯಕ್ತಿಯೊಬ್ಬನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

ಪ್ರಾಣಿ ಹಕ್ಕುಗಳ ಕಾರ್ಯಕರ್ತರೊಬ್ಬರು ಘಟನೆ ನಡೆದ ಎರಡು ವಾರಗಳ ನಂತರ ಸಿಸಿಟಿವಿ ಆಧಾರಿಸಿ ದೂರು ನೀಡಿದ್ದರು. ಆರೋಪಿಯನ್ನು ಚೆನ್ನೈನ ಮಾಧವರಾಮ್ ನಿವಾಸಿ ಭಾಸ್ಕರ್ ಎಂದು ಗುರುತಿಸಲಾಗಿದೆ.

ಈತ ಮಾರ್ಚ್ 14 ರಂದು ಮಾಧವರಾಮ್ ಸಮೀಪದ ಮಾರ್ಥೂರಿನ ಖಾಲಿ ಮೈದಾನದಲ್ಲಿ ನಾಲ್ಕು ನಾಯಿಮರಿಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಧವರಾಮ ಮಿಲ್ಕ್ ಕಾಲೋನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

PUPPY

ಪ್ರಾಣಿ ಹಕ್ಕುಗಳ ಕಾರ್ಯಕರ್ತ ಸಾಯಿ ವಿಘ್ನೇಶ್ ನೀಡಿದ ದೂರಿನ ಆಧಾರದ ಮೇರೆಗೆ ನಗರದ ಪೊಲೀಸರು ಭಾಸ್ಕರ್ ಮೇಲೆ ಅಶ್ಲೀಲ ಕೃತ್ಯಗಳನ್ನು ಎಸಗುವ ಆರೋಪಗಳಿಗೆ ಅನುಗುಣವಾಗಿ ಐಪಿಸಿ ಸೆಕ್ಷನ್ 294 ರ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯಕ್ಕೆ ಆರೋಪಿ ಭಾಸ್ಕರ್ ನನ್ನು ಜೈಲಿಗೆ ಕಳುಹಿಸಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಕಾನೂನಿನ ತಜ್ಞರನ್ನು ಸಂಪರ್ಕಿಸಿದ ನಂತರ ಈ ಕುರಿತು ಎಫ್‍ಐಆರ್ ದಾಖಲಿಸಲಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ಕಳೆದ ತಿಂಗಳು ಎಮ್‍ಎಂಡಿಎ ಕಾಲೋನಿಯ ಅಡ್ಡ ರಸ್ತೆಯಲ್ಲಿ ನಾಯಿಮರಿಗಳನ್ನು ಲೈಂಗಿಕವಾಗಿ ದುರುಪಯೋಗ ಪಡಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೇ ಒಂದು ತಿಂಗಳ ಅಂತರದಲ್ಲಿ ಮತ್ತೆ ಖಾಲಿ ಪ್ರದೇಶದಲ್ಲಿ ನಾಯಿಮರಿಗಳಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಲೈಂಗಿಕ ದೌರ್ಜನ್ಯ ಎಸಗಿದ ಬಳಿಕ ಆರೋಪಿ ಅಲ್ಲಿಂದ ಓಡಿಹೋಗಿದ್ದನು. ನಾನು ದೂರು ಸಲ್ಲಿಸುವವರೆಗೂ ಪೊಲೀಸರು ಆತನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ವಿಘ್ನೇಶ್ ಹೇಳಿದ್ದಾರೆ.

https://www.facebook.com/almightyanimalcaretrust/posts/1247765012041725

ಈ ಬಗ್ಗೆ ವಿಘ್ನೇಶ್ ಅವರು ಎರಡು ವಾರಗಳ ಹಿಂದೆಯೇ Almighty Animal Care Trust ಎಂಬ ಫೇಸ್‍ಬುಕ್ ಪೇಜಿನಲ್ಲಿ ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಿದ್ದರು. ಆರೋಪಿ ಭಾಸ್ಕರ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾಗ ಸಾಕ್ಷಿಗಾಗಿ ಆ ಪ್ರದೇಶದಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ ಆರೋಪಿಯ ಕೃತ್ಯ ಸೆರೆಯಾಗಿದೆ ಎಂದು ಹಿರಿಯ ಪೊಲೀಸ್ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *