Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಿಂಗಾಯತ ವಿಚಾರದಲ್ಲಿ ಪಕ್ಷದ ಪರವಾಗಿ ಕ್ಷಮೆ ಕೇಳಲು ಡಿಕೆಶಿ ಯಾರು: ಎಂ.ಬಿ.ಪಾಟೀಲ್ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಲಿಂಗಾಯತ ವಿಚಾರದಲ್ಲಿ ಪಕ್ಷದ ಪರವಾಗಿ ಕ್ಷಮೆ ಕೇಳಲು ಡಿಕೆಶಿ ಯಾರು: ಎಂ.ಬಿ.ಪಾಟೀಲ್ ಪ್ರಶ್ನೆ

Districts

ಲಿಂಗಾಯತ ವಿಚಾರದಲ್ಲಿ ಪಕ್ಷದ ಪರವಾಗಿ ಕ್ಷಮೆ ಕೇಳಲು ಡಿಕೆಶಿ ಯಾರು: ಎಂ.ಬಿ.ಪಾಟೀಲ್ ಪ್ರಶ್ನೆ

Public TV
Last updated: April 12, 2019 8:28 pm
Public TV
Share
2 Min Read
bly DKShi main
SHARE

ವಿಜಯಪುರ: ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ವಿಚಾರವಾಗಿ ಮಾತನಾಡಿದ್ದ ಬೃಹತ್ ನೀರಾವರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಗೃಹ ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾತನಾಡಿದ ಸಚಿವರು, ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದ ಬಗ್ಗೆ ಮಾತನಾಡಲು ಡಿ.ಕೆ.ಶಿವಕುಮಾರ್ ಅವರಿಗೆ ಏನು ಅಧಿಕಾರವಿದೆ? ಕ್ಷಮೆ ಕೇಳಲು ಅವರು ಯಾರು? ಅವರಿಗೂ ಲಿಂಗಾಯತ ಧರ್ಮಕ್ಕೂ ಏನು ಸಂಬಂಧ? ಅವರೇನು ಕೆಪಿಸಿಸಿ ಅಧ್ಯಕ್ಷರೇ? ಡಿ.ಕೆ.ಶಿವಕುಮಾರ್ ಮೊದಲು ತಮ್ಮ ಸಮುದಾಯದಲ್ಲಿರುವ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳಲಿ ಎಂದು ಗುಡುಗಿದರು.

mb patil

ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟವನ್ನು ನಾನು ಚುನಾವಣೆಯಲ್ಲಿ ಬಳಸಿಕೊಂಡಿಲ್ಲ. 2018ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿಯೂ ಈ ಬಗ್ಗೆ ಹೇಳಿರಲಿಲ್ಲ. ಆದರೆ ಡಿ.ಕೆ.ಶಿವಕುಮಾರ್ ಅವರು ಯಾಕೆ ಈ ಬಗ್ಗೆ ಪದೇ ಪದೇ ಪ್ರಸ್ತಾಪ ಮಾಡುತ್ತಿದ್ದಾರೆ? ಈ ವಿಚಾರವಾಗಿ ಈಗ ಮಾತನಾಡಿ ಪಕ್ಷಕ್ಕೆ ಮುಜುಗುರ ಉಂಟು ಮಾಡುವುದಿಲ್ಲ. ಲೋಕಸಭಾ ಚುನಾವಣೆಯ ಬಳಿಕ ಸುದ್ದಿಗೋಷ್ಠಿ ಕರೆದು ಸರಿಯಾದ ಉತ್ತರ ನೀಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿ.ಕೆ.ಶಿವಕುಮಾರ್ ವಿರುದ್ಧ ಪಕ್ಷದ ನಾಯಕರಿಗೆ, ಹೈಕಮಾಂಡಿಗೆ ದೂರು ನೀಡುತ್ತೇನೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೂ ಈ ಬಗ್ಗೆ ಮಾಹಿತಿ ನೀಡುತ್ತೇನೆ. ಸಚಿವರು ಈ ಹಿಂದೆಯೂ ಗದಗ ಜಿಲ್ಲೆ ಲಕ್ಷ್ಮೇಶ್ವರದಲ್ಲಿ ಪ್ರತ್ಯೇಕ ಲಿಂಗಾಯದ ಧರ್ಮದ ವಿಚಾರವಾಗಿ ಕ್ಷಮೆ ಕೇಳಿದ್ದರು. ಇದನ್ನು ಬಳ್ಳಾರಿಯಲ್ಲಿ ಪುನರುಚ್ಛರಿಸಿದ್ದಾರೆ. ಹೀಗೆ ಹೇಳಿಕೆ ನೀಡುವುದ ಹಿಂದೆ ಹಿಡನ್ ಅಜೆಂಡಾ ಇದೆ. ಅಷ್ಟೇ ಅಲ್ಲದೆ ಮೂರು ಬಲವಾದ ಕಾರಣಗಳಿವೆ. ಅದನ್ನು ಚುನಾವಣೆ ಬಳಿಕ ಬಹಿರಂಗ ಪಡಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

BLY DKShi B

ಡಿ.ಕೆ.ಶಿವಕುಮಾರ್ ಹೇಳಿದ್ದೇನು?:
ಬಳ್ಳಾರಿ ಜಿಲ್ಲೆ ಹೂವಿನಹಡಗಲಿಯಲ್ಲಿ ಸೋಮವಾರ ನಡೆದಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಸಚಿವ ಡಿ.ಕೆ.ಶಿವಕುಮಾರ್ ಅವರು, ಬಿಜೆಪಿಯವರು ಒಂದು ಧರ್ಮದ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ಯಾರೋ ಏನೋ ಹೇಳಿದರೂ ಅಂತ ನನ್ನ ಸೇರಿದಂತೆ ನಮ್ಮ ಪಕ್ಷದ ಕೆಲವರು ವೀರಶೈವರ ವಿಚಾರಕ್ಕೆ ಕೈ ಹಾಕಿದ್ವಿ. ಈ ಮೂಲಕ ಪ್ರತ್ಯೇಕ ಧರ್ಮ ಮಾಡಲು ತೀರ್ಮಾನ ಮಾಡಿದ್ವಿ. ಅದಕ್ಕೆ ಜನ ನಮ್ಮ ಕಪಾಳಕ್ಕೆ ಹೊಡೆದರು. ಹೀಗಾಗಿ ನಿಮಗೂ ಹಾಗೂ ರಾಜ್ಯದ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಹೇಳುವ ಮೂಲಕ ಮತ್ತೊಮ್ಮೆ ಕ್ಷಮೆಯಾಚಿಸಿದ್ದರು.

ಇನ್ನೆಂದೂ ಕಾಂಗ್ರೆಸ್ ಜಾತಿ, ಧರ್ಮದ ವಿಚಾರದಲ್ಲಿ ಕೈಹಾಕುವುದಿಲ್ಲ. ನಿಮ್ಮ ಕ್ಷಮೆ ಇರಲಿ. ರಾಜಕೀಯದಲ್ಲಿ ಧರ್ಮ ಇರಬೇಕು. ಧರ್ಮದಲ್ಲಿ ರಾಜಕಾರಣ ಇರಬಾರದು ಎಂಬ ನಿರ್ಧಾರವನ್ನು ಕೈಗೊಂಡಿದ್ದೇನೆ. ಹೀಗಾಗಿ ಈ ಹಿಂದೆ ಆಗಿರುವುದನ್ನು ಮರೆತು ಎಲ್ಲರೂ ಒಟ್ಟಾಗಿ ಹೋಗಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡಿದ್ದರು.

TAGGED:DK ShivakumarLingayat Religion IssueM.B PatilministerPublic TVಎಂ.ಬಿ.ಪಾಟೀಲ್ಪಬ್ಲಿಕ್ ಟಿವಿಪ್ರತ್ಯೇಕ ಲಿಂಗಾಯತ ಧರ್ಮವಿಜಯಪುರಸಚಿವ ಡಿ ಕೆ ಶಿವಕುಮಾರ್
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

KR Puram Hit And Run Delivery Boy Death
Bengaluru City

ಬೆಂಗಳೂರಲ್ಲಿ ಹಿಟ್ & ರನ್‌ಗೆ ಡೆಲಿವರಿ ಬಾಯ್ ಬಲಿ

Public TV
By Public TV
11 seconds ago
pm modi rozgar mela
Latest

18ನೇ ರೋಜಗಾರ್ ಮೇಳದಲ್ಲಿ 61,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

Public TV
By Public TV
1 minute ago
Republic Day 2
Latest

Republic Day 2026 | ದೆಹಲಿ ಪರೇಡ್‌ಗೆ ಕರ್ನಾಟಕದ 12 ವಿದ್ಯಾರ್ಥಿಗಳು ಆಯ್ಕೆ

Public TV
By Public TV
11 minutes ago
Thawar Chand Gehlot Siddaramaiah
Bengaluru City

ಲೋಕಭವನಕ್ಕೆ ಭಾಷಣ ಕಳುಹಿಸಿದ್ದ ಸರ್ಕಾರ – ಗಣರಾಜ್ಯೋತ್ಸವ ಭಾಷಣಕ್ಕೆ ರಾಜ್ಯಪಾಲರ ಅಧಿಕೃತ ಮುದ್ರೆ

Public TV
By Public TV
24 minutes ago
encounter
Crime

ಭದ್ರತಾ ಪಡೆಗಳ ಗುಂಡಿಗೆ ಐವರು ಮಹಿಳೆಯರು ಸೇರಿ 17 ಮಂದಿ ನಕ್ಸಲರು ಬಲಿ

Public TV
By Public TV
32 minutes ago
revenu dept staff
Kalaburagi

ಲಂಚ ಪಡೆಯುವಾಗ ಕಂದಾಯ ಇಲಾಖೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?