ಬಳ್ಳಾರಿ: ಚಿತ್ರದುರ್ಗದಲ್ಲಿ ನಡೆದ ಕಾಂಗ್ರೆಸ್ ಜೆಡಿಎಸ್ ಪರಿವರ್ತನಾ ಸಮಾವೇಶದಲ್ಲಿ ಮಾಜಿ ಸಚಿವ ಆಂಜನೇಯ ಅವರಿಗೆ ಅವಮಾನ ಮಾಡಲಾಯಿತಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭಾಷಣ ಮಾಡುವ ವೇಳೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ವೇದಿಕೆಗೆ ಆಗಮಿಸಿದರು. ರಾಹುಲ್ ಗಾಂಧಿಯವರನ್ನು ತಬ್ಬಿಕೊಳ್ಳುವ ಭರದಲ್ಲಿ ಸಿಎಂ ಹಾಗೂ ಮಾಜಿ ಸಿಎಂ ಮಾಜಿ ಸಚಿವ ಆಂಜನೇಯರನ್ನು ಹಿಂದಕ್ಕೆ ತಳ್ಳಿದ ಘಟನೆ ನಡೆದಿದೆ.
ವೇದಿಕೆಗೆ ಮಾಜಿ ಸಿಎಂ ಆಗಮಿಸುತ್ತಿದ್ದಂತೆ ರಾಹುಲ್ ಗಾಂಧಿಯವರು ತಮ್ಮ ಭಾಷಣವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯರನ್ನು ತಬ್ಬಿಕೊಂಡರು. ಈ ವೇಳೆ ಕುಮಾರಸ್ವಾಮಿಯವರು ಸಹ ರಾಹುಲ್ ರ ಬಳಿ ಬಂದರು. ಇದೇ ಸಂದರ್ಭದಲ್ಲಿ ವೇದಿಕೆಯಲ್ಲಿದ್ದ ಮಾಜಿ ಸಚಿವ ಆಂಜನೇಯ ಅವರನ್ನು ತಳ್ಳಿ ವೇಣುಗೋಪಾಲ್, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕುಮಾರಸ್ವಾಮಿ ಹಾಗೂ ರಾಹುಲ್ ಗಾಂಧಿ ಎಲ್ಲರೂ ಒಂದಾಗಿ ಕೈ ಎತ್ತಿ ಬಲ ಪ್ರದರ್ಶನ ಮಾಡಿದರು. ಆಂಜನೇಯ ಅವರನ್ನು ತಳ್ಳುತ್ತಿದ್ದಂತೆ ಅವರು ಹಿಂದೆ ಸರಿದು ಹೋಗುವಂತಾಯಿತು.