ಐಪಿಎಲ್ 2019: ಮೊದಲ ಗೆಲುವಿನ ಬೆನ್ನಲ್ಲೇ ಭಾರೀ ದಂಡ ತೆತ್ತ ಕೊಹ್ಲಿ

Public TV
1 Min Read
kohli RCB

ಮೊಹಾಲಿ: 2019ರ ಐಪಿಎಲ್ ಟೂರ್ನಿಯಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಕಿಂಗ್ಸ್ ಇಲೆವೆನ್ ವಿರುದ್ಧ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಮೊದಲ ಗೆಲುವಿನ ಬಗೆ ಬೀರಿದೆ. ಆದರೆ ಈ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಪರಿಣಾಮ ಕೊಹ್ಲಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಈ ಕುರಿತು ಐಪಿಎಲ್ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಇದರೊಂದಿಗೆ ಈ ಬಾರಿಯ ಐಪಿಎಲ್ ನಲ್ಲಿ ನಿಧಾನಗತಿ ಬೌಲಿಂಗ್‍ಗೆ ದಂಡ ತೆತ್ತ 3ನೇ ನಾಯಕ ಕೊಹ್ಲಿ ಆಗಿದ್ದಾರೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ, ರಾಜಸ್ಥಾನ ರಾಯಲ್ಸ್ ತಂಡದ ನಾಯಕ ರಹಾನೆ ದಂಡ ತೆತ್ತಿದ್ದರು.

RCB 2

ಈ ಬಾರಿಯ ಟೂರ್ನಿಯಲ್ಲಿ ಹಲವು ಪಂದ್ಯಗಳು ನಿಗದಿತ 4 ಗಂಟೆ ಅವಧಿಯಲ್ಲಿ ಮುಕ್ತಾಯಗೊಂಡಿಲ್ಲ. ಈ ಹಿಂದೆ ಕೆಲ ಹಿರಿಯ ಆಟಗಾರರು ಪಂದ್ಯದ ಸಮಯದ ಬಗ್ಗೆ ಅಂಪೈರ್ ಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಎಬಿ ಡಿ ವಿಲಿಯರ್ಸ್ ಅವರ ಅಕರ್ಷಕ ಬ್ಯಾಟಿಂಗ್ ನೆರವಿನಿಂದ ಆರ್‍ಸಿಬಿ 8 ವಿಕೆಟ್ ಅಂತರದ ಗೆಲುವು ಪಡೆದಿತ್ತು. ಪಂದ್ಯದಲ್ಲಿ 38 ಎಸೆತಗಳಲ್ಲಿ ಅಜೇಯ 59 ರನ್ ಗಳಿಸಿದ ಎಬಿಡಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಪಂದ್ಯದ ಬಳಿಕ ಮಾತನಾಡಿದ ಎಬಿಡಿ, ಪಂದ್ಯದಲ್ಲಿ ಅರ್ಹ ಗೆಲುವನ್ನು ಪಡೆದಿದ್ದು, ಈ ಗೆಲುವನ್ನು ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಅಭಿಮಾನಿಗಳಿಗೆ ಅರ್ಪಿಸುತ್ತೇವೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *