ರಾಯಚೂರು: ಅಬಕಾರಿ ಇಲಾಖೆ ಅಧಿಕಾರಿಗಳು ಲಕ್ಷಾಂತರ ರೂ. ಮೌಲ್ಯದ ಅಕ್ರಮ ಮದ್ಯವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಶಿವರಾಜ್ ಎಂಬವರ ಹೋಟೆಲ್‍ನಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿ ಇಡಲಾಗಿತ್ತು. ಖಚಿತ ಮಾಹಿತಿ ಪಡೆದ ಅಬಕಾರಿ ಇಲಾಖೆ ಅಧಿಕಾರಿಗಳು ರಾಯಚೂರಿನ ಲಿಂಗಸುಗೂರಿನ ಮುದಗಲ್‍ನ ಹೋಟೆಲ್ ಮೇಲೆ ದಾಳಿ ನಡೆಸಿ ಅಕ್ರಮ ಮದ್ಯಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
7,800 ಲೀಟರ್ ಬಿಯರ್ ಹಾಗೂ 163 ಲೀಟರ್ ಲಿಕ್ಕರ್ ಸೇರಿದಂತೆ ಲಕ್ಷಾಂತರ ರೂ. ಅಕ್ರಮವಾಗಿ ಸಂಗ್ರಹಿಸಿಟ್ಟ ಮದ್ಯವನ್ನು ಅಬಕಾರಿ ಇಲಾಖೆ ವಶಕ್ಕೆ ಪಡೆದುಕೊಂಡಿದೆ.
ಲಿಂಗಸುಗೂರು ಅಬಕಾರಿ ನಿರೀಕ್ಷರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಧಿಕಾರಿಗಳು ಆರೋಪಿ ಶಿವರಾಜ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಬಕಾರಿ ಇಲಾಖೆ ಅಧಿಕಾರಿ ಮಂಜುನಾಥ್ ಹಾಗೂ ಶಿವಾನಂದ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.