Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಮೇಶ್ ಜಾರಕಿಹೊಳಿ ನನಗೆ ಎರಡು ಏಟು ಹೊಡೆದ್ರೂ ಬೇಜಾರಿಲ್ಲ : ಡಿಕೆಶಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಮೇಶ್ ಜಾರಕಿಹೊಳಿ ನನಗೆ ಎರಡು ಏಟು ಹೊಡೆದ್ರೂ ಬೇಜಾರಿಲ್ಲ : ಡಿಕೆಶಿ ತಿರುಗೇಟು

Bengaluru City

ರಮೇಶ್ ಜಾರಕಿಹೊಳಿ ನನಗೆ ಎರಡು ಏಟು ಹೊಡೆದ್ರೂ ಬೇಜಾರಿಲ್ಲ : ಡಿಕೆಶಿ ತಿರುಗೇಟು

Public TV
Last updated: April 25, 2019 7:05 pm
Public TV
Share
2 Min Read
D.K. Shivakumar Ramesh Jarkiholi
SHARE

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ನನಗೆ ಎರಡು ಏಟು ಹೊಡೆದರೂ ನನಗೇನು ಬೇಜಾರಿಲ್ಲ ಎಂದು ಬೃಹತ್ ನೀರಾವರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಸಿಎಂ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿ ಸಚಿವರು ಆಪರೇಷನ್ ಕಮಲದ ಕುರಿತು ಚರ್ಚೆ ನಡೆಸಿದರು. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು ಡಿ.ಕೆ.ಶಿವಕುಮಾರ್ ನನ್ನ ಸಮನಾದ ಲೀಡರ್ ಅಲ್ಲ ಎನ್ನುವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ರಮೇಶ್ ನಮ್ಮ ಫ್ರೆಂಡ್, ನಮ್ಮ ಮನೆಯವರು. ಅದೆಲ್ಲ ಏನು ತೊಂದರೆ ಇಲ್ಲ. ನಾವು ಸ್ವಂತ ಮನೆ ಮಕ್ಕಳು. ಒಂದೊಂದು ಸಾರಿ ಜಗಳ ಆಗುತ್ತೆ ಏನ್ ಮಾಡೋಕೆ ಆಗುತ್ತೆ? ಅಣ್ಣ-ತಮ್ಮಂದಿರು ಜಗಳ ಆಡಿದ್ವಿ ಅಂತ ಅವರನ್ನ ಬಿಡೋಕೆ ಆಗುತ್ತಾ? ನಾವೆಲ್ಲ ಒಂದು ಪಾರ್ಟಿಯಲ್ಲಿ ಇರುವವರು ಎಂದು ಕಾಲೆಳೆದರು.

DKSHIVAKUMAR

10 ಜನ ಶಾಸಕರು ಒಟ್ಟಾಗಿ ರಾಜೀನಾಮೆ ಕೊಡುತ್ತೇವೆ ಎನ್ನುವ ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು, ಕಾಂಗ್ರೆಸ್‍ನ 80 ಜನ ಶಾಸಕರು ಅವರ ಜೊತೆಯೇ ಇದ್ದೀವಿ. ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ನಾಯಕ. ಯೂತ್ ಕಾಂಗ್ರೆಸ್‍ನಿಂದ ಬಂದು, ಶಾಸಕರಾಗಿ, ಸಚಿವರಾದವರು. ಪಾಪ ಒಂದೊಂದು ಬಾರಿ ಹಾಗೇ ಮಾತಾಡುತ್ತಾರೆ ಅಷ್ಟೇ ಎಂದು ವ್ಯಂಗ್ಯವಾಡಿದರು.

ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅವರು ಈ ಹಿಂದೆ ನಾನು ಮುಖ್ಯಮಂತ್ರಿ ಅಭ್ಯರ್ಥಿ ಅಂತ ಹೇಳಿದ್ದರು. ಸಿಎಂ ಸ್ಥಾನ ಸಿಗಲಿಲ್ಲ ಅಂತ ಅವರು ಪಕ್ಷ ಬಿಟ್ಟು ಹೋಗ್ತಾರಾ? ರಮೇಶ್ ಕೂಡ ಹಾಗೇ ಎಂದು ಮಾಜಿ ಸಚಿವರ ಪರ ಬ್ಯಾಟ್ ಬೀಸಿದರು.

Ramesh Jarkiholi Satish Jarkiholi

ರಮೇಶ್ ಜಾರಕಿಹೊಳಿ ಹಾಗೂ ಸತೀಶ್ ಜಾರಕಿಹೊಳಿ ಅವರು ಪರಸ್ಪರ ವಾಗ್ದಾಳಿ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ರಮೇಶ್ ಹಾಗೂ ಸತೀಶ್ ಅಣ್ಣ ತಮ್ಮಂದಿರು. ಹೀಗಾಗಿ ಅವರಿಬ್ಬರು ಮಾತಾಡಿಕೊಳ್ಳುತ್ತಾರೆ. ಅದರಲ್ಲಿ ಏನು ತಪ್ಪಿಲ್ಲ ಎಂದರು.

ಸರ್ಕಾರ ಬೀಳುತ್ತೆ ಅಂತ ಯಾವ ಕಾಂಗ್ರೆಸ್ ಶಾಸಕರು ಹೇಳಿಲ್ಲ. ಪಾಪ ಅವರು ತಮ್ಮ ಕೆಲಸ ಮಾಡಿಕೊಂಡು ಹೊಗುತ್ತಿದ್ದಾರೆ. ನಿಮಗೆ ಸುದ್ದಿ ಬೇಕು ಅಂತ ಹೀಗೆ ಮಾತನಾಡುತ್ತೀದ್ದೀರಾ ಅಷ್ಟೆ ಎಂದು ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದರು.

TAGGED:CM KumaraswamycongressDK ShivakumarPublic TVramesh jarkiholiSatish jarkiholiಕಾಂಗ್ರೆಸ್ಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿರಮೇಶ್ ಜಾರಕಿಹೊಳಿಸತೀಶ್ ಜಾರಕಿಹೊಳಿಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Team India
Cricket

ಭಾರೀ ಮುಖಭಂಗ – ಪಾಕ್‌ ಸೋಲೋದು ಗೊತ್ತಾಗ್ತಿದ್ದಂತೆ ಮೈದಾನದಿಂದ ಪೇರಿಕಿತ್ತ ಪಿಸಿಬಿ ಅಧ್ಯಕ್ಷ

Public TV
By Public TV
7 minutes ago
Ramalinga Reddy BMTC Electric Bus
Bengaluru City

ಎಲೆಕ್ಟ್ರಿಕ್ ಬಸ್ ನಿರ್ವಹಣೆ ಬಗ್ಗೆ ಅಸಮಾಧಾನ – ಸಾರಿಗೆ ಸಚಿವರಿಂದ ಮತ್ತೆ ಕೇಂದ್ರಕ್ಕೆ ಪತ್ರ

Public TV
By Public TV
21 minutes ago
mattighatt falls
Districts

ಶಿರಸಿಯ ಮತ್ತಿಘಟ್ಟ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Public TV
By Public TV
8 hours ago
Hardik Pandya Suryakumar Yadav
Cricket

ʻThis is for Indiaʼ – ಗೆದ್ದ ಬೆನ್ನಲ್ಲೇ ಸೂರ್ಯ ಮೊದಲ ಮಾತು

Public TV
By Public TV
8 hours ago
India Pakistan
Cricket

ಒಂದೇ ದಿನ ಪಾಕ್‌ ವಿರುದ್ಧ ಎರಡು ಪಂದ್ಯ ಗೆದ್ದ ಭಾರತ 

Public TV
By Public TV
8 hours ago
Pregnency in space station
Latest

ಭೂಮಿಯಾಚೆಗಿನ ಬದುಕು – ಬಾಹ್ಯಾಕಾಶದಲ್ಲಿ ಮಹಿಳೆ ಮಗುವಿಗೆ ಸುರಕ್ಷಿತವಾಗಿ ಜನ್ಮ ನೀಡಬಹುದಾ?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?