ದಾವಣಗೆರೆ: ಕಾರು ಟೈರ್ ಬ್ಲಾಸ್ಟ್ ಆಗಿ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆ ಹೊರವಲಯದಲ್ಲಿ ನಡೆದಿದೆ.
ಶೈಲಜ (22) ಮೃತಪಟ್ಟ ವಿದ್ಯಾರ್ಥಿನಿ. ಶೈಲಜ ನಗರದ ಹೊರವಲಯದಲ್ಲಿರುವ ದಾವಣಗೆರೆ ವಿವಿಯ ಮ್ಯಾಥ್ಸ್ ಡಿಪಾರ್ಟ್ ಮೆಂಟ್ನ ವಿದ್ಯಾರ್ಥಿನಿ ಆಗಿದ್ದು, ಇಂದು ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಈ ಅವಘಡ ಸಂಭವಿಸಿದೆ.
ಶೈಲಜ ಕಾಲೇಜಿನಿಂದ ಹಿಂದಿರುಗುವಾಗ ಹಿಂಬದಿಯಿಂದ ಬರುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್ ಆಗಿ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.