ಬೆಂಗಳೂರು: 8 ವರ್ಷದ ಬಾಲಕಿ ಮೇಲೆ 50 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಸೋಮವಾರ ರಾತ್ರಿ ಬೆಂಗಳೂರಿನ ಎಸ್ಜೆ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅನ್ವರ್ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ. ಅನ್ವರ್ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ವಿಷಯ ತಿಳಿದ ಪೊಲೀಸರು ತಕ್ಷಣ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಆರೋಪಿ ಅನ್ವರ್ ನನ್ನು ನಮ್ಮ ವಶಕ್ಕೆ ಕೊಡಬೇಕು ಎಂದು ಬಾಲಕಿ ಪೋಷಕರು, ಸ್ಥಳೀಯರು ಜೆಸಿ ರೋಡ್ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯ ಪರಿಣಾಮ ಜೆಸಿ ರೋಡ್ನ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಿಲೋಮಿಟರ್ಗಟ್ಟಲೇ ಟ್ರಾಪಿಕ್ ಜಾಮ್ ಉಂಟಾಗಿ ವಾಹನ ಸವಾರರು, ಪರದಾಡುವಂತಾಯ್ತು.
ಸ್ಥಳಕ್ಕೆ ಬಂದ ಪೊಲೀಸರು, ಸ್ಥಳೀಯರ ಮನವೊಲಿಸಿ, ಪರಿಸ್ಥಿತಿ ತಿಳಿಗೊಳಿಸಿದ್ದಾರೆ.