– ಜಿಲ್ಲಾಡಳಿತ, ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಕಿಡಿ
ಬೀದರ್: ಜಿಲ್ಲೆಯಲ್ಲಿ ನೀರಿನ ಹಾಹಾಕಾರ ಶುರುವಾಗಿದ್ದು, ಈ ಸಮಸ್ಯೆ ಈಗ ವನ್ಯ ಜೀವಿಗಳಿಗೂ ತಟ್ಟಿದೆ.
ಈ ಬಾರಿಯ ರಣ ಬಿಸಿಲಿನಿಂದ ಬೆಳ್ಳೂರು ಗ್ರಾಮದ ಸುತ್ತಲಿನ ಕೆರೆ, ಹಳ್ಳ, ಕೊಳ್ಳಗಳು ಸಂಪೂರ್ಣ ಬತ್ತಿ ಹೋಗಿದ್ದು ನೂರಾರು ಜಿಂಕೆಗಳು, ಕೃಷ್ಣಮೃಗಗಳು ಕುಡಿಯಲು ನೀರು ಸಿಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ಜೀವದ ಹಂಗು ತೊರೆದು 50 ಅಡಿ ಬಾವಿಯಿಂದ ನೀರು ಸೇದುತ್ತಿದ್ದಾರೆ ಜನ!
ಗಡಿನಾಡು ಬೀದರ್ ಜಿಲ್ಲೆಯಲ್ಲಿ ಪ್ರತಿವರ್ಷವೂ ಬೇಸಿಗೆ ವೇಳೆ ನೀರಿಗೆ ಹಾಹಾಕಾರ ಎದುರಾಗುತ್ತದೆ. ಇದರ ಬಿಸಿ ಜನರಿಗಷ್ಟೇ ಅಲ್ಲದೆ ಮೂಕ ಪ್ರಾಣಿಗಳು ತಟ್ಟುತ್ತದೆ. ಈ ಸಮಸ್ಯೆ ಅರಿತಿದ್ದರೂ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಕೈಗೊಳ್ಳುವುದಿಲ್ಲ ಎಂದು ಸ್ಥಳೀಯರು ಅಸಮಾಧಾನ ಹೊರ ಹಾಕಿದ್ದಾರೆ. ಇದನ್ನೂ ಓದಿ: ‘ಜಲಯುದ್ಧ’ ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಜಿಪಂ ಸಿಇಓ ಸ್ಥಳಕ್ಕೆ ದಿಢೀರ್ ಭೇಟಿ
ಜಿಲ್ಲೆಯಲ್ಲಿ ಬೆರಳೆಣಿಕೆಯಷ್ಟು ಮಾತ್ರ ಕಾಣ ಸಿಗುವ ಜಿಂಕೆ, ಕೃಷ್ಣಮೃಗಗಳಿಗೂ ನೀರಿನ ಸಮಸ್ಯೆ ಕಾಡುತ್ತಿದೆ. ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ವನ್ಯಜೀವಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಬೇಕು. ಒಂದು ವೇಳೆ ಪ್ರಾಣಿಗಳಿಗೆ ನೀರು ಸಿಗದೆ ಸಾವನ್ನಪ್ಪಿದರೆ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.