ಚಿತ್ರದುರ್ಗ: ಕುಡಿದ ಅಮಲಿನಲ್ಲಿ ಕಟ್ಟಡದ ಮೇಲಿನಿಂದ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ದುರ್ಗದ ಸಿರಿ ಹೋಟೆಲ್‍ನಲ್ಲಿ ನಡೆದಿದೆ.
ಹೊಳಲ್ಕೆರೆ ತಾಲೂಕಿನ ವೆಂಕಟೇಶಪುರ ನಿವಾಸಿ ಪ್ರಮೋದ್ (22) ಮೃತ ಯುವಕ. ಈಗ ಮೂರು ಅಂತಸ್ತಿನ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ್ದಾನೆ. ಪ್ರಮೋದ್ ದುರ್ಗದ ಸಿರಿ ಹೋಟೆಲ್‍ನಲ್ಲಿ ಕಳೆದ ಎರಡು ವರ್ಷದಿಂದ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.
ಮೃತ ಪ್ರಮೋದ್ ಗುರುವಾರ ತನ್ನ ಡ್ಯೂಟಿಯನ್ನು ಮುಗಿಸಿಕೊಂಡು ಕಟ್ಟಡದ ಮೇಲೆ ಹೋಗಿ ಮದ್ಯ ಕುಡಿದು ಮಲಗಿದ್ದಾನೆ. ಈ ವೇಳೆ ಆಕಸ್ಮಿಕವಾಗಿ ಕಟ್ಟಡದಿಂದ ಜಾರಿ ಬಿದ್ದಿದ್ದಾನೆ. ಪರಿಣಾಮ ಸ್ಥಳದಲ್ಲಿಯೇ ಪ್ರಮೋದ್ ಮೃತಪಟ್ಟಿದ್ದಾನೆ.
ಈ ಬಗ್ಗೆ ಮಾಹಿತಿ ತಿಳಿದು ಚಿತ್ರದುರ್ಗ ನಗರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಚಿತ್ರದುರ್ಗ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.