ಪ್ರಜ್ಞಾಸಿಂಗ್‍ರನ್ನು ಬಿಜೆಪಿಯಿಂದ ಉಚ್ಚಾಟಿಸಿ: ನಿತೀಶ್ ಕುಮಾರ್

Public TV
2 Min Read
Nitish kuma Pragya Thakur

ಪಾಟ್ನಾ: ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್‍ರನ್ನು ಬಿಜೆಪಿಯಿಂದ ಉಚ್ಚಾಟಿಸಿ ಎಂದು ಎನ್‍ಡಿಎ ಮೈತ್ರಿ ಪಕ್ಷದ ಜೆಡಿಯು ನಾಯಕ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಗ್ರಹಿಸಿದ್ದಾರೆ.

ಬಿಹಾರದ ಪಾಟ್ನಾ ಸಾಹೇಬ್ ಲೋಕಸಭಾ ಕ್ಷೇತ್ರದ ರಾಜ್‍ಭವನ್‍ನಲ್ಲಿ ಮತದಾನ ಮಾಡಿ ಬಳಿಕ ಮಾತನಾಡಿದ ಅವರು, ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಪ್ರಜ್ಞಾಸಿಂಗ್ ಹೇಳಿಕೆ ಖಂಡನೀಯ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿರುವುದು ಬಿಜೆಪಿಯ ಆಂತರಿಕ ವಿಚಾರವಾಗಿದೆ. ಆದರೆ ಪ್ರಜ್ಞಾಸಿಂಗ್ ವಿರುದ್ಧ ಬಿಜೆಪಿ ಕಠಿಣ ಕ್ರಮಕೈಗೊಳ್ಳುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಗೋಡ್ಸೆಯಿಂದ ಗಾಂಧೀಜಿ ದೇಹ ಹತ್ಯೆ, ಪ್ರಜ್ಞಾಸಿಂಗ್‍ರಿಂದ ಆತ್ಮದ ಕೊಲೆ: ಕೈಲಾಶ್ ಸತ್ಯಾರ್ಥಿ

ಮಹಾತ್ಮ ಗಾಂಧಿ ವಿರುದ್ಧ ಹೇಳಿಕೆ ನೀಡಿದವರು ಯಾರೇ ಆಗಿದ್ದರೂ ನಾವು ಸಹಿಸುವುದಿಲ್ಲ. ಸಾಧ್ವಿ ಪ್ರಜ್ಞಾಸಿಂಗ್ ಬಿಜೆಪಿ ನಾಯಕರು ಏನು ಕ್ರಮಕೈಗೊಳ್ಳಲಿದೆ ಎಂದು ಕಾದು ನೋಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಸಾಧ್ವಿ ಪ್ರಜ್ಞಾಸಿಂಗ್‍ರನ್ನು ನಾನು ಕ್ಷಮಿಸಲ್ಲ: ಪ್ರಧಾನಿ ಮೋದಿ

ಸುದೀರ್ಘ ಚುನಾವಣೆಯನ್ನು ಬೇಸಿಗೆ ಕಾಲದಲ್ಲಿ ನಡೆಸುವುದು ಸೂಕ್ತವಲ್ಲ. ಚುನಾವಣೆ ನಡೆಸಲು ಇದು ಅನುಕೂಲಕರ ವಾತಾರಣವಲ್ಲ. ಫೆಬ್ರವರಿ-ಮಾರ್ಚ್ ಇಲ್ಲವೇ ಅಕ್ಟೋಬರ್-ನವೆಂಬರ್ ನಲ್ಲಿ ಎರಡರಿಂದ ಮೂರು ಹಂತಗಳಲ್ಲಿ ಚುನಾಚವಣೆ ನಡೆಯಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಜ್ಞಾಸಿಂಗ್ ಹೇಳಿದ್ದೇನು?:
ಭೋಪಾಲ್‍ನಲ್ಲಿ ಗುರುವಾರ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಸಾಧ್ವಿ ಪ್ರಜ್ಞಾಸಿಂಗ್ ಅವರು, ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ. ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ನಟ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದರು.

ಸಾಧ್ವಿ ಪ್ರಜ್ಞಾಸಿಂಗ್ ಅವರ ಬೆನ್ನಲ್ಲೇ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹಾಗೂ ನಳಿನ್ ಕುಮಾರ್ ಕಟೀಲ್ ಗೋಡ್ಸೆ ದೇಶಭಕ್ತಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿ, ಡಿಲೀಟ್ ಮಾಡಿದ್ದರು.

Godse Pragya Thakur

ಮಹಾತ್ಮ ಗಾಂಧಿ ಪಾಕಿಸ್ತಾನದ ಪಿತಾಮಹ ಎಂದು ಮಧ್ಯಪ್ರದೇಶದ ಬಿಜೆಪಿ ಮುಖಂಡ ಅನಿಲ್ ಸೌಮಿತ್ರ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದಾಗಿ ಬಿಜೆಪಿ ಹೈಕಮಾಂಡ್ ಅನಿಲ್ ಸೌಮಿತ್ರ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಇತ್ತ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಗುರುವಾರದಿಂದ 10 ದಿನಗಳ ಒಳಗೆ ಗೋಡ್ಸೆ ಪರವಾಗಿ ಮಾತನಾಡಿದ ನಾಯಕರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಬೇಕು. ಪಕ್ಷದ ಅಂತರಿಕವಾಗಿ ಶಿಸ್ತು ಸಮಿತಿ ಎದುರಿಸಬೇಕಾಗುತ್ತದೆ ಎಂದು ಅಮಿತ್ ಶಾ ಸೂಚಿಸಿದ್ದಾರೆ.

AMITSHAH 2

ಬಿಜೆಪಿಯ ತುಮಕೂರು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹನುಮಂತರಾಜು ತಮ್ಮ ಫೇಸ್‍ಬುಕ್‍ನಲ್ಲಿ ನಾಥೂರಾಮ್ ಗೋಡ್ಸೆ ಅಪ್ರತಿಮ ದೇಶಭಕ್ತ ಎಂದು ಶುಕ್ರವಾರ ಪೋಸ್ಟ್ ಹಾಕಿದ್ದರು. ಈ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಹನುಮಂತರಾಜು ಅವರನ್ನು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸ್ಥಾನದಿಂದ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆಗೊಳಿಸಿ, ಆದೇಶ ಹೊರಡಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *