ಎಕ್ಸಿಟ್ ಪೋಲ್ ವಿಚಾರದಲ್ಲಿ ಇವಿಎಂನ್ನು ಎಳೆತಂದಿದ್ದು ಸರಿಯಲ್ಲ: ಶಾಸಕ ಸುಧಾಕರ್

Public TV
1 Min Read
MLA dk sudhakar

ಬೆಂಗಳೂರು: ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳಿದೆ, ಇವಿಎಂನ್ನು ಎಳೆತಂದಿದ್ದು ಸರಿಯಲ್ಲ ಎಂದು ಶಾಸಕ ಸುಧಾಕರ್ ಸಿಎಂ ಕುಮಾರಸ್ವಾಮಿ ಅವರನ್ನು ಗುರಿ ಇಟ್ಟುಕೊಂಡು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಸುಧಾಕರ್, “ಎಕ್ಸಿಟ್ ಪೋಲ್ ಫಲಿತಾಂಶದ ಬಗ್ಗೆ ಮಾತನಾಡುವಾಗ ಇವಿಎಂ ವಿಷಯ ಬಗ್ಗೆ ಯಾಕೆ ಚರ್ಚಿಸುತ್ತಿದ್ದಾರೆ ಎಂಬುದು ನನಗೆ ಗೊತ್ತಾಗುತ್ತಿಲ್ಲ. ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳಿವೆ” ಎಂದು ಹೇಳಿದ್ದಾರೆ.

ಇತ್ತೀಚೆಗೆ ಕುಮಾರಸ್ವಾಮಿ, “ಚುನಾವಣೋತ್ತರ ಸಮೀಕ್ಷೆಗಳು ಕೇವಲ ಒಂದು ಪಕ್ಷ ಹಾಗೂ ವ್ಯಕ್ತಿ ಪರ ಸುಳ್ಳು ವರದಿ ತೋರಿಸುತ್ತಿದೆ. ಇದು ಎಕ್ಸಿಟ್ ಪೋಲ್ ಅಷ್ಟೇ ಹೊರತು ಎಕ್ಸಾಟ್ ಪೋಲ್ ಅಲ್ಲ” ಎಂದು ಟ್ವೀಟ್ ಮೂಲಕ ಮಾಧ್ಯಮಗಳ ಸಮೀಕ್ಷೆಯ ಬಗ್ಗೆ ಕಿಡಿಕಾರಿದ್ದರು.

ಸಿಎಂ ಟ್ವೀಟ್ ನಲ್ಲೇನಿತ್ತು?:
ಎಲ್ಲಾ ವಿರೋಧ ಪಕ್ಷಗಳು ಕೂಡ ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಇವಿಎಂ ಮತಯಂತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ವಿರೋಧ ಪಕ್ಷಗಳ ನಾಯಕರು ಸುಪ್ರೀಂ ಕೋರ್ಟ್ ಮೆಟ್ಟಿಲು ಕೂಡ ಏರಿದ್ದಾರೆ. ಅಭಿವೃದ್ಧಿ ಹೊಂದಿದ ದೇಶಗಳೇ ಬ್ಯಾಲೆಟ್ ಪೇಪರ್ ಗಳನ್ನು ಆಯ್ಕೆ ಮಾಡುತ್ತಿದ್ದಾರೆ. 2019 ಎಕ್ಸಿಟ್ ಪೋಲ್ ಸಂಪೂರ್ಣವಾಗಿ ಆಡಳಿತ ಪಕ್ಷದ ಪರವಾಗಿ ಇದೆ. ಇವಿಎಂಗಳನ್ನು ಇಲ್ಲಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದರು.

ಎಕ್ಸಿಟ್ ಪೋಲ್ ದೇಶದಲ್ಲಿ ಮೋದಿ ಅಲೆ ಇದೆ ಎಂದು ತೋರಿಸಲು ಅಷ್ಟೆ. ತಾತ್ಕಾಲಿಕ, ಕಾಲ್ಪನಿಕ ಮೋದಿ ಅಲೆ ಹೆಚ್ಚು ದಿನ ಇರಲ್ಲ. ಬಹುಮತದ ಕೊರತೆಯಾದರೆ ಪ್ರಾದೇಶಿಕ ಪಕ್ಷ ಸೆಳೆಯಲು ಯತ್ನ ಮಾಡಲಾಗುತ್ತೆ. ಎಕ್ಸಿಟ್ ಪೋಲ್ ಮೂಲಕ ಪ್ರಾದೇಶಿಕ ಪಕ್ಷಗಳನ್ನು ಸೆಳೆಯುವ ಯತ್ನ ಮಾಡಲಾಗುತ್ತಿದೆ. ಬಿಜೆಪಿ ಎಕ್ಸಿಟ್ ಪೋಲ್ ಮೂಲಕ ವೇದಿಕೆ ಸಿದ್ಧಪಡಿಸುತ್ತಿದೆ. ಇದು ಎಕ್ಸಿಟ್ ಪೋಲ್ ಅಷ್ಟೇ. ಎಕ್ಸಾಟ್ ಪೋಲ್ ಅಲ್ಲ ಎಂದು ಬರೆದು ಎಚ್.ಡಿ ದೇವೇಗೌಡ, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್, ರಾಹುಲ್ ಗಾಂಧಿ, ಬಿಎಸ್‍ಪಿ ಹಾಗೂ ಎಕ್ಸಿಟ್ ಪೋಲ್ 2019 ಹ್ಯಾಷ್‍ಟ್ಯಾಗ್ ಹಾಕಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ ಟಾಂಗ್ ಕೊಟ್ಟಿದ್ದರು.

Share This Article
Leave a Comment

Leave a Reply

Your email address will not be published. Required fields are marked *