Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಮಾತನಾಡಲ್ಲ – ಮಾಧ್ಯಮಗಳ ಪ್ರಶ್ನೆಗೆ ಮೌನಕ್ಕೆ ಶರಣಾದ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾನು ಮಾತನಾಡಲ್ಲ – ಮಾಧ್ಯಮಗಳ ಪ್ರಶ್ನೆಗೆ ಮೌನಕ್ಕೆ ಶರಣಾದ ಸಿಎಂ

Bengaluru City

ನಾನು ಮಾತನಾಡಲ್ಲ – ಮಾಧ್ಯಮಗಳ ಪ್ರಶ್ನೆಗೆ ಮೌನಕ್ಕೆ ಶರಣಾದ ಸಿಎಂ

Public TV
Last updated: May 24, 2019 10:40 pm
Public TV
Share
3 Min Read
HDK 2
SHARE

ಬೆಂಗಳೂರು: ಇಂದು ಸಿಎಂ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಸಿಎಂ ಮೌನಕ್ಕೆ ಜಾರಿದ್ದು, ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸದೇ ತಮ್ಮ ಮುನಿಸನ್ನು ಮುಂದುವರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಿಎಂ ಅವರ ಪ್ರತಿಕ್ರಿಯೆ ಕೇಳಿದ್ದಾಗ ಕೈಯಲ್ಲೇ ಸನ್ನೇ ಮಾಡಿ ಮಾತನಾಡಲ್ಲ ಎಂದು ಹೇಳಿದ್ದಾರೆ. ಮಾಧ್ಯಮಗಳ ಮೇಲೆ ಸಿಎಂ ಮುನಿಸಿಕೊಂಡಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಮಂಡ್ಯ ರಾಜಕಾರಣದ ಬಗ್ಗೆ ಪ್ರಶ್ನಿಸಿದ್ದಾಗಲೂ ಕೂಡ ಸಿಎಂ ಗರಂ ಆಗಿದ್ದರು. ಮಾಧ್ಯಮಗಳಿಗೆ ಈಗ ಉತ್ತರ ನೀಡಲ್ಲ. ಮೇ 23ಕ್ಕೆ ಉತ್ತರ ನೀಡುತ್ತೇನೆ. ಮಂಡ್ಯ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡುತ್ತೀರಿ. ನೀವು ನಮ್ಮ ಕುಟುಂಬ ಹಾಗೂ ನಮ್ಮ ಹೇಳಿಕೆಗಳನ್ನು ಹಿಡಿದು ವ್ಯಂಗ್ಯವಾಡುತ್ತೀರ. ನಿಮಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಹರಿಹಾಯ್ದಿದ್ದರು. ಹಾಗೆಯೇ ಇಂದು ಕೂಡ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸದೇ ಮೌನಕ್ಕೆ ಶರಣಾಗಿದ್ದಾರೆ.

hdk cm

ಸಿಎಂ ಹೇಳಿದ್ದೇನು?
ಈ ಹಿಂದೆ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಮಂಡ್ಯ ಕ್ಷೇತ್ರ ಹಾಗೂ ಅಲ್ಲಿನ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅವರ ಬಗ್ಗೆ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದ ಸುದ್ದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಮಾಧ್ಯಮಗಳಲ್ಲಿ ಬರೀ ಸುಮಲತಾ, ಮೋದಿ ಎಂದು ತೋರಿಸುತ್ತಿದ್ದೀರಾ. ನಿಮಗೆ ನಾನು ಈಗ ಉತ್ತರ ನೀಡಲ್ಲ. ಮೇ 23ಕ್ಕೆ ಉತ್ತರ ನೀಡುತ್ತೇನೆ. ಮಂಡ್ಯ ರಾಜಕಾರಣ, ಅಲ್ಲಿನ ಜನ ಏನು ಎಂದು ನನಗೆ ಗೊತ್ತು. ನೋಡುತ್ತಿರಿ ಮೇ 23ಕ್ಕೆ ಜನ ಏನು ಎಂದು ತೋರಿಸುತ್ತಾರೆ. ಪ್ರಧಾನಿ ಮೋದಿಯಿಂದ ಹಿಡಿದು ಎಲ್ಲಾ ಮಾಧ್ಯಮಗಳಲ್ಲೂ ಬರೀ ಸುಮಲತಾ, ಸುಮಲತಾ ಎಂದು ಹೇಳಿದ್ದೀರಾ. ಇದಕ್ಕೆಲ್ಲಾ ಮೇ 23ರ ನಂತರ ಉತ್ತರ ಸಿಗುತ್ತೆ. ಆಗ ಮಾತನಾಡುತ್ತೇನೆ ಎಂದು ಕಿಡಿಕಾರಿದ್ದರು.

cm hdk nikil 1

ಬಳಿಕ ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ಮಂಡ್ಯ ಚುನಾವಣೆ ಬಗ್ಗೆ ಕೇಳಲಾದ ಮಾಧ್ಯಮಗಳ ಪ್ರಶ್ನೆಗೆ ಸಿಎಂ ಸಿಟ್ಟಿಗೆದ್ದಿದ್ದರು. ನಾನು ಮಾಧ್ಯಮದವರ ಜೊತೆ ಉತ್ತಮ ಸ್ನೇಹ ಇಟ್ಟುಕೊಂಡ ವ್ಯಕ್ತಿ. ಕೆಲ ದಿನಗಳ ಹಿಂದೆ ಮಾಧ್ಯಮದವರ ಸಹವಾಸವೇ ಡೇಂಜರ್ ಅಂತಾ ದೂರ ಉಳಿದುಕೊಂಡಿದ್ದೇನೆ. ನಾನು ಮಾಧ್ಯಮದಿಂದ ಬದುಕಿಲ್ಲ. ನಾಡಿನ ಆರೂವರೆ ಕೋಟಿ ಜನರ ಆಶೀರ್ವಾದದಿಂದ ಬದುಕಿದ್ದೇನೆ. ಮಾತು ಎತ್ತಿದರೆ ಸಿಎಂ ಕುರ್ಚಿ ಗಢ ಗಢ ಅಂತಾ ಶುರು ಮಾಡಿಕೊಳ್ಳುತ್ತಾರೆ. ಕೆಲವು ದೃಶ್ಯ ಮಾಧ್ಯಮಗಳು ತಮ್ಮ ಟೈಮ್ ಫಿಲ್ ಮಾಡಿಕೊಳ್ಳೋಕೆ ನಾವು ಹೇಳಿರದ ವಿಷಯಗಳನ್ನು ಅರ್ಧ ಗಂಟೆ ಎಪಿಸೋಡ್ ಮಾಡ್ತಾರೆ. ನಿಖಿಲ್ ಎಲ್ಲಿದ್ದೀಯಪ್ಪಾ? ಎಂಬ ವಿಷಯದ ಬಗ್ಗೆ ಅರ್ಧ ಗಂಟೆ ಸಂಚಿಕೆ ಮಾಡುತ್ತಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದರು.

CM HDK

ಮಾಧ್ಯಮಗಳ ಮೇಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಾನೂನು ತರಲು ಚರ್ಚೆ ನಡೆಸಿದ್ದೇವೆ. ಕೆಲವೊಂದು ವಾಹಿನಿಗಳು ರಾಜಕಾರಣಿಗಳನ್ನು ವ್ಯಂಗ್ಯವಾಗಿ ತೋರಿಸುತ್ತಾರೆ. ನಾವೇನು ಬಿಟ್ಟಿ ಸಿಕ್ಕಿದ್ದೇವಾ? ನಮ್ಮ ಪ್ರತಿಯೊಂದು ಹೇಳಿಕೆಗಳನ್ನು ವ್ಯಂಗ್ಯವಾಗಿ ತೋರಿಸುವ ಅಧಿಕಾರವನ್ನು ಮಾಧ್ಯಮಗಳಿಗೆ ಯಾರು ನೀಡಿದ್ದಾರೆ ಎಂದು ಗೊತ್ತಾಗುತ್ತಿಲ್ಲ. ಈ ಸಮ್ಮಿಶ್ರ ಸರ್ಕಾರ ಸದೃಢವಾಗಿದ್ದು, ಅಷ್ಟೊಂದು ಸುಲಭವಾಗಿ ಹೋಗಲ್ಲ ಎಂದು ಗುಡುಗಿದ್ದರು.

hdk e1554977447812

ಬೆಂಗಳೂರಿನಲ್ಲಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜೊತೆಗಿನ ಸಭೆ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿಎಂ, ನಿಮ್ಮಲ್ಲಿನ ಚರ್ಚೆ ಹಾಗೂ ಸುದ್ದಿಗಳಿಂದ ನಾನು ನಿಮಗೆ ಬಹಿಷ್ಕಾರ ಹಾಕಿದ್ದೇನೆ. ನಾನು ಮಾಧ್ಯಮಗಳಿಗೆ ಬಹಿಷ್ಕಾರ ಹಾಕಿದ್ದೇನೆ (ಐ ಆಮ್ ಬಾಯ್ಕಾಟಿಂಗ್ ಯುವರ್ ಸೆಲ್ಫ್) ಎಂದು ಹೇಳಿ ಸಿಟ್ಟಿನಿಂದಲೇ ತೆರಳಿದ್ದರು.

Sumalatha Ambareesh HDK

ಅದೇನು ಸ್ಟೋರಿನೋ, ಅದೇನು ಚರ್ಚೆ ಮಾಡುತ್ತೀರೋ ಮಾಡಿಕೊಳ್ಳಿ. ಆ ಮೂಲಕ ಮಜಾ ಮಾಡಿ. ನಾನು ನಿಮ್ಮ ಜೊತೆ ಮಾತನಾಡಬಾರದು ಎಂದು ತೀರ್ಮಾನ ಮಾಡಿದ್ದೇನೆ ಎಂದು ಹೇಳಿದ್ದರು.

ರಾಜ್ಯದಲ್ಲಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದಲ್ಲಿ ನಡೆದ ಸ್ವಾಭಿಮಾನಿ ವರ್ಸಸ್ ಸರ್ಕಾರದ ನಡುವಿನ ಸಮರದಲ್ಲಿ ಸುಮಲತಾ ಅವರು ಭರ್ಜರಿ ಗೆಲುವು ಪಡೆದಿದ್ದಾರೆ. ಚುನಾವಣೆಯಲ್ಲಿ ನಿಖಿಲ್ ಅವರಿಗೆ 5,71,777 ಮತ ಲಭಿಸಿದ್ದರೆ, ಸುಮಲತಾ ಅವರಿಗೆ 6,98,213 ಮತ ಲಭಿಸಿದೆ. ಆ ಮೂಲಕ ಸುಮಲತಾ ಅವರು ಬರೋಬ್ಬರಿ 1,26,436 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ.

TAGGED:bengaluruCM KumaraswamyLoksabha election resultmandyamediaPublic TVಪಬ್ಲಿಕ್ ಟಿವಿಬೆಂಗಳೂರುಮಂಡ್ಯ ಕ್ಷೇತ್ರಮಾಧ್ಯಮಮೌನಂಲೋಕಸಭಾ ಚುನಾವಣೆಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Gilli Kavya
ಗಿಲ್ಲಿ ಹೇಳಿದಾಗ ಕಾಣಿಸಿಕೊಳ್ಳೋಕೆ ಇದು ಕಪಲ್‌ ಶೋ ಅಲ್ಲ – ಆಚೆ ಬರ್ತಿದ್ದಂತೆ ಕ್ಲ್ಯಾರಿಟಿ ಕೊಟ್ಟ ಕಾವು!
Bengaluru City Cinema Latest Top Stories TV Shows
Kavya 01
BBK Season 12 | 3ನೇ ರನ್ನರ್‌ಅಪ್‌ ಕಾವ್ಯ ಶೈವ ಔಟ್‌ – ಸಿಕ್ಕ ಬಹುಮಾನ ಎಷ್ಟು?
Bengaluru City Cinema Latest Main Post TV Shows
Raghu
BBK Season 12 | ಗ್ರ್ಯಾಂಡ್‌ ಫಿನಾಲೆಯಿಂದ ರಗಡ್‌ ರಘು ಔಟ್‌
Cinema Latest Main Post TV Shows
AR Rahman 2
ಭಾರತ ನನ್ನ ಸ್ಫೂರ್ತಿ, ತವರು – ಕೆಲವೊಮ್ಮೆ ಉದ್ದೇಶಗಳನ್ನು ತಪ್ಪಾಗಿ ಅರ್ಥೈಸಲ್ಪಡಬಹುದು: ರೆಹಮಾನ್ ಸ್ಪಷ್ಟನೆ
Bollywood Cinema Latest National

You Might Also Like

Ind vs NZ 1
Cricket

ಭಾರತದ ನೆಲದಲ್ಲಿ ಫಸ್ಟ್‌ ಟೈಮ್‌ ಏಕದಿನ ಸರಣಿ ಗೆದ್ದ ಕಿವೀಸ್‌; ಚೇಸ್‌ ಮಾಸ್ಟರ್‌ ಶತಕದ ಹೋರಾಟ ವ್ಯರ್ಥ!

Public TV
By Public TV
33 minutes ago
Dhanush Gowda
Cinema

BBK 12 | Top-5 ಪಟ್ಟದಿಂದ ಔಟ್‌ – ಗ್ರ್ಯಾಂಡ್‌ ಫಿನಾಲೆಯಿಂದ ಹೊರಬಂದ ಧನುಷ್‌

Public TV
By Public TV
3 hours ago
Narendra Modi
Latest

ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಶಿಕ್ಷೆಯಾಗಲೇಬೇಕು, ‘ಮಹಾ ಜಂಗಲ್ ರಾಜ್’ ಯುಗ ಕೊನೆಗೊಳಿಸಬೇಕು: ಮೋದಿ ಕರೆ

Public TV
By Public TV
4 hours ago
Haveri Sadhana Samavesha Shivananda Patil
Districts

ಫೆ. 13ರಂದು ಹಾವೇರಿಯಲ್ಲಿ ಬೃಹತ್ ಸಾಧನಾ ಸಮಾವೇಶ – ಒಂದು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ

Public TV
By Public TV
4 hours ago
Road Accident
Latest

ದೆಹಲಿ, ಹರಿಯಾಣದಲ್ಲಿ ಪ್ರತ್ಯೇಕ ಅಪಘಾತ – ಮೂವರು ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

Public TV
By Public TV
4 hours ago
Agriculture Award For Karnataka PM Fasal Bima Yojana
Bengaluru City

ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕೃಷಿ ಇಲಾಖೆಗೆ ದ್ವಿತೀಯ ಸ್ಥಾನ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?