ದೆಹಲಿಯಲ್ಲಿ ಜಾಧವ್ ದೀರ್ಘ ದಂಡ ನಮಸ್ಕಾರ

Public TV
1 Min Read
Umesh jadhav

ನವದೆಹಲಿ: ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದ ಉಮೇಶ್ ಜಾಧವ್ ಅವರು ಸಂಸತ್ ಭವನಕ್ಕೆ ದೀರ್ಘ ದಂಡ ನಮಸ್ಕಾರ ಹಾಕಿದ್ದಾರೆ.

ನರೇಂದ್ರ ಮೋದಿ ಅವರು ಇಂದು ಎರಡನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿರುವ ಉಮೇಶ್ ಜಾಧವ್ ಅವರು ವಿಶೇಷ ರೀತಿಯಲ್ಲಿ ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡಿದ್ದಾರೆ. ಈ ಮೂಲಕ ಎಲ್ಲ ಗಮನ ಸೆಳೆದರು.

Umesh jadhav A

ನರೇಂದ್ರ ಮೋದಿ ಅವರು 2014ರಲ್ಲಿ ಸಂಸತ್ ಪ್ರವೇಶದ ವೇಳೆ ಸಂಸತ್ ಭವನದ ಮೆಟ್ಟಿಲುಗಳಿಗೆ ನಮಸ್ಕರಿಸಿದ್ದರು. ಇದನ್ನೇ ಉಮೇಶ್ ಜಾಧವ್ ನಕಲು ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬರುತ್ತಿದೆ.

ರಾಜ್ಯದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್, ಧಾರವಾಡ ಕ್ಷೇತ್ರದ ಸಂಸದ ಪ್ರಹ್ಲಾದ್ ಜೋಷಿ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಸದಾನಂದಗೌಡ ಹಾಗೂ ಬೆಳಗಾವಿ ಕ್ಷೇತ್ರದ ಸುರೇಶ್ ಅಂಗಡಿ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣವಚನ ಸಮಾರಂಭದಲ್ಲಿ ಕರ್ನಾಟಕದಿಂದ ಅಥಿತಿಗಳಾಗಿ ಸಿಎಂ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಆದಿಚುಂಚನಗಿರಿಯ ನಿರ್ಮಲಾನಂದ ಸ್ವಾಮೀಜಿ, ಉಡುಪಿ ಪೇಜಾವರ ಶ್ರೀಗಳು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *