ಕಲ್ಯಾಣಿ ಸ್ವಚ್ಛಗೊಳಿಸಲು ಕೈಜೋಡಿಸಿದ ಕೃಷಿ ಸಚಿವ – 40ಕ್ಕೂ ಹೆಚ್ಚು ಪುರಾತನ ಕಲ್ಯಾಣಿ ಕ್ಲೀನ್

Public TV
1 Min Read
ckb minister cleaning

ಚಿಕ್ಕಬಳ್ಳಾಪುರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಲ್ಯಾಣಿ ಸ್ವಚ್ಛತಾ ಕಾರ್ಯಕ್ಕೆ ಕೃಷಿ ಸಚಿವ ಶಿವಶಂಕರರೆಡ್ಡಿ ಕೈಜೋಡಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಬಳಿ ಪಾಳುಬಿದ್ದು ಗಿಡಗಂಟೆ, ಕಲ್ಲು, ಮುಳ್ಳುಗಳಿಂದ ಕೂಡಿದ್ದ ಕಲ್ಯಾಣಿಯನ್ನ ಸ್ವಚ್ಛಗೊಳಿಸಲಾಯಿತು. ಈ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದ್ದ ಸಚಿವ ಶಿವಶಂಕರರೆಡ್ಡಿ, ತಾವೇ ಸ್ವತಃ ಎಲ್ಲರ ಜೊತೆಗೂಡಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡರು. ಇದನ್ನೂ ಓದಿ:ಸಸಿ ನೆಟ್ಟು ರಂಜಾನ್ ಆಚರಿಸಿದ ರಾಯಚೂರಿನ ಜನತೆ

ckb minister cleaning 1 1

ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಂಪ್ರದಾಯಿಕವಾಗಿ ನಿರ್ಮಾಣಗೊಂಡ ಪುರಾತನ ಕಾಲದ ಹಲವು ಕಲ್ಯಾಣಿಗಳು ನಿರ್ಲಕ್ಷ್ಯದಿಂದ ಪಾಳುಬಿದ್ದಿದೆ. ಹಿಂದೆ ಈ ಕಲ್ಯಾಣಿಗಳನ್ನು ಜನರಿಗೆ ನೀರು ಪೂರೈಸಲು ನಿರ್ಮಿಸಲಾಗಿತ್ತು. ದುಸ್ಥಿತಿಯಲ್ಲಿರುವ ಕಲ್ಯಾಣಿಗಳನ್ನು ಜಿಲ್ಲಾಡಳಿತ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಗಮನಿಸಿ ಅದನ್ನು ಸ್ವಚ್ಛಗೊಳಿಸಿ ಮತ್ತೆ ಕಲ್ಯಾಣಿಗಳಿಗೆ ಪುನರ್ಜೀವ  ನೀಡಲು ಮುಂದಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ:ವಿಶ್ವಪರಿಸರ ದಿನ- ಸಾವಿರ ಸಸಿಗಳನ್ನು ನೆಟ್ಟು ಶತಾಯುಷಿಯ ಸ್ಮರಣೆ

ckb minister cleaning 2

ಕಲ್ಯಾಣಿ ಸ್ವಚ್ಛತಾ ಕಾರ್ಯಕ್ರಮ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ನೇತೃತ್ವದಲ್ಲಿ ಜಿಲ್ಲೆಯ ವಿವಿಧೆಡೆ ಆಯೋಜಿಸಲಾಗಿದೆ. ಈಗಾಗಲೇ 40 ಕ್ಕೂ ಹೆಚ್ಚು ಪುರಾತನ ಕಲ್ಯಾಣಿಗಳ ಸ್ವಚ್ಛತೆ ನಡೆಸಲಾಗಿದ್ದು, ಜಿಲ್ಲಾಧಿಕಾರಿಗಳ ಕಾರ್ಯಕ್ಕೆ ಸಚಿವರು ಅಭಿನಂದನೆ ತಿಳಿಸಿದ್ದಾರೆ. ಹಾಗೆಯೇ ಈ ಕಾರ್ಯಕ್ಕೆ ಸಾರ್ವಜನಿಕರು ಕೂಡ ಬೆಂಬಲ ನೀಡಿ ಸ್ವಚ್ಛತಾ ಕೆಲಸದಲ್ಲಿ ತೊಡಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *