ಚೆನ್ನೈ: ಸಲಿಂಗಕಾಮಿಯೊಬ್ಬ ಸೆಕ್ಸ್ ಗೆ ನಿರಾಕರಿಸಿದ್ದಕ್ಕೆ ಇಬ್ಬರು ಪುರುಷರ ಮರ್ಮಾಂಗವನ್ನು ಕತ್ತರಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಆರೋಪಿಯನ್ನು ಮನಾಮಧುರೈನ ನಿವಾಸಿ ಮುನುಸ್ವಾಮಿ ಎಂದು ಗುರುತಿಸಲಾಗಿದೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಇಬ್ಬರು ಪುರುಷರ ಜೊತೆ ಸೆಕ್ಸ್ ಮಾಡಲು ಯತ್ನಿಸಿದ್ದಾನೆ. ಇದಕ್ಕೆ ಇಬ್ಬರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಕೋಪಗೊಂಡ ಆರೋಪಿ ಇಬ್ಬರ ಮೇಲೆ ದಾಳಿ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಈಗಾಗಲೇ ಮದುವೆಯಾಗಿದ್ದು, ಇಬ್ಬರ ಮಕ್ಕಳಿದ್ದಾರೆ. ಈತ ಮೀನು ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ವಿಡಿಯೋ ಪರಿಶೀಲನೆ ಮಾಡಿದಾಗ ಅದರಲ್ಲಿ ಆರೋಪಿ ಚೆನ್ನೈನ ರೆಟ್ಟೇರಿಯ ಫ್ಲೈಓವರ್ ಅಡಿಯಲ್ಲಿ ನಡೆದುಕೊಂಡು ಹೋಗುವುದನ್ನು ಕಾಣಬಹುದು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಜೂನ್ 11 ರಂದು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರೆಟ್ಟೇರಿಯ ಫ್ಲೈಓವರ್ ನಲ್ಲಿ ತೀವ್ರವಾಗಿ ಗಾಯಗೊಂಡ ವ್ಯಕ್ತಿಯೊಬ್ಬರು ಕಂಡು ಬಂದರು. ತಕ್ಷಣ ನಾವು ಆತನನ್ನು ಆಸ್ಪತ್ರೆಗೆ ದಾಖಲಿಸಿ ತನಿಖೆ ಶುರು ಮಾಡಿದೇವು. ಸ್ವಲ್ಪ ಸಮಯದ ನಂತರ ಇನ್ನೊಬ್ಬ ವ್ಯಕ್ತಿಯೂ ಗಾಯಗೊಂಡಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆದರೆ ಇಬ್ಬರಿಗೂ ಒಂದೇ ಗಾಯವಾಗಿತ್ತು. ಆಗ ನಾವು ಈ ಕೃತ್ಯವನ್ನು ಆರೋಪಿಯೊಬ್ಬನೆ ಎಸಗಿದ್ದಾನೆ ಎಂದು ತಿಳಿದು ಬಂದಿತ್ತು. ಸದ್ಯಕ್ಕೆ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿ ಇಬ್ಬರ ಮೇಲೆ ದಾಳಿ ಮಾಡಲು ಮದ್ಯ ಬಾಟಲಿ ಮತ್ತು ಬ್ಲೇಡ್ ಅನ್ನು ಉಪಯೋಗಿಸಿದ್ದಾನೆ ಎಂದು ತನಿಖೆ ಸಂದರ್ಭದಲ್ಲಿ ತಿಳಿದು ಬಂದಿದೆ. ಆರೋಪಿ ರೆಟ್ಟೇರಿಯ ಫ್ಲೈಓವರ್ ನಲ್ಲಿ ಓಡಾಡುತ್ತಾ ಇಬ್ಬರನ್ನು ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಆಮಿಷವೊಡ್ಡಿದ್ದಾನೆ. ಆದರೆ ಇಬ್ಬರು ವ್ಯಕ್ತಿಗಳು ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡು ಅವರ ಮರ್ಮಾಂಗವನ್ನು ಕಟ್ ಮಾಡಿದ್ದಾನೆ. ಆರೋಪಿ ಆಗಾಗ ರೆಟ್ಟೇರಿ ಫ್ಲೈಓವರ್ ಹೋಗುತ್ತಿದ್ದನು ಎಂದು ತಿಳಿದು ಬಂದಿದೆ.
ವಿಡಿಯೋ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ತಾನೇ ಈ ಕೃತ್ಯ ಎಸಗಿರುವುದು ಎಂದು ಒಪ್ಪಿಕೊಂಡಿದ್ದಾನೆ. ಸದ್ಯಕ್ಕೆ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.