ಚಲಿಸುತ್ತಿರುವ ರೈಲಿನಲ್ಲಿ ಸಭೆ – ಸಚಿವ ಅಂಗಡಿ ವಿನೂತನ ಪ್ರಯೋಗ

Public TV
1 Min Read
dwd train sabe

ಧಾರವಾಡ: ಚಲಿಸುವ ರೈಲಿನಲ್ಲೇ ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸುವ ಮೂಲಕ ವಿನೂತನ ಪ್ರಯೋಗ ಮಾಡಿದ್ದಾರೆ.

ಬೆಳಗಾವಿ-ಹುಬ್ಬಳ್ಳಿ ಮಧ್ಯೆ ಚಲಿಸುವ ರೈಲಿನಲ್ಲಿ ಅಧಿಕಾರಿಗಳ ಜೊತೆ ಸುರೇಶ್ ಅಂಗಡಿ ಪ್ರಗತಿ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ರೈಲಿನಲ್ಲಿ ಪ್ರಯಾಣಿಸುತ್ತಲೇ ಅಧಿಕಾರಿಗಳೊಂದಿಗೆ ಸಭೆ ಕೂಡಾ ನಡೆಸಿದ್ದಾರೆ. ಇದೇ ವೇಳೆ ಬೆಳಗಾವಿ-ಹುಬ್ಬಳ್ಳಿ ಮಧ್ಯದ ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ ರೈಲು ನಿಲ್ದಾಣಗಳ ಪರಿಶೀಲನೆ ಮಾಡಿದರು.

dwd train sabe 1

ಹುಬ್ಬಳ್ಳಿ-ಬೆಳಗಾವಿ ಮಧ್ಯೆ ರೈಲ್ವೆ ಮಾರ್ಗ ಸುಧಾರಣೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಅಧಿಕಾರಿಗಳ ಜೊತೆ ಸಚಿವರು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

Share This Article
Leave a Comment

Leave a Reply

Your email address will not be published. Required fields are marked *