ಶಿವರಾಜ್‌ಕುಮಾರ್‌ಗೆ 57ನೇ ಹುಟ್ಟುಹಬ್ಬದ ಸಂಭ್ರಮ – ಅಭಿಮಾನಿಗಳಿಗೆ ಸರ್ಪ್ರೈಸ್

Public TV
2 Min Read
shivarajkumar birthday

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಇಂದು ತಮ್ಮ 57ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಅಲ್ಲದೆ ಈ ಹುಟ್ಟುಹಬ್ಬದಂದು ಅವರು ತಮ್ಮ ಟ್ವಿಟ್ಟರ್ ಹಾಗೂ ಫೇಸ್‍ಬುಕ್‍ನಲ್ಲಿ ಅಧಿಕೃತ ಖಾತೆ ತೆರೆಯುವ ಮೂಲಕ ತಮ್ಮ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ.

ಶಿವಣ್ಣ ಅವರು ಕಳೆದ ಆರು ತಿಂಗಳಿನಿಂದ ಭುಜದ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಕೆಲ ದಿನಗಳ ಹಿಂದೆಯಷ್ಟೇ ಶಸ್ತ್ರ ಚಿಕಿತ್ಸೆಗಾಗಿ ಲಂಡನ್‍ಗೆ ತೆರಳಿದ್ದರು. ಗುರುವಾರ ಅವರ ಶಸ್ತ್ರಚಿಕಿತ್ಸೆ ಯಶ್ವಸಿಯಾಗಿ ನಡೆದಿತ್ತು. ಶಿವಣ್ಣ ಅವರ ಜೊತೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿ ನಿವೇದಿತಾ ಕೂಡ ಲಂಡನ್‍ಗೆ ತೆರಳಿದ್ದಾರೆ. ಪುನೀತ್ ರಾಜಕುಮಾರ್ ಅವರು ಕೂಡ ಲಂಡನ್‍ಗೆ ತೆರಳಿ ಅವರ ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದಾರೆ.

ಶಿವರಾಜ್‍ಕುಮಾರ್ ಕೇಕ್ ಕತ್ತರಿಸುವ ಮೂಲಕ ತಮ್ಮ ಕುಟುಂಬದ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ನಟ ಪುನೀತ್ ರಾಜ್‍ಕುಮಾರ್ ಅವರು ಕೂಡ ತಮ್ಮ ಅಣ್ಣನ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ವಿಶೇಷ ಎಂದರೆ ಈ ಹುಟ್ಟುಹಬ್ಬದಂದು ಶಿವಣ್ಣ ಅಧಿಕೃತವಾಗಿ ಫೇಸ್‍ಬುಕ್ ಹಾಗೂ ಟ್ವಿಟ್ಟರ್ ಖಾತೆಯನ್ನು ತೆರೆದಿದ್ದಾರೆ. ಈ ಬಗ್ಗೆ ಅವರು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕುವ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ.

 

View this post on Instagram

 

Welcome to official twitter account ಈಗಲೇ ಫಾಲೋ ಮಾಡಿ..

A post shared by Dr.Shivarajkumar (@dr.shivarajkumar) on

ಶಿವಸೈನ್ಯೆ ತಂಡ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬದಂದು 11 ಗಂಟೆಗೆ ರಾಜ್ಯ ಕುಮಾರ್ ಪುಣ್ಯ ಭೂಮಿಯಲ್ಲಿ ರಾಘವೇಂದ್ರ ರಾಜ್ ಕುಮಾರ್ ಅವರು ಕೇಕ್ ಕತ್ತರಿಸಿ, ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ಆಚರಣೆಗೆ ಮೆರಗು ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಶಿವಣ್ಣ ಅವರಿಗೋಸ್ಕರ ಡೆಡಿಕೇಟ್ ಮಾಡಲು ಶಿವಸೈನ್ಯದವರು ಸಿದ್ಧ ಮಾಡಿರುವ ಮಹಾನ್ ಕಲಾವಿದ ಹಾಡನ್ನು, ನಿರ್ಮಾಪಕರು ಮತ್ತು ರಾಜ್ ಕುಮಾರ್ ಕುಟುಂಬದ ಆಪ್ತ ಕೆ.ಪಿ.ಶ್ರೀಕಾಂತ್ ಅವರು ಬಿಡುಗಡೆಗೊಳಿಸಲಿದ್ದಾರೆ.

 

View this post on Instagram

 

Happy Birthday Shivanna…. ????????

A post shared by Puneeth Rajkumar (@puneethrajkumar.official) on

ಶಿವಣ್ಣ ಮತ್ತು ಪುನೀತ್ ರಾಜ್‍ಕುಮಾರ್ ಅವರು ಇಬ್ಬರೂ ಸಹ ಲಂಡನ್‍ನಲ್ಲಿ ಇದ್ದಾರೆ. ಹೀಗಾಗಿ ಶುಕ್ರವಾರ ಮಧ್ಯಾಹ್ನ 1:00ಕ್ಕೆ ಅಭಿಮಾನಿಗಳೊಂದಿಗೆ ಮಾತನಾಡಲು ಅಣ್ಣಾವ್ರ ಪುಣ್ಯಭೂಮಿಯಲ್ಲಿ ಎಲ್‍ಇಡಿ ಸ್ಕ್ರೀನ್ ಮುಖಾಂತರ ವಿಡಿಯೋದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಅನ್ನದಾನ ಸಹ ಏರ್ಪಡಿಸಲಾಗಿದ್ದು, ಸಂತೃಪ್ತಿಯ ಹುಟ್ಟಹಬ್ಬಕ್ಕೆ ಸಾಕ್ಷಿಯಾಗಲಿದೆ.

 

View this post on Instagram

 

????????????

A post shared by Dr.Shivarajkumar (@dr.shivarajkumar) on

Share This Article
Leave a Comment

Leave a Reply

Your email address will not be published. Required fields are marked *