ಪಾನಿ ಬಚಾವ್ ಎಂದು ವಿಶಿಷ್ಟ ರೀತಿಯಲ್ಲಿ ಬಾಟಲ್ ಕ್ಯಾಪ್ ಚಾಲೆಂಜ್ ಮಾಡಿದ ಸಲ್ಲು: ವಿಡಿಯೋ

Public TV
2 Min Read
collage salman khan

ಮುಂಬೈ: ಸಾಮಾಜಿಕ ಜಾಲತಾಣಗಳಲ್ಲಿ ಈಗ ಬಾಟಲ್ ಕ್ಯಾಪ್ ಚಾಲೆಂಜ್ ತುಂಬಾ ವೈರಲ್ ಆಗುತ್ತಿದೆ. ಈಗ ಈ ಜಾಲೆಂಜ್ ಸ್ವೀಕರಿಸಿರುವ ಬಾಲಿವುಡ್ ಬಾಯಿಜಾನ್ ಸಲ್ಮಾನ್ ಖಾನ್ ಅವರು ನೀರನ್ನು ಉಳಿಸಿ ಎಂದು ವಿಶಿಷ್ಟ ರೀತಿಯಲ್ಲಿ ಬಾಟಲ್ ಕ್ಯಾಪ್ ಚಾಲೆಂಜ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹಲವು ಚಾಲೆಂಜ್‍ಗಳು ವೈರಲ್ ಆಗುತ್ತೆ. ಈ ಹಿಂದೆ ಫಿಟ್ನೆಸ್ ಚಾಲೆಂಜ್ ಶುರು ಆಗಿತ್ತು. ಆದರೆ ಈಗ ಬಾಟಲ್ ಕ್ಯಾಪ್ ಚಾಲೆಂಜ್ ಸದ್ದು ಮಾಡುತ್ತಿದೆ. ಹಾಲಿವುಡ್‍ನಿಂದ ಬಾಲಿವುಡ್ ಮತ್ತು ಸ್ಯಾಂಡಲ್‍ವುಡ್‍ವರೆಗೂ ಹಲವು ಕಲಾವಿದರು ಈ ಚಾಲೆಂಜ್ ಸ್ವೀಕರಿಸಿ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ಈಗ ಈ ಜಾಲೆಂಜ್‍ನ್ನು ತನ್ನ ಜಿಮ್‍ನಲ್ಲಿ ಮಾಡಿರುವ ಸಲ್ಲು ಬಾಟಿಲಿಯನ್ನು ಕಾಲಿನಿಂದ ಒದೆಯುವುದರ ಬದಲು ಅದನ್ನು ಉದಿ ಕ್ಯಾಪ್ ಬೀಳಿಸಿ ನಂತರ ಪಾನಿ ಬಚಾವ್ ಎಂಬ ಸಂದೇಶವನ್ನು ಹೇಳಿ ಬಾಟಲ್‍ನಲ್ಲಿ ಇರುವ ನೀರನ್ನು ಸಂಪೂರ್ಣವಾಗಿ ಕುಡಿದು ಈ ಜಾಲೆಂಜ್‍ನ್ನು ಮಾಡಿದ್ದಾರೆ. ಈ ಮೂಲಕ ನೀರನ್ನು ಉಳಿಸಿ ಎಂಬ ಸಂದೇಶ ನೀಡಿದ್ದಾರೆ.

ಬಾಲಿವುಡ್ ನಟ ಅಕ್ಷಯ್ ಕುಮಾರ್ ಮೊದಲು ಈ ಚಾಲೆಂಜ್ ಪ್ರಾರಂಭಿಸಿದರು. ಇದೀಗ ಸ್ಯಾಂಡಲ್‍ವುಡ್‍ಗೂ ಈ ಚಾಲೆಂಜ್ ಲಗ್ಗೆ ಇಟ್ಟಿದ್ದು, ನಟ ಅರ್ಜುನ್ ಸರ್ಜಾ, ಗೋಲ್ಡನ್ ಸ್ಟಾರ್ ಗಣೇಶ್, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್, ನಟಿಯರಾದ ರಚಿತಾ ರಾಮ್, ಹರಿಪ್ರಿಯಾ, ಹರ್ಷಿಕಾ ಪೂಣಚ್ಚ ಸೇರಿದಂತೆ ಹಲವು ಕಲಾವಿದರು ಈ ಚಾಲೆಂಜ್ ಸ್ವೀಕರಿಸಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.

ನಟಿಯರಾದ ಹರಿಪ್ರಿಯಾ ಹಾಗೂ ಹರ್ಷಿಕಾ ಪೂಣಚ್ಚ ಬಾಟಲ್‍ಗೆ ಫ್ಲೈಯಿಂಗ್ ಕಿಸ್ ನೀಡುವ ಮೂಲಕ ಈ ಚಾಲೆಂಜ್ ಸ್ವೀಕರಿಸಿದ್ದರು. ವಿಶೇಷ ಅಂದರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪುತ್ರ ವಿನೀಶ್ ಕೂಡ ಈ ಚಾಲೆಂಜ್ ಸ್ವೀಕರಿಸಿದ್ದು, ಅವರ ತಾಯಿ ವಿಜಯಲಕ್ಷ್ಮಿ ತಮ್ಮ ಟ್ವಿಟ್ಟರಿನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಏನಿದು ಚಾಲೆಂಜ್?
ಒಂದು ಟೇಬಲ್ ಮೇಲೆ ಒಂದು ಬಾಟಲಿ ಇಡಬೇಕು ಅದರ ಮುಚ್ಚಳವನ್ನು ಬಾಟಲ್ ಮೇಲೆ ಸಡಿಲವಾಗಿ ತಿರುಗಿ ಇಡಬೇಕು. ನಂತರ ಚಾಲೆಂಜ್ ಸ್ವೀಕರಿಸಿದವರು ಸ್ವಲ್ಪ ದೂರದಲ್ಲಿ ನಿಂತು ಒಂದು ಸುತ್ತು ತಿರುಗಿ ಕಾಲಿನಿಂದ ಬಾಟಲಿ ಕ್ಯಾಪನ್ನು ಒದಿಯಬೇಕು. ಈ ಪ್ರಕ್ರಿಯೆಯಲ್ಲಿ ಬಾಟಲಿ ಕೆಳಗೆ ಬೀಳಬಾರದು. ಹೀಗೆ ಬಾಟಲ್ ಬೀಳದಂತೆ ಕ್ಯಾಪ್ ಮಾತ್ರ ಕೆಳಗೆ ಬೀಳಿಸಿದರೆ ಈ ಚಾಲೆಂಜ್ ಗೆದ್ದಂತೆ.

https://twitter.com/actressharshika/status/1148450466511982592

Share This Article
Leave a Comment

Leave a Reply

Your email address will not be published. Required fields are marked *